Wednesday, July 28, 2021

ನೀರುಮಾರ್ಗ ಭಜನಾ ಮಂದಿರದ ಕಾಣಿಕೆ ಡಬ್ಬಿ ಕಳವು: ಸಿಸಿಟಿವಿಯಲ್ಲಿ ಕೃತ್ಯ ಬಯಲು

ಮಂಗಳೂರು: ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಲ್ಲಿ ನಿನ್ನೆ ನಡೆದಿದೆ.


ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು ದುಷ್ಕರ್ಮಿಗಳು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ 3500 ರೂ. ಅಧಿಕ ಹಣ ಇತ್ತೆಂದು ತಿಳಿದು ಬಂದಿದೆ. ದುಷ್ಕರ್ಮಿಗಳ ಚಲನವಲನಗಳ ಸುಮಾರು 45 ನಿಮಿಷಗಳ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳವು ಕೃತ್ಯದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಜಾನ್ಸನ್ ಮತ್ತು ಸಿಬ್ಬಂದಿ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದೆ. ಸಿಸಿಟಿವಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...