Connect with us

LATEST NEWS

BJPಯನ್ನೇ ತಿದ್ದಿ ಸರಿಪಡಿಸುತ್ತೇನೆ ಹೊರತು ಕಾಂಗ್ರೆಸ್ ಸೇರೋ ಮಾತೇ ಇಲ್ಲ-ಮುತಾಲಿಕ್

Published

on

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಂತೆ ರಾಜ್ಯದಲ್ಲಿ ಬಿಜೆಪಿ ಆಡಳಿತ ಕೊಡಬೇಕು. ಮನೆ ಮನೆಗೆ ತೆರಳಿ ಮತ ಭಿಕ್ಷೆ ಬೇಡುತ್ತೇನೆ. ಬಿಜೆಪಿಯನ್ನೇ ತಿದ್ದಿ ಸರಿ ಮಾಡುತ್ತೇನೆ ವಿನಃ ಕಾಂಗ್ರೆಸ್ ಸೇರುವ ಮಾತೇ ಇಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು.


ಉಡುಪಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ‘ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ. ಹಿಂದುತ್ವಕ್ಕಾಗಿ, ಅಭಿವೃದ್ಧಿಗಾಗಿ ಪ್ರಾಮಾಣಿಕ ವ್ಯವಸ್ಥೆ ರೂಪಿಸಲು ನನ್ನ ಹೋರಾಟ ನಿರಂತರ. ಈ ಕಾರಣದಿಂದಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ’ ಎಂದು ಹೇಳಿದರು.

ಕಾರ್ಯಕರ್ತರಿಗೆ ಶಕ್ತಿ ತುಂಬಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಈ ಬಗ್ಗೆ ಏಳೆಂಟು ಕ್ಷೇತ್ರಗಳಲ್ಲಿ ಅಧ್ಯಯನ ಮಾಡಿದ್ದು ಕಾರ್ಕಳ ಕೂಡಾ ಇದರಲ್ಲಿ ಒಂದು. ಈ ತಿಂಗಳ ಕೊನೆಗೆ ಅಧಿಕೃತವಾಗಿ ಘೋಷಣೆ ಮಾಡುತ್ತೇನೆ. ಕಾರ್ಕಳದಲ್ಲಿನ ಓಡಾಟ ಶಾಸಕರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ.

ನಮ್ಮ ಕಾರ್ಯಕರ್ತರಿಗೆ ಕೇಸು ಹಾಕೋದು, ಹೆದರಿಸೋದು ಮಾಡುತ್ತಿದ್ದಾರೆ. ಹಿಂದುತ್ವದ ನೈತಿಕತೆ ಇದ್ದರೆ ಹೆದರಿಸುವ ಅವಶ್ಯಕತೆ ಇರಲಿಲ್ಲ’ ಎಂದು ಹೇಳಿದರು.

ರಾಜ್ಯದಲ್ಲಿ ಮೂರು ಸಾವಿರ ಹಿಂದೂ ಕಾರ್ಯಕರ್ತರ ಮೇಲೆ ಕೇಸು ಇದೆ. ರಾಜ್ಯದಲ್ಲಿ 18 ಹಿಂದೂ ಒಕ್ಕೂಟ ಬಿಜೆಪಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಕಾರ್ಕಳದ ಭ್ರಷ್ಟಾಚಾರದ ದಾಖಲೆ ಇದೆ. ಒಂದೊಂದಾಗಿ ತಿರುಗೇಟು ಕೊಡುತ್ತೇನೆ. ಮುಂದಿನದಿನಗಳಲ್ಲಿ ನಾನು ಕೇಸು ಹಾಕುತ್ತೇನೆ. ನಮ್ಮ ಕಾರ್ಯಕರ್ತರಿಗೆ ಭಯಪಡಿಸಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.


ಕಾರ್ಕಳಲದಲ್ಲಿ ಬೂತ್‌ ಮಟ್ಟದಲ್ಲಿ ಸಂಘಟನೆ ಕಾರ್ಯ ನಡೆಯುತ್ತಿದೆ. ಲವ್‌ಜಿಹಾದ್, ಗೋವು ಕಳ್ಳತನ ಕಾರ್ಕಳದಲ್ಲಿ ಹೆಚ್ಚಿದೆ.

ಕಾರ್ಕಳದಲ್ಲಿ ಈಗಾಗಲೇ ಜನರು ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಾಗತಿಸಿದ್ದಾರೆ.
ಟಾಲಿವುಡ್ ಸಿನಿಮಾಗಳು ಇಸ್ಲಾಮೀಕರಣ ಹೇರುತ್ತಿದ್ದು ನಾಸ್ತಿಕವಾದ, ಕಮ್ಯುನಿಸಂನನ್ನು ಹೆಚ್ಚು ಪ್ರಚಾರಪಡಿಸುತ್ತಿದೆ. ಬಾಲಿವುಡ್‌ಗೆ ದಾವೂದ್ ಬೆಂಬಲವಾಗಿದ್ದಾನೆ. ಈ ಮೂಲಕ ವ್ಯವಸ್ಥಿತವಾಗಿ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗುತ್ತಿದೆ.

ಆ ಪಠಾಣ್ ಚಿತ್ರದ ಭೇಷರಮ್ ರಂಗ್ ಪದ್ಯದಲ್ಲಿ ಅಶ್ಲೀಲವಾದ ದೃಶ್ಯಗಳಿವೆ. ನಮ್ಮ ಶ್ರೀರಾಮ ಸೇನೆ ಅದನ್ನೂ ವಿರೋಧಿಸುತ್ತದೆ. ಆ ಸಿನಿಮಾ ಬಾಯ್ಕಾಟ್‌ಗೆ ನಮ್ಮ ವಿರೋಧವಿದೆ ಎಂದು ಬಾಲಿವುಡ್ ವಿರುದ್ಧ ಮುತಾಲಿಕ್ ಗುಡುಗಿದರು.

ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಪ್ರಮುಖರಾದ ಗಂಗಾಧರ್ ಕುಲಕರ್ಣಿ, ಆನಂದ್ ಶೆಟ್ಟಿ ಅಡ್ಯಾರು, ಹರೀಶ್ ಅಧಿಕಾರಿ ಉಪಸ್ಥಿತರಿದ್ದರು.

 

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending