Friday, July 1, 2022

ಪತ್ನಿಯ ಕತ್ತು ಸೀಳಿ ಕೊಲೆಗೈದ ತಾನು ಕುತ್ತಿಗೆ ಕೊಯ್ದುಕೊಂಡ ಪತಿ: ಅಡ್ಡ ಬಂದ ಮಗನಿಗೂ ಇರಿತ

ಆನೇಕಲ್: ಪತಿಯೊಬ್ಬ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ, ಬಳಿಕ ತಾನೂ ಕೂಡ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಯಡವನಹಳ್ಳಿಯಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ನಡೆದಿದೆ. ಇದೇ ವೇಳೆ ಅಡ್ಡಬಂದ ಮಗನಿಗೂ ಕೂಡ ವ್ಯಕ್ತಿಯು ಚಾಕುವಿನಿಂದ ಇರಿದಿದ್ದಾನೆ.


ಆನೇಕಲ್ ತಾಲೂಕಿನ ಯಡವನಹಳ್ಳಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬೆಳ್ಳಂಬೆಳಗ್ಗೆ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಮನೆಯಲ್ಲಿ ಮಲಗಿದ್ದಾಗ ಪತ್ನಿ ಲಾವಣ್ಯ (30)ಳನ್ನು ಪತಿ ಸಂಪತ್ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಆಗ ಅಡ್ಡ ಬಂದ ಮಗನಿಗೂ ಚಾಕುವಿನಿಂದ ಇರಿದಿದ್ದು,

10 ವರ್ಷದ ಬಾಲಕ ಬಾರ್ಗವ್ ಕೈಗೆ ಗಾಯವಾಗಿದೆ.ಪತ್ನಿ ಕೊಂದ ಬಳಿಕ ಸಂಪತ್ ತಾನೂ ಕತ್ತು ಕುಯ್ದುಕೊಂಡು ಮನೆಯ ಮೊದಲನೇ ಮಹಡಿಯಿಂದ ಹೊರಗೆ ಓಡಿ ಬಂದಿದ್ದಾನೆ. ಮನೆಯ ಎದುರಿನ ಚರಂಡಿ ಬಳಿ ಬಿದ್ದು ಒದ್ದಾಡುತ್ತಿದ್ದ ಸಂಪತ್​ನನ್ನು ಕಂಡ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತೀವ್ರ ಗಾಯವಾಗಿರುವುದರಿಂದ ಆತ ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.
ಕಳೆದ ಕೆಲ ದಿನಗಳಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಸಂಪತ್​ ದಿನನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ.

ನಿನ್ನೆ ಲಾವಣ್ಯಳ ತವರು ಮನೆಯವರು ಬಂದು ರಾಜಿ ಪಂಚಾಯಿತಿ ಮಾಡಿದ್ದರು. ಕುಡಿತದ ವಿಚಾರಕ್ಕೆ ಇಂದೂ ಕೂಡ ಜಗಳ ನಡೆದಿರುವ ಸಾಧ್ಯತೆ ಇದ್ದು, ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ.ಸಂಪತ್ ಹಾಗೂ ಲಾವಣ್ಯ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಎಂ. ಮಲ್ಲೇಶ್, ಪೊಲೀಸ್​ ಇನ್ಸ್​ಪೆಕ್ಟರ್​ ಕೆ. ವಿಶ್ವನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...