Thursday, October 21, 2021

ನಟ, ಸಮಾಜ ಸೇವಕ ಸೋನು ಸೂದ್‌ ಮನೆ, ಕಛೇರಿ ಕದ ತಟ್ಟಿದ ಐಟಿ ಅಧಿಕಾರಿಗಳು..!

ಮುಂಬೈ: ನಟ ಸೋನು ಸೂದ್​ ಅವರಿಗೆ ಸಂಬಂಧಿಸಿದ, ಮನೆ, ಕಛೇರಿ, ಸೇರಿ ಆರು ಪ್ರದೇಶಗಳಲ್ಲಿ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸರ್ವೆ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಇದು ಅವರ ಅಭಿಮಾನಿ ಬಳಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರ್ಕಾರದ ಸರ್ಕಾರಿ ಶಾಲೆಯ ಮಾರ್ಗದರ್ಶಕ ಬ್ರಾಂಡ್‌ ಅಂಬಾಸಿಡರ್‌ ಆಗಿ ನಿಯುಕ್ತಿಗೊಂಡಿದ್ದರು. ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ ಸಕ್ರಿಯ ರಾಜಕಾರಣಕ್ಕೆ ಇಳಿಯುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಈ ದಾಳಿ ನಡೆದಿದೆ.

ಕೋರೊನಾ ಸಂದರ್ಭದಲ್ಲಿ ದೇಶದ ಮೂಲೆಗಳಿಗೆ ಆಕ್ಸಿಜನ್‌ ಕೊರತೆಯಾಗದಂತೆ ತನ್ನ ಸೋನು ಸೂದ್‌ ಚಾರಿಟೇಬಲ್‌ ಟ್ರಸ್ಟ್‌ ಮೂಲಕ ಆಕ್ಸಿಜನ್‌ ಘಟಕಗಳನ್ನು ನೀಡಿದ್ದರು.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...