ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹೆಬ್ರೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ನಡೆದಿದೆ.
ಜಯಮ್ಮ (52) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (58) ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಕೆಲ ವರ್ಷಗಳ ಹಿಂದೆ ಜಯಮ್ಮ ಅವರನ್ನು ನಾಗರಾಜ್ ಎರಡನೇ ಮದುವೆಯಾಗಿದ್ದ.
ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಪತ್ನಿ ಜೊತೆ ನಾಗರಾಜ್ ಗಲಾಟೆ ಮಾಡಿಕೊಡಿದ್ದನಂತೆ. ಈ ಗಲಾಟೆ ವೇಳೆ ಸಮಯದಲ್ಲಿ ಸ್ಕೂಡ್ರೈವರ್‌ನಿಂದ ಪತ್ನಿಗೆ ಮನಬಂದಂತೆ ಚುಚ್ಚಿ ಕೊಲೆಗೈದಿದ್ದಾನೆ.
ಅಲ್ಲದೇ ಆ ಬಳಿಕ ಮನೆ ಹಿಂಬದಿ ತೆಗೆಯಲಾಗಿದ್ದ ಬಾತ್ ರೂಮ್ ಫಿಟ್‌ಗೆ ಮೃತದೇಹ ಎಸೆದಿದ್ದಾನೆ. ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಟ್ಟೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,
ಮೃತದೇಹವನ್ನ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಘಟನೆ ಕುರಿತಂತೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.