ಸುಬ್ರಹ್ಮಣ್ಯ: ರಸ್ತೆ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಅದೃಷ್ಟವಶಾತ್ ಕಾರು ಚಾಲಕ ಪಾರಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಲ್ಕುಂದದಲ್ಲಿ ನಡೆದಿದೆ.
ಬೆಂಗಳೂರಿನ ಟಾಟ ಕಂಪನಿ ಉದ್ಯೋಗಿ ಕಾರು ಚಾಲಕ ಅಜಿತ್ ಕುಮಾರ್ ಪೆರ್ಲಂಪ್ಪಾಡಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಅಜಿತ್ ಕುಮಾರ್‌ರವರು ತನ್ನ ಮನೆಯಿಂದ ಬೆಂಗಳೂರಿಗೆ ಹೋಗುವ ಸಂದರ್ಭ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು.
ಆದರೆ ಅದೃಷ್ಟವಶಾತ್ ಯಾವುದೇ ಅಪಾಯಗಳಿಲ್ಲದೆ ಅಜಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ