ಫೋನ್ ಮೂಲಕವೇ ತ್ರಿವಳಿ ತಲಾಖ್ ನೀಡಿದ ಪತಿ;ಪೊಲೀಸರಿಗೆ ದೂರು ನೀಡಿದ ಮಹಿಳೆ..!
ನವದೆಹಲಿ: ವಿದೇಶದಲ್ಲಿದ್ದುಕೊಂಡೇ ಮೊಬೈಲ್ ಫೋನ್ ಮೂಲಕ ತ್ರಿವಳಿ ತಲಾಖ್ ನೀಡಿದ್ದಾರೆ. ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು’ ಎಂದು 20 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹಿಳೆಯು ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಉತ್ತರ) ಅವರಿಗೆ ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಸಲು ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ದೂರಿನ ಪ್ರಕಾರ, ಮಹಿಳೆ ಮೂರು ವರ್ಷದ ಹಿಂದೆ, ಖುಷಿನಗರ್ ನಿವಾಸಿ 28 ವರ್ಷದ ವ್ಯಕ್ತಿ ಜೊತೆ ಮದುವೆಯಾಗಿದ್ದು, ದಂಪತಿಗೆ ಗಂಡು ಮಗುವಿದೆ. ಪತಿ ಸದ್ಯ ಸೌದಿ ಅರೇಬಿಯದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದು ಬಂದಿದೆ.
ಪತಿಯ ಸಹೋದರಿಯರು ಆಗಾಗ್ಗೆ ಹೆಚ್ಚಿನ ವರದಕ್ಷಿಣೆಗೆ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಪತಿಯ ಸಹೋದರನೊಬ್ಬ ಅತ್ಯಾಚಾರ ನಡೆಸಲೂ ಯತ್ನಿಸಿ ಹಲ್ಲೆಗೈದಿರುವುದಾಗಿ ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.