BANTWAL
ಮುಡಿಪುವಿನಲ್ಲಿ ಮಾನವ ಗ್ರಂಥಾಲಯ ಕಾರ್ಯಕ್ರಮ
Published
2 years agoon
By
Adminಬಂಟ್ವಾಳ: ಅಪ್ನಾ ದೇಶ್, ಮಾದರಿ ಗ್ರಾಮ ಅಭಿಯಾನ, ಮುಡಿಪು ಜನಶಿಕ್ಷಣ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಾನವ ಗ್ರಂಥಾಲಯ ಕಾರ್ಯಕ್ರಮ ಮುಡಿಪು ಜನಶಿಕ್ಷಣ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಯಮಿ ರಮೇಶ್ ಶೇಣವ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹೈದರ್ ಕೈರಂಗಳ ಮಾನವ ಗ್ರಂಥಾಲಯ ಕಾರ್ಯಕ್ರಮ ಉದೇಶಿಸಿ ಮಾತನಾಡಿ ‘ಹಿಂದೆಲ್ಲಾ ಜನರ ನಡುವೆ ಪ್ರೀತಿ, ವಿಶ್ವಾಸ ಎನ್ನುವುದಿತ್ತು.
ಜಾತಿ, ಧರ್ಮದ ಅಡ್ಡಗೋಡೆ ಇರಲಿಲ್ಲ, ಇದರಿಂದಾಗಿ ಪರಿಸರದಲ್ಲಿ ಸೌಹಾರ್ದ ವಾತಾವರಣ, ನೆರೆಹೊರೆಯವರೊಂದಿಗೆ ಕಷ್ಟ-ಸುಖದಲ್ಲಿ ಪಾಲ್ಗೊಳ್ಳುವ ಮಾನವೀಯತೆ ಇತ್ತು.
ಜೀವನದಲ್ಲಿ ಕಷ್ಟಗಳು ಸಾಮಾನ್ಯ, ಆದರೆ ಅದಕ್ಕೆ ಎದೆಗುಂದದೆ ಮುನ್ನುಗ್ಗಬೇಕು. ಆದರೆ ಹಿಂದಿನ ಕಾಲದಲ್ಲಿದ್ದಷ್ಟು ಕಷ್ಟಗಳು, ಕಾರ್ಪಣ್ಯ ಇಂದು ಇಲ್ಲ. ಯಾವುದೇ ಸಂದರ್ಭದಲ್ಲಾದರೂ ಉದಾಸೀನ ಭಾವನೆ ತೋರಿದತೆ ಅನಾಹುತಗಳು ಹೆಚ್ಚಾಗಲಿದೆ’ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ರಾಧಾಕೃಷ್ಣ ರೈ ಉಮಿಯ, ಬಾಳೆಪುಣಿ ಗ್ರಾಮ ಪಂಚಾಯಿತಿ ಸದಸ್ಯ ನಾಸೀರ್ ನಡುಪದವು, ಹಿರಿಯ ರಂಗಭೂಮಿ ಕಲಾವಿದ ಶಿವಪ್ರಸಾದ್ ಆಳ್ವ, ಬಾಳೆಪುಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಝಿಯಾ, ಸದಸ್ಯ ಜನಾರ್ದನ ಕುಲಾಲ್, ಪಜೀರ್ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಇಮ್ತಿಯಾಝ್, ಹಿರಿಯ ಮುಖಂಡರಾದ ಪದ್ಮನಾಭ ನರಿಂಗಾನ, ಪುಂಡರಿಕಾಕ್ಷ, ಇಸ್ಮಾಯಿಲ್ ಬಾಳೆಪುಣಿ, ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ,ನರೇಗಾದ ಮಾಜಿ ಒಂಬುಡ್ಸ್ ಮೆನ್ ಶೀನ ಶೆಟ್ಟಿ
ಸಾಹಿತಿ ಚಂದ್ರಶೇಖರ ಪಾತೂರು, ಅಬೂಬಕ್ಕರ್ ಜಲ್ಲಿ, ಸದಾನಂದ, ಇಕ್ಬಾಲ್ ಕೈರಂಗಳ, ಸೆಲ್ಕೋ ಮಂಗಳೂರು ವ್ಯವಸ್ಥಾಪಕ ರವೀಣ ಬಿ.ಕುಲಾಲ್, ಪ್ರವೀಣ್, ಬಂಟ್ವಾಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
BANTWAL
ಬ್ರೇಕಪ್ ಆದ್ರೂ ಬಿಡದ ಪಾಗಲ್ ಪ್ರೇಮಿ; ನಿಮಿಷಕ್ಕೊಮ್ಮೆ ಗೂಗಲ್ ಪೇ ಮಾಡಿ ಹಿಂಸೆ..!
Published
2 days agoon
23/11/2024ಪ್ರೀತಿ ಒಂದು ಮಾಯೆ. ಯುವಕ – ಯುವತಿಯ ನಡೆವಿನ ಅನ್ಯೋನ್ಯತೆ, ಹೊಂದಿಕೊಳ್ಳುವುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತವೆ. ಪ್ರೀತಿ ಎಂದರೆ ಕೇವಲ ಆಕರ್ಷಣೆಯಲ್ಲ. ಅಥವಾ ಒಂದು ಹೆಣ್ಣಿನ ಅಂಗಾಂಗ ನೋಡಿ ಉಕ್ಕಿ ಬರುವ ಭಾವವೂ ಅಲ್ಲ. ಅದೊಂದು ಪವಿತ್ರ ಬಂಧ. ಎಲ್ಲಿ ಸರಿಯಾದ ಹೊಂದಾಣಿಕೆ ಇರುವುದಿಲ್ಲವೋ ಅಲ್ಲಿ ಬ್ರೇಕಪ್ ಆಗುತ್ತದೆ. ಅಷ್ಡು ಮಾತ್ರವಲ್ಲದೇ ಯಾವುದೋ ಒತ್ತಡ, ಕೌಟುಂಬಿಕ ಕಲಹಗಳಿಂದಲೂ ಪ್ರೇಮಿಗಳ ಸಂಬಂಧಕ್ಕೆ ಬಿರುಕು ಬೀಳುತ್ತದೆ.
ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ, ಆ ನೋವಿನಿಂದ ಹೊರಬರುವುದಂತೂ ತುಂಬಾ ಕಷ್ಟ. ಕೆಲವರು ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಬ್ರೇಕಪ್ ಬಳಿಕ ಮಾಜಿ ಪ್ರಿಯತಮೆಗೆ ವಿಚಿತ್ರವಾಗಿ ಹಿಂಸೆ ನೀಡಿದ್ದಾನೆ ಎಂದು ಉಲ್ಲೇಖವಾಗಿದೆ. ಈ ಕುರಿತು ಸ್ವತಃ ಯುವತಿಯೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.
ಬ್ರೇಕಪ್ ಬಳಿಕ ಯುವತಿಯು ಮಾಜಿ ಪ್ರಿಯಕರನ ನಂಬರನ್ನು ಎಲ್ಲ ಕಡೆಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಅವನು ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇ ಆಯ್ಕೆ ಮಾಡ್ಕೊಂಡಿದ್ದಾನೆ. ಬ್ರೇಕಪ್ ನಂತರ ಅವನು ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡುತ್ತಿದ್ದಾನಂತೆ.
ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiii ಯಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡುತ್ತಾರಾ ? ಎಂದೆನಿಸುತ್ತದೆ.
ಈ ಪೋಸ್ಟ್ ಒಂದು ಲಕ್ಷದವರೆಗೆ ವೀಕ್ಷಣೆ ಕಂಡಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡಿದ್ದಾರೆ.ಒಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.
ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.
ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.
ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್ ಸಪ್ವಾನ್( 25), ಮಹಮ್ಮದ್ ರಿಜ್ವಾನ್ (25), ಇರ್ಪಾನ್(27), ಅನೀಸ್ ಅಹಮ್ಮದ್ (19), ನಾಸೀರ್ (27), ಇಬ್ರಾಹಿಂ, ಶಾಕೀರ್ (18)ನನ್ನು ಬಂಧಿಸಲಾಗಿದೆ.
ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್ ಮುಸ್ತಾಫ್ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ
ಮಹಮ್ಮದ್ ಮುಸ್ತಾಫ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್ ಮುಸ್ತಾಫ್ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru4 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION5 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS2 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!