ಬೆಂಗಳೂರು/ ಮಂಗಳೂರು : ಸದ್ಯ ಚಂದನವನದಲ್ಲಿ ಯುವ ರಾಜ್ ಕುಮಾರ್ ಹಾಗೂ ಶ್ರೀದೇವಿ ದಂಪತಿ ವಿಚ್ಛೇದನದ ಬಗ್ಗೆ ಚರ್ಚೆ ನಡೆಯುತ್ತಿದೆ. ಇವರಿಬ್ಬರ ನಡುವೆ ಕಾಂತಾರ ಬೆಡಗಿ ಸಪ್ತಮಿ ಗೌಡ ಅವರ ಹೆಸರೂ ತಳುಕು ಹಾಕಿಕೊಂಡಿರೋದು ಹಳೇ ವಿಚಾರ. ಆದರೆ, ಸಪ್ತಮಿ ಗೌಡ ಅವರದ್ದೂ ಎನ್ನಲಾದ ಆಡಿಯೋವೊಂದು ವೈರಲ್ ಆಗುತ್ತಿದೆ.
ಹೌದು, ನಟ ಯುವ ರಾಜ್ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದರು. ವಿಚ್ಛೇದನ ಅರ್ಜಿಯಲ್ಲಿ ಸಹ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಶ್ರೀದೇವಿ ಸಹ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ನಟಿ ಸಪ್ತಮಿ ಗೌಡ ಹೆಸರೂ ಈ ವೇಳೆ ಕೇಳಿ ಬಂದಿತ್ತು. ಇದೀಗ ಆಡಿಯೋ ವೈರಲ್ ಆಗಿದ್ದು ಸಂಚಲನ ಮೂಡಿಸಿದೆ.
ಆಡಿಯೋದಲ್ಲಿ ಏನಿದೆ?
ವೈರಲ್ ಆಗಿರೋ ಆಡಿಯೋ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ್ದಾಗಿದ್ದು, ಸಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ.
‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ ಎನ್ನಲಾಗಿದೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.
‘ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’
‘ನಾನು ಮೊದಲಿನಿಂದಲೂ ಹೇಳುತ್ತಲೇ ಇದ್ದೆ, ಇದೆಲ್ಲ ವರ್ಕೌಟ್ ಆಗಲ್ಲ ಎಂದು. ಅಲ್ಲದೆ ನಾನು ಎಂದಿಗೂ ಸಹ ಫ್ಯಾಮಿಲಿ ಬಿಟ್ಟು ಬಾ, ಪತ್ನಿ ಜೊತೆ ಬ್ರೇಕ್ ಅಪ್ ಮಾಡಿಕೊ ಎಂದು ಹೇಳಿಲ್ಲ ಸರ್ ನನ್ನನ್ನು ನಂಬಿ. ಬೇಕಾದರೆ ನನ್ನನ್ನು ಬೈಯ್ಯಿರಿ, ಗುರು (ಯುವ)ಗೆ ಅದು ಮೊದಲ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ನನಗೆ ಗೊತ್ತಿದೆ. ಯಾರಿಗೂ ತೊಂದರೆ ಆಗಬಾರದು ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ’ ಎಂದು ಹೇಳಲಾಗಿದೆ.
ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಉಂಟಾಗಿತ್ತು. ಸಪ್ತಮಿ ಗೌಡ ಯುವ ಜೊತೆ ‘ಯುವ’ ಚಿತ್ರದ ನಾಯಕಿಯಾಗಿ ನಟಿಸಲು ಆಯ್ಕೆ ಆಗಿದ್ದರು. ಈ ವೇಳೆ ಇವರಿಬ್ಬರ ನಡುವೆ ಸಲುಗೆ ಏರ್ಪಟ್ಟಿತ್ತು ಎಂಬ ಮಾತು ಕೇಳಿ ಬಂದಿದೆ. ಹೀಗಾಗಿ ‘ಯುವ’ ಸಿನಿಮಾದ ಸೆಟ್ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತುಗಳು ಸಹ ಈ ಹಿಂದೆ ಕೇಳಿ ಬಂದಿದ್ದವು.
ಇದನ್ನೂ ಓದಿ : ಒಂಟಿಯಾಗಿ ಸಿಗುವಂತೆ ಹೇಳಿದ್ದ ಖ್ಯಾತ ನಟ : ಸೂರ್ಯವಂಶ ಬೆಡಗಿಯಿಂದ ಆರೋಪ
ಇದೇ ಕಾರಣಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸಪ್ತಮಿ ಹಾಗೂ ಯುವ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿತ್ತು. ಆ ಸಂದರ್ಭದಲ್ಲೇ ಸಪ್ತಮಿ ಗೌಡ, ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಆಡಿಯೋ ಕಳಿಸಿದ್ದರು ಎನ್ನಲಾಗಿದೆ.
Pingback: ಸೂರಜ್ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ - NAMMAKUDLA NEWS - ನಮ್ಮಕುಡ್ಲ ನ್ಯೂಸ್