Wednesday, December 1, 2021

ಗಣೇಶ್‌ ಕಾರ್ಣಿಕ್‌ಗೆ ಲೀಗಲ್ ನೋಟಿಸ್ ನೀಡಿದ್ದೇನೆ, ಏನು ಉತ್ತರ ಕೊಡುತ್ತಾರೆ ನೋಡೋಣ?: ಪ್ರಿಯಾಂಕ ಖರ್ಗೆ

ಬೆಂಗಳೂರು: ‘ತನ್ನ ವಿರುದ್ಧ ವೈಯಕ್ತಿಕ ಆರೋಪ ಮಾಡಿದ್ದ ರಾಜ್ಯ ಬಿಜೆಪಿಯ ಮುಖ್ಯ ವಕ್ತಾರ ಗಣೇಶ್ ಕಾರ್ಣಿಕ್‍ಗೆ ಲೀಗಲ್ ನೋಟಿಸ್ ನೀಡಿದ್ದು,

ಅವರು ನೋಟಿಸ್‍ಗೆ ಏನು ಉತ್ತರ ಕೊಡುತ್ತಾರೆ ನೋಡೋಣ’ ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.


ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಿಟ್ ಕಾಯಿನ್ ಪ್ರಕರಣ ಸಂಬಂಧ ನಾನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದೆ.

ನಾನು ಕೇಳಿದ ಸರಳ ಪ್ರಶ್ನೆಗಳಿಗೆ ಬಿಜೆಪಿ ಉತ್ತರ ನೀಡಲಿಲ್ಲ. ಆದರೆ, ತನ್ನ ಮತ್ತು ತನ್ನ ಕುಟುಂಬದ ಸದಸ್ಯರ ಅಕ್ರಮ ಆಸ್ತಿ, ವೈಯಕ್ತಿಕ ವಿಚಾರ ಕೆದಕಿದರು.

ಅದಕ್ಕೆ ಲೀಗಲ್ ನೋಟಿಸ್ ನೀಡಿದ್ದೇವೆ’ ಎಂದು ತಿಳಿಸಿದರು.
ಬಿಟ್ ಕಾಯಿನ್ ಪ್ರಕರಣ ಸಂಬಂಧ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಯಾವುದೇ ವೇದಿಕೆಯಾದರೂ ಚರ್ಚೆಗೆ ನಾವು ಸಿದ್ಧ.

ಆದರೆ ಬಿಜೆಪಿ ಮುಖಂಡರು ಹಸಿ ಸುಳ್ಳು ಹೇಳುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...