ಬಂಟ್ವಾಳ : ಬಂಟ್ವಾಳ ತಾಲೂಕಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಖ್ಯಾತ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ ಭಾರೀ ಬೆಂಕಿ ಅವಘಡ ಸಂಭವಿಸಿದೆ.
ಬಿಸಿರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಇರುವ ಪ್ರೀತಂ ಎಂಬವರಿಗೆ ಸೇರಿದ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಕೊಠಡಿಯಲ್ಲಿ ಎಲೆಕ್ಟ್ರಾನಿಕ್ಸ್ ಜತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿತ್ತು.
ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಿಡಿದಿರ ಬಹುದೆಂಬ ಸಂಶಯ ವ್ಯಕ್ತವಾಗಿದೆ.
ದಾಸ್ತಾನು ಕೊಠಡಿಯಿಂದ ಹೊಗೆ ಹೊರ ಸೂಸುತ್ತಿರುವುದನ್ನು ಗಮನಿಸಿ ಸಾರ್ವಜನಿಕರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ.
ಸಾರ್ವಜನಿಕರು ಕೂಡಾ ಬೆಂಕಿಯನ್ನು ನಂದಿಸಲು ಕೈ ಜೋಡಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.