DAKSHINA KANNADA
ತೌಕ್ತೇ ಚಂಡಮಾರುತ- ಸಮುದ್ರ ಮಧ್ಯೆ ಸಿಲುಕಿದ್ದ 9ಮಂದಿಯ ರಕ್ಷಣೆ: ಆಸ್ಪತ್ರೆಗೆ ಜನಪ್ರತಿನಿಧಿಗಳ ಭೇಟಿ ..!
Published
4 years agoon
By
Adminಮಂಗಳೂರು: ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಸಮುದ್ರ ಮಧ್ಯೆ ಸುಮಾರು 40 ಗಂಟೆ ಜೀವ ಕೈಲಿ ಹಿಡಿದು ಕುಳಿತ್ತಿದ್ದ ಕೋರಮಂಡಲ್ ಟಗ್ನ ಎಲ್ಲಾ 9 ಸಿಬ್ಬಂದಿಯನ್ನೂ ಸುರಕ್ಷಿತವಾಗಿ ಮಂಗಳೂರಿಗೆ ಕರೆತರಲಾಗಿದೆ. ಅವರನ್ನು ನವಮಂಗಳೂರು ಬಂದರು ಮಂಡಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಸ್ತುತ ಎಲ್ಲಾ 9 ಮಂದಿಯೂ ಕಡಲಿನ ಅಲೆಗಳ ಹೊಡೆತಕ್ಕೆ ಸಿಲುಕಿ ಮಾನಸಿಕ ಸ್ಥೈರ್ಯವನ್ನು ಕಳೆದುಕೊಂಡಿದ್ದು, ಇದೀಗ ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಮೊದಲು ಅವರ ಚೇತರಿಕೆಗೆ ಆದ್ಯತೆ ನೀಡಲಾಗಿದೆ. ಅವರು ಚೇತರಿಸಿಕೊಂಡ ಬಳಿಕ ಈ ಘಟನೆಗೆ ಮೂಲ ಕಾರಣವೇನು ಎನ್ನುವುದನ್ನು ಹಿರಿಯ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಸಂತ್ರಸ್ತರನ್ನು 24 ಗಂಟೆಗಳ ಕಾಲ ನಿರಂತರ ನಿಗಾದಲ್ಲಿ ಇರಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.
ಮೊದಲು ಇವರೆಲ್ಲರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ರೋಗಿಗಳು ದಾಖಲಾಗಿರುವ ಎನ್ಎಂಪಿಟಿ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು,ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಭರತ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು. ಇದೇ ವೇಳೆ ಎನ್.ಎಂಪಿಟಿ ಅಧ್ಯಕ್ಷ ಡಾ. ವೆಂಕಟ್ರಮಣ ಅಕ್ಕರಾಜು ಭೇಟಿ ನೀಡಿ, ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದಾರೆ.
ಅಲ್ಲದೆ ಆಸ್ಪತ್ರೆಯ ಸೂಕ್ತ ವ್ಯವಸ್ಥೆಗಳನ್ನು ಪರಿಶೀಲಿಸಿ ವೈದ್ಯರಿಂದ ಮಾಹಿತಿ ಪಡೆದರು. ಇಂಡಿಯನ್ ಕೋಸ್ಟ್ಗಾರ್ಡ್ ಮತ್ತು ಇಂಡಿಯನ್ ನೇವಿ ಜಂಟಿ ಕಾರ್ಯಾಚರಣೆ ಮೂಲಕ ಎಲ್ಲಾ 9 ಮಂದಿ ಸಿಬ್ಬಂದಿಗಳನ್ನು ಇಂದು ಬೆಳಿಗ್ಗೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ…
Ancient Mangaluru
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
Published
9 hours agoon
27/11/2024By
NEWS DESKಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರಿನ ಮೂಡಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಮೂಡಬಿದ್ರೆಯ ಲಾರೆನ್ಸ್ 20 ವರ್ಷ, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ 19 ವರ್ಷ, ಹಾಗೂ ಬಂಟ್ವಾಳದ ವಗ್ಗ ಗ್ರಾಮದ ಜೈಸನ್ 19 ವರ್ಷ ಈ ಮೂವರು ಹೋಗಿದ್ದಾರೆ. ಮದ್ಯಾಹ್ನದ ಊಟವನ್ನು ಮುಗಿಸಿದ ಇವರು ಜೊತೆಯಾಗಿ ಬರ್ಕಜೆ ಸಮೀಪದ ಡ್ಯಾಂ ಬಳಿ ನದಿಯಲ್ಲಿ ಈಜಲು ಹೋಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಮೂವರೂ ನೀರುಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ನದಿಗೆ ದುಮಿಕಿದ್ದಾರೆ. ಆದ್ರೆ ಮೂವರನ್ನು ನದಿಯಿಂದ ಮೇಲೆತ್ತುವ ಮೊದಲೇ ಇ*ಹಲೋಕ ತ್ಯಜಿಸಿದ್ದಾರೆ. ಮೂವರೂ ಮಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.
ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಾಡುಮಠದ ಬಳಿ ಅಟೋ ಹಾಗೂ ಬೈಕ್ ಒಂದರ ನಡುವೆ ಅ*ಪಘಾತ ಸಂಭವಿಸಿ ಮೂವರು ಗಾ*ಯಗೊಂಡಿದ್ದಾರೆ.
ಸಾಲೆತ್ತೂರಿನ ಅಟೋ ಚಾಲಕ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಅವರು ಗಾ*ಯಗೊಂಡಿದ್ದಾರೆ. ಅ*ಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾ*ಯಗಳಾಗಿದ್ದು, ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿತ್ತು. ಇದೇ ವೇಳೆ ಸ್ಥಳದಲ್ಲಿದ್ದ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಗಾ*ಯಾಳುಗಳ ನೆರವಿಗೆ ಧಾವಿಸಿ ಬಂದಿದ್ದಾರೆ.
ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಮೂವರು ಗಾ*ಯಾಳುಗಳು ಕೂಡಾ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವನ ಸ್ಥಿತಿ ಗಂ*ಭೀರವಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಅ*ಪಘಾತದ ಕುರಿತಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ; ದಾಳಿಯಲ್ಲಿ ಮ*ಡಿದ ಯೋಧರಿಗೆ ಗೌರವಾರ್ಪಣೆ
Published
13 hours agoon
27/11/2024ಮಂಗಳೂರು: ಮುಂಬೈ ನಗರದ ಮೇಲೆ ಭಯೋತ್ಪಾದಕರು ನಡೆಸಿದ ದಾ*ಳಿಯ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿ ಪ್ರಾ*ಣವನ್ನು ಬ*ಲಿದಾನ ಮಾಡಿದ ಹುತಾತ್ಮರನ್ನು ಸ್ಮರಿಸುವ ರಾಷ್ಟ್ರಜಾಗೃತಿಯ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮವು ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ಜರುಗಿತು.
ಕದ್ರಿ ಯುದ್ಧ ಸ್ಮಾರಕದ ಬಳಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಉಪಕುಲಪತಿ ವಂದನೀಯ ಡಾ ಪ್ರವೀಣ ಮಾರ್ಟಿಸ್ ವಹಿಸಿದ್ದರು. ಡಾ ವಾದಿರಾಜ ಗೋಪಾಡಿ ದಿಕ್ಸೂಚಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಎನ್‌ಎಂ ಪಿಎ ಸಿಐಎಸ್ಎಫ್‌ನ ಡೆಪ್ಯುಟಿ ಕಮಾಂಡೆಂಟ್ ರಾಜೇಂದ್ರ ಪ್ರಸಾದ್ ಪಾಠಕ್, ಕಾರ್ಯಕ್ರಮ ಸಂಘಟಕ ಡಾ ಶೇಷಪ್ಪ, ಡಾ ನಿಶ್ಚಿತ್ ಡಿ ಸೋಜಾ, ಹಿರಿಯ ಪೊಲೀಸ್ ಅಧಿಕಾರಿ ಅಜ್ಜತ್ ಆಲಿ, ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ, ನ್ಯಾಯವಾದಿ ಬಿ. ನಯನ ಪೈ. ವಿದುಷಿ ಗುರು ಶ್ರೀಮತಿ ಸೌಮ್ಯ ಸುಧೀಂದ್ರ ರಾವ್, ಕಾರ್ಪೋರೇಟರ್ ಶಕೀಲಾ ಕಾವ ಮೊದಲಾದವರಿದ್ದರು. ನೃತ್ಯಸುಧಾ ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯರಿಂದ ಹುತಾತ್ಮ ಸೈನಿಕರಿಗೆ ನೃತ್ಯನಮನ ನಡೆಯಿತು.
LATEST NEWS
ಸರಕಾರಿ ಕೆಲಸದ ಹುಡುಗನೇ ಬೇಕೆಂದು ಮಂಟಪದಲ್ಲೇ ವರನನ್ನು ತಿರಸ್ಕರಿಸಿದ ವಧು !!
ನಂಬಿದವರ ಕೈ ಬಿಡದ ಪದಾಳ ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ
ನಿಮ್ಮ ನಾಯಿಗಳನ್ನು ಪಾರ್ಕ್ಗೆ ಕೊಂಡೊಯ್ಯುತ್ತೀರಾ? ಹೈಕೋರ್ಟ್ ಹೊಸಮಾರ್ಗಸೂಚಿ ಗಮನಿಸಿ!
ಐಪಿಎಲ್ ಹರಾಜು ಪ್ರಕ್ರಿಯೆ ನಡೆಸಿ ಕೊಟ್ಟ ಈ ಮಹಿಳೆ ಯಾರು ?
ಎಟಿಎಂ ಹೊತ್ತೊಯ್ದರೂ ಸಿಗದ ಹಣ; ನೀಲಗಿರಿ ತೋಪಿನಲ್ಲಿ ಯಂತ್ರ ಬಿಟ್ಟು ಪರಾರಿಯಾದ ಖದೀಮರು
ಬೆಚ್ಚಿ ಬೀಳಿಸಿದ ಯುವತಿ ಕೊ*ಲೆ ಪ್ರಕರಣ; ಪ್ರೇಯಸಿಯ ಶ*ವದೊಂದಿಗೆ ಒಂದು ದಿನ ಕಳೆದಿದ್ದ ಯುವಕ!
Trending
- Baindooru6 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION7 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- BIG BOSS5 days ago
BBK11: ಕಿಚ್ಚನ ಪಂಚಾಯ್ತಿಯಲ್ಲಿ ರಜತ್ಗೆ ಫುಲ್ ಕ್ಲಾಸ್; ಹೊರ ಹೋಗೋಕೆ ಬಾಗಿಲು ಓಪನ್ ಇದೆ ಎಂದ ಬಾದ್ ಷಾ!
- Baindooru5 days ago
3ಕ್ಕೆ 3 ಸೋಲು.. ಮನೆಯಲ್ಲಿನ TV ಒಡೆದು ಹಾಕಿದ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ