Connect with us

    LATEST NEWS

    ಹೆಂಡತಿಯನ್ನು ಲೇ…ಹೋಗೇ…ಬಾರೇ…ಕರೆದರೆ ಶಿಕ್ಷಾರ್ಹ ಅಪರಾಧ

    Published

    on

    ಬೆಂಗಳೂರು: ಇನ್ನು ಮುಂದೆ ಗಂಡಸರು ತಮ್ಮ ಹೆಂಡತಿಯನ್ನು ಮನೆಯಲ್ಲಾಗಲೀ ಸಾರ್ವಜನಿಕ ಸ್ಥಳಗಳಲ್ಲಾಗಲಿ ಲೇ…ಹೋಗೇ…ಬಾರೇ…ಎಂದು ಕರೆಯುವಂತಿಲ್ಲ. ಮನೆಯೊಳಗಿನ ಪುಟ್ಟ ಹೆಣ್ಣುಮಗುವಿನಿಂದ ಹಿಡಿದು ವಯಸ್ಸಾದ ಹಿರಿಯಜ್ಜಿಯವರಗೆ ಏಕವಚನ ಬಳಸುವಂತಿಲ್ಲ. ಈ ಕಾನೂನು 2005ನೇ ಇಸವಿಯಿಂದಲೇ ಜಾರಿಯಲ್ಲಿದೆ.


    ಲಾಕ್​ ಡೌನ್ ಸಂದರ್ಭದಲ್ಲಿ ಗೃಹ ಹಿಂಸೆ ಪ್ರಕರಣಗಳ ಪ್ರಮಾಣ ಶೇಕಡಾ 15ರಿಂದ 20ರಷ್ಟು ಹೆಚ್ಚಾಗಿದೆ. ಈ ಬಗೆಯ ಹಿಂಸೆಗಳಿಂದ ಮಹಿಳೆಯರನ್ನು ರಕ್ಷಿಸುವ ಉದ್ದೇಶದಿಂದ ಅಧಿನಿಯಮ ರೂಪಿಸಲಾಗಿದೆ.

    ಗಂಡಿನಷ್ಟೇ ಹೆಣ್ಣಿಗೂ ಸಮಾನತೆ, ರಕ್ಷಣೆ, ಗೌರವ ಕಲ್ಪಿಸುವ ಉದ್ದೇಶ ಇದಕ್ಕಿದೆ. ಹಾಗಾಗಿ ಮನೆಯ ಹೊರಗೆ ಮಾತ್ರವಲ್ಲ, ಮನೆಯೊಳಗೂ ಮಹಿಳೆಯರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಮಾಡಿರುವ ಈ ನಿಯಮ ಈಗ ಬಹಳಷ್ಟು ದುರುಪಯೋಗವಾಗುತ್ತಿದೆ ಎನ್ನಲಾಗಿದೆ.
    ಪತ್ನಿಯನ್ನು ಹೆಸರು ಹಿಡಿದು ಕರೆಯುವಂತಿಲ್ಲ.

    ಏಕವಚನದ ಬದಲು ಬಹುವಚನ ಬಳಸಬೇಕು. ಅಪಮಾನ, ಗಂಡು ಮಗುವನ್ನು ಹೆರದಿರುವ ಕುರಿತು ಮೂದಲಿಕೆ, ಹೆಣ್ಣುಮಕ್ಕಳ ಕುಟುಂಬಸ್ಥರು ಅಥವಾ ಆಪ್ತರಿಗೆ ದೈಹಿಕ ಹಿಂಸೆ ಉಂಟುಮಾಡುವುದಾಗಿ ಬೆದರಿಕೆ ಹಾಕುವುದು ಕೂಡಾ ಶಿಕ್ಷಾರ್ಹ ಅಪರಾಧವಾಗಿದೆ.

    ದಾಖಲೆಗಳ ಪ್ರಕಾರ 2020ರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಅತೀ ಹೆಚ್ಚು ದಾಖಲಾಗಿವೆ. 23,722 ಪ್ರಕರಣಗಳು ಈ ಸಂಬಂಧ ದಾಖಲಾಗಿವೆ ಎನ್ನಲಾಗಿದೆ. 2017ರಲ್ಲಿ ಈ ಸಂಖ್ಯೆ 14,591 ಇತ್ತು.

    ಈ ವರ್ಷ ಜನವರಿಯಿಂದ ಇಲ್ಲಿವರಗೆ ಮಹಿಳೆಯ ಮೇಲೆ ನಡೆದ ಒಟ್ಟು 20,368 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

    LATEST NEWS

    ಬಜೆಟ್ 2024: ಮೊದಲ ಬಾರಿಗೆ ಉದ್ಯೋಗ ಹುಡುಕುವವರಿಗೆ ಬಂಪರ್ ಉಡುಗೊರೆ.!

    Published

    on

    Union Budget 2024 : ಸರ್ಕಾರದ 9 ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.

    ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಅರ್ಹತೆಯ ಮಿತಿಯು ತಿಂಗಳಿಗೆ 1 ಲಕ್ಷ ರೂ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ.

    ಉದ್ಯೋಗ, ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ ₹2 ಸಾವಿರ ಕೋಟಿ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ‘ಭಾರತದ ಆರ್ಥಿಕತೆಯ ಬೆಳವಣಿಗೆಯು ಅತ್ಯುತ್ತಮವಾಗಿ ಮುಂದುವರಿದಿದೆ. ಭಾರತದ ಹಣದುಬ್ಬರವು ಸ್ಥಿರವಾಗಿದೆ, 4% ಗುರಿಯತ್ತ ಸಾಗುತ್ತಿದೆ. ಬಡವರು, ಯುವಕರು, ಮಹಿಳೆಯರು, ರೈತರಂತಹ ಪ್ರಮುಖ ವರ್ಗಗಳನ್ನು ಕೇಂದ್ರೀಕರಿಸುವ ಪ್ರಯತ್ನ ಮಾಡಲಾಗುತ್ತಿದೆ. ಉದ್ಯೋಗ, ಕೌಶಲ್ಯ, ಎಂಎಸ್‌ಎಂಇ, ಮಧ್ಯಮ ವರ್ಗದವರಿಗೆ ನಿರಂತರ ಗಮನ ನೀಡಲಾಗುತ್ತಿದೆ. ಉದ್ಯೋಗ ಮತ್ತು ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ 2 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಹೇಳಿದರು.

    Continue Reading

    LATEST NEWS

    ಮಳೆ ಆರ್ಭಟ; ಕೃಷ್ಣೆಗೆ ಭಾಗಿನ ಅರ್ಪಿಸಲು ಹೋಗಿ ಯುವಕ ನೀರು ಪಾ*ಲು

    Published

    on

    ಮಳೆ ಬಂದ್ರೆ ಇಳೆಗೆ ಜೀವ ಕಳೆ. ಅದೇ ಮಳೆ ರೌದ್ರನರ್ತನ ಮೆರೆದ್ರೆ ಸಾ*ವು-ನೋವಿನ ಸೆಲೆ. ರಾಜ್ಯದ ಅಷ್ಟ ದಿಕ್ಕುಗಳಲ್ಲೂ ಅಬ್ಬಿರಿಸಿ ಬೊಬ್ಬರಿಯುತ್ತಿರೋ ವರುಣ ಸಾ*ವು ನೋವಿನ ಸಂಕಷ್ಟಗಳ ಸರಮಾಲೆಗೆ ಸಾಕ್ಷಿಯಾಗಿದ್ದಾನೆ.

    ಕೃಷ್ಣಾ ನದಿಗೆ ಭಾಗಿನ ಅರ್ಪಿಸಲು ಹೋದ ಯುವಕ ಸಾ*ವು

    ಕೃಷ್ಣಾ ನದಿಯ ಹಿನ್ನೀರಿನಲ್ಲಿ ಭಾಗಿನ ಅರ್ಪಿಸಲು ಹೋದ ಯುವಕ ನೀರುಪಾ*ಲಾಗಿರೋ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

    ಈಜಲು ಬರದ ಹಿನ್ನಲೆ 28 ವರ್ಷದ ಯುವಕ ರೋಹಣ ಪಾಟೀಲ ಆಯತಪ್ಪಿ ನೀರಿಗೆ ಬಿದ್ದು ಸಾ*ವನ್ನಪ್ಪಿದ್ದಾನೆ. ಸ್ಥಳೀಯರ ಸಹಾಯದಿಂದ ಬೋಟ್ ಮೂಲಕ ರೋಹಣ ಪಾಟೀಲ ಮೃ*ತದೇಹ ಹೊರ ತೆಗೆಯಲಾಗಿದೆ.

    Continue Reading

    LATEST NEWS

    ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

    Published

    on

    ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


    ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

    Continue Reading

    LATEST NEWS

    Trending