Wednesday, December 1, 2021

ತ್ರಿಶೂಲ ದೀಕ್ಷೆ ಮೂಲಕ ಪುಂಡಾಟಿಕೆಗೆ ಮುಂದಾದರೆ ಸಂವಿಧಾನ ಉಳಿಸಲು ಎಸ್ಡಿಪಿಐ ಗೆ ಹೋರಾಟ ಅನಿವಾರ್ಯವಾದೀತು

ಮಂಗಳೂರು: ವಿ.ಎಚ್.ಪಿ ಮತ್ತು ಬಜರಂಗದಳ ತ್ರಿಶೂಲ ದೀಕ್ಷೆಯ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಮತ್ತು ಪುಂಡಾಟಿಕೆಗೆ ಮುಂದಾದರೆ ಸಂವಿಧಾನ ಉಳಿಸಲು ಎಸ್.ಡಿ.ಪಿ.ಐ ಗೆ ಹೋರಾಟ ಅನಿವಾರ್ಯವಾಗಲಿಗೆ ಎಂದು ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ಬಿ.ಆರ್ ಬಾಸ್ಕರ್ ಪ್ರಸಾದ್ ತಿಳಿಸಿದ್ದಾರೆ.

ಎಸ್.ಡಿ.ಪಿ.ಐ ದ.ಕ ಜಿಲ್ಲಾ ಸಮಿತಿ ವತಿಯಿಂದ ನಿನ್ನೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನ ದೀಕ್ಷೆ” ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚೆಗೆ ಆಯುಧಪೂಜೆ ಸಂದರ್ಭದಲ್ಲಿ ವಿ.ಎಚ್.ಪಿ ಮತ್ತು ಬಜರಂಗದಳ ಸಂಘಟನೆ ತನ್ನ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ಮೂಲಕ ಸಮಾಜದಲ್ಲಿ ಅಶಾಂತಿ ಮತ್ತು ಅರಾಜಕತೆ ಸೃಷ್ಟಿಸಲು ಪ್ರಯತ್ನಿಸಿತ್ತು.

ಸಂಘ ಪರಿವಾರ ಹಂಚಿದ ತ್ರಿಶೂಲದ ಷಡ್ಯಂತ್ರಕ್ಕೆ ಬಲಿಯಾಗಿ ಹಿಂದುಳಿದ ವರ್ಗ, ದಲಿತ, ಬಿಲ್ಲವ, ಬಂಟ ಸಮುದಾಯದ ಯುವಕರು ತಮ್ಮ ಜೀವನವನ್ನು ಹಾಳು ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಬ್ರಾಹ್ಮಣರು ಉನ್ನತ ಹುದ್ದೆಯನ್ನು ಅಲಂಕರಿಸಿ ಅತ್ಯುತ್ತಮ ಜೀವನವನ್ನು ಸಾಗಿಸುತ್ತಿದ್ದಾರೆ. ಇದನ್ನು ಹಿಂದುಳಿದವರು, ದಲಿತರು ಅರ್ಥ ಮಾಡಿಕೊಳ್ಳಬೇಕು ಎಂದು ಬಾಸ್ಕರ್ ಪ್ರಸಾದ್ ಮಾರ್ಮಿಕವಾಗಿ ಹೇಳಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ರಿಯೆ –ಪ್ರತಿಕ್ರಿಯೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಭಾಸ್ಕರ್ ಪ್ರಸಾದ್, ಕ್ರಿಯೆ – ಪ್ರತಿಕ್ರಿಯೆಗೆ ಸಾರ್ವಜನಿಕರು ಇಳಿದರೆ ರಾಜ್ಯದ ಪರಿಸ್ಥಿತಿ ಎಲ್ಲಿಗೆ ಹೋಗಬಹುದು.

ಕಾನೂನನ್ನು ಕಾಪಾಡುವ ಬಗ್ಗೆ ಹೇಳಿಕೆ ನೀಡಬೇಕಾದ ಬಸವರಾಜ ಬೊಮ್ಮಾಯಿ, ಗೌರವಾನ್ವಿತ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ಗೌರವಯುತವಾಗಿ, ಘನತೆಯಿಂದ ನಡೆದುಕೊಳ್ಳಬೇಕು.

ಅದು ಆಗದಿದ್ದರೆ ಮುಖ್ಯಮಂತ್ರಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾವುದೇ ಸಂಘಟನೆ ಬೇಕಾದರೂ ಸೇರಿ ಇಂತಹ ಹೇಳಿಕೆ ನೀಡಲಿ ಎಂದು ಹೇಳಿದರು.

ದೀಕ್ಷೆ ಎಂಬ ಪದಕ್ಕೆ ಉತ್ತಮ ಅರ್ಥವಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದಿರುವುದು ಪೈಶಾಚಿಕ ಕೃತ್ಯಗಳಿಗೆ ಅವರನ್ನು ಅಣಿಗೊಳಿಸುವ ಹುನ್ನಾರವಾಗಿದೆ ಎಂದು ಹೇಳಿದ ಅವರು, ತ್ರಿಶೂಲ ದೀಕ್ಷೆಯನ್ನು ಕಲ್ಲಡ್ಕ ಪ್ರಭಾಕರ್ ಭಟ್ ಮಕ್ಕಳಿಗೆ, ಜಗದೀಶ್ ಕಾರಂತ್ ಅವರ ಸಹೋದರರಿಗೆ, ಪ್ರಮೋದ್ ಮುತಾಲಿಕ್ ಅವರ ಸಹೋದರರಿಗೆ ಕೊಟ್ಟಿದ್ದೀರಾ? ಅವರ ಮಕ್ಕಳು ಉನ್ನತ ಶಿಕ್ಷಣ ಪಡೆದು ಉತ್ತಮ ಜೀವನ ನಡೆಸುತ್ತಿದ್ದಾರೆ.

ಆದರೆ ಹಿಂದುಳಿದ, ದಲಿತ, ಬಂಟ, ಬಿಲ್ಲವ ಮುಂತಾದ ಶೂದ್ರ ಸಮುದಾಯದ ಮಕ್ಕಳಿಗೆ ಮಾತ್ರ ತ್ರಿಶೂಲ ನೀಡಿದ್ದಾರೆ. ಅವರು ಹೊಡೆದಾಡಿ ಸಾಯಲಿ ಎಂಬುದು ನಿಮ್ಮ ಉದ್ದೇಶವಲ್ಲವೇ ಎಂದು ಭಾಸ್ಕರ್ ಪ್ರಸಾದ್ ಪ್ರಶ್ನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಸಂವಿಧಾನದ ಪೀಠಿಕೆ ಬೋಧಿಸಿ ಸಂವಿಧಾನದ ರಕ್ಷಣೆಗಾಗಿ ಪ್ರತಿಜ್ಞೆಯನ್ನು ಕೈಗೊಂಡರು. ಇದೇ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಮುಖಂಡರಾದ ಅನ್ವರ್ ಸಾದಾತ್ ಬಜತ್ತೂರು, ಇಕ್ಬಾಲ್ ಬೆಳ್ಳಾರೆ, ರಿಯಾಝ್ ಫರಂಗಿಪೇಟೆ, ಜಲೀಲ್ ಕೆ, ಅಲ್ಫಾನ್ಸೋ ಫ್ರಾಂಕೊ, ವಿಕ್ಟರ್ ಮಾರ್ಟಿಸ್, ಮಿಸ್ರಿಯಾ ಕಣ್ಣೂರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...