Friday, July 1, 2022

ಮೂಲ್ಕಿ: ಪತ್ನಿ ಮತ್ತು ಮಕ್ಕಳನ್ನು ಬಾವಿಗೆ ತಳ್ಳಿದ ಪ್ರಕರಣ- ಬದುಕುಳಿದ ತಂದೆಯ ಬಂಧನ

ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಹಿತೇಶ್ ಶೆಟ್ಟಿಗಾರ್ ಬಂಧಿತ ಆರೋಪಿ

ನಿನ್ನೆ ಸಂಜೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುವಿನಲ್ಲಿ ಸಂಜೆ ಈ ದುರ್ಘಟನೆ ನಡೆದಿತ್ತು. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆ ಬದಿಯಲ್ಲಿ ತೆಂಗಿನಕಾಯಿ,

ಹಲಸು ವ್ಯಾಪಾರ ಮಾಡುತ್ತಿದ್ದು ಪತ್ನಿ ಲಕ್ಷೀ ಬೀಡಿ ಕಟ್ಟುತ್ತಿದ್ದು ಕಳೆದ ಒಂದು ವಾರದಿಂದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು.

ನಿನ್ನೆ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದಾಗ ಗಂಡ ಹಿತೇಶ್ ಶೆಟ್ಟಿಗಾರ್ ಬಳಿ ಮಕ್ಕಳು ಎಲ್ಲಿ ಎಂದು ವಿಚಾರಿಸಿದಾಗ, ಎಲ್ಲೂ ಅಡಗಿರಬಹುದು ಎಂದು ಹೇಳಿದ್ದಾನೆ,

ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಣೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣ ಸ್ಥಳೀಯರು ಬಂದು ಐವರನ್ನು ಮೇಲಕ್ಕೆತ್ತಿದ್ದು, ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ-ತಾಯಿ ಬದುಕುಳಿದಿದ್ದಾರೆ.

ಇಂದು ಮೂವರು ಮಕ್ಕಳ ಮರಣೋತ್ತರ ಪರೀಕ್ಷೆ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...

ವಿಟ್ಲದಲ್ಲಿ ಧಾರಾಕಾರ ಮಳೆ: ಜಲಾವೃತಗೊಂಡ ರಸ್ತೆ-ವಾಹನಗಳ ಬದಲಿ ಸಂಚಾರ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು...