Monday, January 24, 2022

ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..!ಗ

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..!

ಚೆನ್ನೈ: ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಗೆ ನಿವಾರ್ ಚಂಡಮಾರುತ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಗಂಟೆಗೆ 120-130ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು,ತಮಿಳುನಾಡು ಪುದುಚೇರಿಯಲ್ಲಿ ಭಾರೀ ಮಳೆ ಬೀಳುವ ಸಂಭವವಿದೆ.

ಅಲ್ಲಲ್ಲಿ 80ಕ್ಕೂ ಅಧಿಕ ಮರಗಳು ಧರೆಗುರುಳಿವೆ.ರಾಜ್ಯದ ಹಲವೆಡೆಗಳಲ್ಲಿ  ಸಾರ್ವತ್ರಿಕ  ರಜೆ ಘೋಷಿಸಲಾಗಿದೆ.  ನಿವಾರ್ ಕಾರೈಕಲ್ಲು ಮತ್ತು ಮಾಮಲ್ಲಪುರಂ ನಡುವೆ  ಹಾದುಹೋಗಲಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಚಂಡ ಮಾರುತದ ಸವಾಲುಗಳನ್ನು ಎದುರಿಸಲು ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸಜ್ಜಾಗಿದ್ದಾರೆ. ಆಂದ್ರ ಪ್ರದೇಶದ ಮೇಲೆ ಗತಿ ಚಂಡಮಾರುತ ಕೂಡ ದಾಳಿ ನಡೆಸಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ..

Hot Topics

ಸುಳ್ಯ: ಅಂಗಡಿಗೆ ಬಂದ ಗ್ರಾಹಕನಿಗೆ ಮಾಲಕನಿಂದ ಹಲ್ಲೆ- ದೂರು ದಾಖಲು

ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...

ಕವಿ ಮುದ್ದಣ ಜನ್ಮದಿನಾಚರಣೆ ಪ್ರಯುಕ್ತ 150 ರೂ. ನಾಣ್ಯ ಬಿಡುಗಡೆಗೊಳಿಸಿದ ಸಂಸದ ನಳಿನ್‌

ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅನಾವರಣ.ಬಳಿಕ...

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...