Connect with us

LATEST NEWS

ಕಟಪಾಡಿ ರಾಜ್ಯ ಹೆದ್ದಾರಿ ರಸ್ತೆಯ ಹೊಂಡದಲ್ಲಿ ರಾಶಿ ಕಸ-ದುರಸ್ತಿಗೆ ಸಾರ್ವಜನಿಕರು ಒತ್ತಾಯ

Published

on

ಉಡುಪಿ: ಜಿಲ್ಲೆಯಲ್ಲಿ ಸುರಿದ ಧಾರಕಾರವಾದ ಮಳೆಗೆ ಕಾಪು ತಾಲೂಕಿನ ಕಟಪಾಡಿ ಶಿರ್ವ ರಸ್ತೆ ಸಂಪೂರ್ಣ ಹದಗೆಟ್ಟಿದೆ.


ಕಟಪಾಡಿ ರೈಲ್ವೆ ಸೇತುವೆ ಬಳಿ ರಾಜ್ಯ ಹೆದ್ದಾರಿಯಲ್ಲಿ ಹೊಂಡ ಬಿದ್ದು ನಿತ್ಯ ಅಪಘಾತ ಸಂಭವಿಸುತ್ತಿದೆ.
ಸ್ಥಳೀಯ ತ್ಯಾಜ್ಯಗಳನ್ನು ತಂದು ಹೊಂಡಕ್ಕೆ ಸುರಿದಿದ್ದು ರಸ್ತೆ ತುಂಬ ಹರಡಿದೆ. ಇದು ಮತ್ತಷ್ಟು ಅಪಾಯಕ್ಕೆ ಕಾರಣವಾಗಿದೆ.

ಈ ಹಿನ್ನೆಲೆ ರಸ್ತೆ ತುರ್ತಾಗಿ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

DAKSHINA KANNADA

ಚಿನ್ನ ಕಡಿಮೆ ಬೆಲೆಗೆ ನೀಡುವವರ ಬಗ್ಗೆ ಎಚ್ಚರ; ಮಂಗಳೂರಿನಲ್ಲಿ ಅಂಗಡಿಯವರೊಬ್ಬರನ್ನು ವಂಚಿಸಲು ಯತ್ನ

Published

on

ಮಂಗಳೂರು : ಕೃಷಿ ಮಾಡುವಾಗ ಭೂಮಿಯಲ್ಲಿ ನಿಧಿ ಸಿಕ್ಕಿದೆ. ನಮಗೆ ತುರ್ತಾಗಿ ಹಣ ಬೇಕಾದ ಕಾರಣ ಕಡಿಮೆಯಲ್ಲಿ ಚಿನ್ನ ಕೊಡ್ತೇವೆ … ಹೀಗಂತ ಯಾರಾದರೂ ನಿಮ್ಮ ಬಳಿ ಬಂದು ಹೇಳಿದ್ರೆ ಎಚ್ಚರವಾಗಿರಿ.

ಯಾಕಂದ್ರೆ ಇಂತಹ ಕಥೆ ಹೇಳಿ ನಕಲಿ ಚಿನ್ನ ನೀಡಿ ವಂಚಿಸುವ ತಂಡವೊಂದು ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ. ನಗರದ ನಾಗುರಿ ಬಳಿ ಇದೇ ಕಥೆ ಹೇಳಿಕೊಂಡು ಅಂಗಡಿಯವರೊಬ್ಬರನ್ನು ವಂಚಿಸಲು ಪ್ರಯತ್ನಿಸಿದ್ದಾರೆ.

ಮಹಿಳೆ ಹಾಗೂ ನಾಲ್ವರು ಯುವಕರ ತಂಡ ಈ ಪ್ರಯತ್ನ ಮಾಡಿ ತಗಲಾಕೊಂಡಿದ್ದಾರೆ. ಮೊದಲಿಗೆ ಅಸಲಿ ಚಿನ್ನ ನೀಡಿ ಪರೀಕ್ಷಿಸಲು ಹೇಳಿದ್ದು ಪರೀಕ್ಷೆ ವೇಳೆ ಅದು ಅಸಲಿಯೇ ಆಗಿತ್ತು. 2 ಲಕ್ಷಕ್ಕೆ ಮತ್ತೊಂದು ಚಿನ್ನ ನೀಡಿದ್ದು ಅದು ನಕಲಿಯಾಗಿತ್ತು.

ಇದನ್ನೂ ಓದಿ: 23 ವರ್ಷದ ಹಿಂದಿ ಕಿರುತೆರೆ ನಟ ಸಾವು

ಆದರೆ ಇಂತಹ ವಂಚನೆ ಬಗ್ಗೆ ಮೊದಲೇ ಅನುಮಾನ ಇದ್ದ ಅಂಗಡಿಯವರು ಈ ಚಿನ್ನ ಕೂಡಾ ಪರೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಈ ವೇಳೆ ಬಂಡವಾಳ ಬಯಲಾಗುತ್ತದೆ ಎಂದು ನಾಲ್ವರು ಯುವಕರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆದರೆ ಜೊತೆಯಲ್ಲಿದ್ದ ಮಹಿಳೆಯನ್ನು ಅಂಗಡಿಯವರು ಹಿಡಿದಿಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಡಿಮೆ ಬೆಲೆಗೆ ಇಂತಹ ಮೋಸದ ಕಥೆ ಹೆಣೆದು ಚಿನ್ನದ ಆಸೆ ತೋರಿಸಿ ವಂಚಿಸೋ ದೊಡ್ಡ ತಂಡವೇ ಇಲ್ಲಿ ಕಾರ್ಯಾಚರಿಸ್ತಾ ಇದೆ. ಹೀಗಾಗಿ ಸಾರ್ವಜನಿಕರು ಇಂತವರ ಬಗ್ಗೆ ಎಚ್ಚರವಾಗಿರುವುದು ಒಳ್ಳೆಯದು.

 

Continue Reading

FILM

23 ವರ್ಷದ ಹಿಂದಿ ಕಿರುತೆರೆ ನಟ ಸಾವು

Published

on

ಮಂಗಳೂರು/ಮುಂಬೈ : ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟ್ರಕ್ ಚಾಲಕನ ವಿರುದ್ದ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುಂದಾಪುರ : ಕಾರು ಡಿ*ಕ್ಕಿ; ಮಹಿಳೆಗೆ ಗಂಭೀ*ರ ಗಾ*ಯ

‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಜೈಸ್ವಾಲ್ ಅವರು ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದರು.

‘ಹೊಸ ಕನಸುಗಳು ಮತ್ತು ಅಂತ್ಯವಿಲ್ಲದ ಸಾಧ್ಯತೆಗಳೊಂದಿಗೆ 2025ಕ್ಕೆ ಕಾಲಿಡುತ್ತಿದ್ದೇನೆ’ ಎಂದು ಜೈಸ್ವಾಲ್ ಅವರು ಹೊಸ ವರ್ಷದ ಪ್ರಯುಕ್ತ ಇನ್‌ಸ್ಟಾಗ್ರಾಮ್‌ನಲ್ಲಿ ಕೊನೆಯದಾಗಿ ಹಂಚಿಕೊಂಡಿದ್ದ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

Continue Reading

DAKSHINA KANNADA

ಖ್ಯಾತ ಡಾಲಿ ಚಾಯ್‌ವಾಲ ಮಂಗಳೂರಿಗೆ ಆಗಮನ

Published

on

ಮಂಗಳೂರು : ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಾಲಿ ಚಾಯ್ ವಾಲ ಅವರನ್ನು ಅದ್ದೂರಿಯಾಗಿ ಸ್ವಾಗತ ಕೊರಲಾಯಿತು.

 

ಮಂಗಳೂರಿನಲ್ಲಿ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟದಲ್ಲಿ ಈ ಬಾರಿ ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕಾರ್ಯಕ್ರಮದ ಮೊದಲ ದಿನ ಅವರು ಭಾಗವಹಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಈ ಐದು ದಿನಗಳ ಮಂಗಳೂರು ಸ್ಟ್ರೀಟ್‌ ಫುಡ್‌ ಫಿಯೆಸ್ಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಸಂಕ್ರಾಂತಿ ರಜೆ : ಮನೆ ಮಾಲಿಕ ಕಳ್ಳನಿಗೆ ಬರೆದಿಟ್ಟ ಲೆಟರ್ ವೈರಲ್

ತನ್ನ ಮಂಗಳೂರು ಭೇಟಿಯ ಕುರಿತು ಡಾಲಿ ಚಾಯ್‌ವಾಲ ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ‘ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. ಮಜಾ ಕರೇಂಗೆ .. ಚಾಯ್‌ ಪಿಯೇಂಗೆ’ ಎಂದು ಪೋಸ್ಟ್‌ ಹಾಕಿದ್ದರು.

ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್‌ ಗೇಟ್ಸ್‌ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್‌ ಹಂಚಿ ಕೊಂಡ ಬಳಿಕ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಪರಿಚಿತರಾಗಿದ್ದಾರೆ. ಅವರ ಮೂಲ ಹೆಸರು ಸುನಿಲ್‌ ಪಾಟೀಲ್‌. ಆದರೆ ಅವರು ಡಾಲಿ ಚಾಯ್‌ವಾಲ ಎಂದೇ ಪ್ರಸಿದ್ಧರಾಗಿದ್ದಾರೆ.

Continue Reading

LATEST NEWS

Trending

Exit mobile version