Connect with us

    BELTHANGADY

    ಜಿಹಾದಿ ಶಕ್ತಿಗಳ ಬೆದರಿಕೆಗೆ ನಾನು ಮಣಿಯಲ್ಲ-ಶಾಸಕ ಹರೀಶ್ ಪೂಂಜಾ

    Published

    on

    ಮಂಗಳೂರು: ‘ಜಿಹಾದಿ ಶಕ್ತಿಗಳು ನನ್ನ ಮೇಲೆ ದಾಳಿ ಮಾಡಲು ಯತ್ನಿಸಿದೆ. ನಾನು ಪ್ರಯಾಣಿಸುತ್ತಿದ್ದ ಖಾಸಗಿ ಕಾರಿನ ಮೇಲೆ ದಾಳಿ ನಡೆದಿದೆ. ಅದು ಕೇರಳ ನೊಂದಣಿಯ ಕಾರಾಗಿದ್ದು ನಂಬರ್ ಸಹ ಇದೆ. ಗೃಹ ಸಚಿವರೂ ಮಾತನಾಡಿ ಭದ್ರತೆ ಒದಗಿಸುವುದಾಗಿ ಹೇಳಿದ್ದಾರೆ’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.


    ಕಾರ್ ಮೇಲೆ ನಡೆದ ದಾಳಿ ಯತ್ನ ವಿಚಾರವಾಗಿ ಮಂಗಳೂರಿನಲ್ಲಿ ಖುದ್ದು ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ‘ನಿನ್ನೆ ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಹೋಗುವಾಗ ದಾಳಿ ಮಾಡಿದ್ದಾರೆ.

    ದಾರಿ ಮದ್ಯೆ ಡೀಸೆಲ್ ಹಾಕಲು ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದೆವು. ನಾನು ಖಾಸಗಿ ಕಾರಿನಲ್ಲಿದ್ರೆ ನನ್ನ ಸರ್ಕಾರಿ ಕಾರನ್ನು ಡ್ರೈವರ್ ಚಲಾಯಿಸ್ತಾ ಇದ್ದ.


    ಅಡ್ಯಾರಿನಿಂದ ಪರಂಗಿಪೇಟೆಯ ತನಕ ಆತ ನಮ್ಮನ್ನು ಚೇಸ್ ಮಾಡಿದ್ದ. ನನ್ನ ಸರ್ಕಾರಿ ಕಾರು ನಮ್ಮ ಹಿಂದೆ ಇದ್ದು ಅದಕ್ಕೆ ಮೊದಲು ದಾಳಿಯಾಗಿದೆ.

    ಬಳಿಕ ತಕ್ಷಣ ಘಟನೆಯ ಬಗ್ಗೆ ದೂರವಾಣಿಯಲ್ಲಿ ಬಂಟ್ವಾಳ ಡಿವೈಎಸ್ಪಿಗೆ ತಿಳಿಸಿದ್ದೆ. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಪರಂಗಿಪೇಟೆಯಲ್ಲಿ ಬ್ಯಾರಿಕೇಡ್ ಹಾಕಿದ್ರು. ಆದ್ರೆ ನಮ್ಮ ಕಾರ್ ಸೈಡ್ ಹಾಕುತ್ತಿದ್ದಂತೆ ಬೇರೆ ಕಾರುಗಳ ಜೊತೆ ಬ್ಯಾರಿಕೇಡ್ ಪಾಸಾಗಿದ್ದಾನೆ.

    ಆತ ವೇಗವಾಗಿ ಹೋದ ಕಾರಣ ಪೊಲೀಸರಿಗೆ ಬ್ಯಾರಿಕೇಡ್ ಹಾಕಲು ಆಗಿಲ್ಲ. ಆದರೆ ಪೊಲೀಸರಿಗೆ ವಾಹನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ.

    ನಿನ್ನೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ FIR ಆಗಿದೆ. ನನಗೆ ಈ ಹಿಂದೆ ಯಾವುದೇ ರೀತಿಯ ಬೆದರಿಕೆ ಇರಲಿಲ್ಲ. ನಾನೊಬ್ಬ ಹಿಂದೂ ಕಾರ್ಯಕರ್ತನಾಗಿ ಈಗ ಶಾಸಕನಾಗಿದ್ದೇನೆ.

    ಜಿಹಾದಿ ಮಾನಸಿಕತೆಯ ಜನರನ್ನ ಯಾವತ್ತೂ ವಿರೋಧಿಸುತ್ತೇನೆ. ಈ ಘಟನೆಯಿಂದ ನನಗೆ ಇನ್ನಷ್ಟು ಕೆಲಸ‌ ಮಾಡಲು ಶಕ್ತಿ ಕೊಟ್ಟಿದೆ.

    ಸರ್ಕಾರ ಭದ್ರತೆ ನೀಡಿದ್ರೆ ಹಿರಿಯರ ಸಲಹೆ ಪಡೆದು‌ ಪಡೆದುಕೊಳ್ಳುತ್ತೇನೆ’ ಎಂದು ಹೇಳಿದರು.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್ ‘ನಿನ್ನೆ ರಾತ್ರಿ 11:30ಕ್ಕೆ ಶಾಸಕರಾದ ಹರೀಶ್ ಪೂಂಜ ರವರನ್ನು ಪರಂಗಿಪೇಟೆಯಲ್ಲಿ ಮಾರಕಾಸ್ತ್ರಗಳನ್ನು ತೋರಿಸಿ ಅವ್ಯಾಚವಾಗಿ ಬೈದು ಕೊಲೆಗ ಮಾಡಲು ಯತ್ನಿಸಿದ ಕೃತ್ಯವು ಇಡೀ ಜಿಲ್ಲೆಯ ಜನತೆಯನ್ನು ಭಯಭೀತಿಗೊಳಿಸಿದೆ.

    ಶಾಸಕರನ್ನ ಅಡ್ಡಗಟ್ಟಿ ಮಾರಕಾಸ್ತ್ರ ಝಲಪಿಸಿ ಕೊಲೆಗೆ ಯತ್ನಿಸಿದ ಕೃತ್ಯವು ಇದೊಂದು ಭಯೋತ್ಪಾದಕ ಕೃತ್ಯವಾಗಿದ್ದು, ತಕ್ಷಣ ಈ ಕೃತ್ಯ ಮಾಡಿದವರನ್ನು ಬಂಧಿಸಿ ಕುಲಂಕುಶವಾಗಿ ತನಿಖೆ ಮಾಡಿ ಇದರ ಹಿಂದೆ ಇರುವ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending