Connect with us

    BANTWAL

    ಬಂಟ್ವಾಳದಲ್ಲಿ ನೂರು ರೂಪಾಯಿಗೆ ಗಂಡ- ಹೆಂಡತಿ ಜಗಳ : ಹಲ್ಲೆಯಲ್ಲಿ ವ್ಯಕ್ತಿ ಸಾವು – ಆರೋಪಿ ಬಾವನ ಬಂಧನ..!  

    Published

    on

    ಬಂಟ್ವಾಳ : ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ಉಂಟಾದ ವೈಮನಸ್ಸಿನಿಂದಾಗಿ ತನ್ನ ಬಾವನಿಂದಲೇ ಹಲ್ಲೆಗೆ ಒಳಗಾದ ವ್ಯಕ್ತಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ಎಂಬಲ್ಲಿ ನಡೆದಿದ್ದು ಆರೋಪಿ ಬಾವನನ್ನು ಪೊಲೀಸರು ಬಂಧಿಸಿದ್ದಾರೆ.

    ತೆಂಕಕಜೆಕಾರಿನ ಬರಮೇಲು ನಿವಾಸಿ 47 ವರ್ಷದ ಕೇಶವ ಪೂಜಾರಿ ಮೃತಪಟ್ಟ ದುರ್ದೈವಿಯಾಗಿದ್ದು, ಅವರ ಬಾವ  ಮಣಿನಾಲ್ಕೂರು ಗ್ರಾಮದ 45 ವರ್ಷದ ಅಶೋಕ್ ಯಾನೆ ಚಂದಪ್ಪ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ.

    ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ವೊಂದರಲ್ಲಿ ಅಡಿಗೆ ಕೆಲಸ ಮಾಡಿಕೊಂಡಿದ್ದು,ಕಳೆದ ಜನವರಿ 31 ರಂದು ಮನೆಗೆ ಬಂದ ಕೇಶವ ಪೂಜಾರಿ ತಮ್ಮ ಸಂಬಳದ ಹಣವನ್ನು ಪತ್ನಿ ಪ್ರೇಮಾ ಅವರಲ್ಲಿ ನೀಡಿದ್ದಾರೆ.

    ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಪ್ರೇಮಾ ಅವರು ಈ ವಿಚಾರವನ್ನು  ತನ್ನ ಅಣ್ಣ ಅಶೋಕ್ ಯಾನೆ ಚಂದಪ್ಪ ಪೂಜಾರಿಗೆ ತಿಳಿಸಿದ್ದಾರೆ.

    ಮನೆಗೆ ಬಂದ ಅಶೋಕ್ ಯಾನೆ ಚಂದಪ್ಪ ಪೂಜಾರಿ ಕೇಶವ ಪೂಜಾರಿ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿದೆ.

    ತಕ್ಷಣ ಅವರನ್ನು ತಾಯಿ ಲೀಲಾ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಔಷಧಿ ಪಡೆದು, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಬಳಿಕ ಕೇಶವ ಪೂಜಾರಿ ಅವರಿಗೆ ಫೆಬ್ರವರಿ .8ರಂದು  ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ.ಮನೆಮಂದಿ   ಅವರನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

    ಘಟನೆ ಬಗ್ಗೆ ನೆರೆಹೊರೆಯವರು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಪುಂಜಾಲಕಟ್ಟೆ ಪೊಲೀಸರಿಗೆ ಮಾಹಿತಿ ನೀಡಿ ಶವಪರೀಕ್ಷೆ ಮಾಡಿಸಲು ಸೂಚಿಸಿದ್ದಾರೆ.

    ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ತಿಳಿದುಬಂದಿದೆ.

    ಪ್ರಕರಣ ದಾಖಲಿಸಿಕೊಂಡ ಸಿಐ ಶಿವಕುಮಾರ್ ಮತ್ತು ತಂಡ ಆರೋಪಿಯನ್ನು ಫೆಬ್ರವರಿ 21 ರಂದು ಮಂಗಳೂರಿನ ಬಜಪೆ ವ್ಯಾಪ್ತಿಯ ಹೊಟೇಲ್‌ನಲ್ಲಿ ಬಂಧಿಸಿದ್ದಾರೆ.

    ಬಳಿಕ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ …

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending