Connect with us

DAKSHINA KANNADA

ಬಜರಂಗದಳ ಮುಟ್ಟಿದರೆ ಕಾಂಗ್ರೆಸ್ ಸರ್ವನಾಶ : ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆ..!

Published

on

ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ.

ಮಂಗಳೂರು :  ಹಿಂದೂ ಸಮಾಜದ ಶಕ್ತಿಯಾಗಿರುವ ಬಜರಂಗದಳವನ್ನು ಕನಸಿನಲ್ಲೂ ನಿಷೇಧಿಸುವ ಬಗ್ಗೆ ಯೋಚಿಸಬೇಡಿ, ರಾವಣನ ಲಂಕೆಯು ದಹನವಾದಂತೆ ಕಾಂಗ್ರೆಸ್ ದಹನವಾಗಲಿದೆ.

ಮಾತ್ರವಲ್ಲ ಈಗಿನ ಅಳಿದುಳಿದ ನಿಮ್ಮ ಕಾಂಗ್ರೆಸ್ ಪಕ್ಷದ ಕುರುಹನ್ನು ಜನರೇ ಸಮೀಪದ ಅರಬೀ ಸಮುದ್ರದಲ್ಲಿ ವಿಸರ್ಜಿಸಲಿದ್ದಾರೆ.

ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ,ಹಾಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ದೇಶ ಭಕ್ತ ,ಹಿಂದೂ ಸಮಾಜದ ಒಳಿತಿಗಾಗಿ ಹಾಗೂ ಸಾಮಾಜಿಕವಾಗಿ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಜರಂಗದಳ ಕೋಟಿ ಕೋಟಿ ಸದಸ್ಯರನ್ನು ಹೊಂದಿರುವ , ಪ್ರಬಲ ಹಿಂದೂ ಸಮಾಜದ ಅಸ್ಮಿತೆಯ ಪ್ರತಿರೂಪವಾಗಿದೆ. ರಾಷ್ಟ್ರೀಯತೆಯ ಶಕ್ತಿಯಾಗಿದೆ. ಒಗ್ಗಟ್ಟಿನ ಮತ್ತೊಂದು ಹೆಸರು ಬಜರಂಗದಳವಾಗಿದೆ.

ಮುಸ್ಲಿಂ ಸಮಾಜದ ತುಷ್ಟೀಕರಣದ ನೀತಿಯ ಅಂಗವಾಗಿ ಬಜರಂಗದಳ ನಿಷೇಧ ಮಾಡುವ ಭರವಸೆ ನೀಡಿದೆ.

ಇಂದಿರಾ ಗಾಂಧಿ ಆರ್‍ಎಸ್‍ಎಸ್ ನಿಷೇಧಿಸಲು ಯತ್ನಿಸಿ ಸೋತಿದ್ದರು. ಮುಸ್ಲಿಂ ಜಿಹಾದ್ ಹೋರಾಟವನ್ನು ಮಟ್ಟ ಹಾಕಲು ಆಗದ ಕಾಂಗ್ರೆಸ್ ವಿಶ್ವದ ಅತೀ ದೊಡ್ಡ ಸಂಘಟನೆಯ ನಿಷೇಧದ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡುತ್ತಿದೆ.

ಹಾಗಾದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‍ನ ಯಾವ ಕುರುಹೂ ಇರುವುದಿಲ್ಲ .ಜನರೇ ಕಾಂಗ್ರೆಸ್ಸನ್ನು ಬುಡಸಹಿತ ಅರಬೀ ಸಮುದ್ರಕ್ಕೆ ಗುಡಿಸಿಹಾಕುತ್ತಾರೆ.

ಕಾಂಗ್ರೆಸ್ ಈ ನಿರ್ಧಾರದಿಂದ ಹಿಂದೂ ವಿರೋಧಿ ಪಕ್ಷ ಎಂಬುದು ಇದೀಗ ಪೂರ್ಣಪ್ರಮಾಣದಲ್ಲಿ ಸಾಬೀತಾಗಿದೆ.

ರಕ್ತದಾನ,ಆರೋಗ್ಯ ಶಿಬಿರ,ಸರಕಾರದ ಸೌಲಭ್ಯ ಮನೆ ಮನೆ ಮುಟ್ಟಿಸುವ ಕಾರ್ಯ,ಕೊರೊನಾ ಸಂದರ್ಭ ಕೊರೊನಾ ಸಂಕಷ್ಟದಲ್ಲಿದ್ದ ಕೋಟಿ ಕೋಟಿ ಜನತೆಗೆ ಕಿಟ್ ಒದಗಿಸುವ ಮೂಲಕ ಜನಮಾನಸದಲ್ಲಿ ಇರುವ ಸಂಘಟನೆ.

ಹಿಂದೂ ಸಮಾಜದ ಭದ್ರ ಬುನಾದಿಗೆ ಕೊಡುಗೆ ನೀಡುವ ಸಂಘಟನೆಯನ್ನು ನಿಮಗೆ ಮುಟ್ಟಲೂ ಸಾದ್ಯವಿಲ್ಲ.

ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ನಾಯಕರು ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಲೇ ಬಂದಿದ್ದಾರೆ.

ಇದಕ್ಕೆ ಹಿಂದೂ ಸಮಾಜ ಒಟ್ಟಾಗಿ ಸೂಕ್ತ ಉತ್ತರ ನೀಡಲಿದೆ.ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ ಸಂಘಟನೆಗಳನ್ನು ನಿಷೇಧ ಮಾಡಲು ಸಾಧ್ಯವಾಗಿಲ್ಲ ,ಆದರೆ ಬಿಜೆಪಿ ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

ಕಾಂಗ್ರೆಸ್‍ಗೆ ವಿನಾಶ ಕಾಲ ಈಗಲೇ ಎದುರಾಗಿದ್ದು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯನ್ನು ವಿಷ ಸರ್ಪ ಎಂದು ಹೇಳಿದರೆ, ಅವರ ಪುತ್ರ ಪ್ರಿಯಾಂಕ ಖರ್ಗೆ ನಾಲಾಯಕ್ ಎಂದು ಅವಹೇಳನದ ಮಾತು ಹೇಳಿದ್ದಾರೆ.

ಇದೀಗ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ಮಾತು ಹೇಳಿ ಮಾಡಲು ಮುಂದಾಗಿ ಪದೇ ಪದೇ ಹಿಂದೂ ಸಮಾಜದ ನಾಶ ಮಾಡುವ ತಂತ್ರ ಹೂಡಿದಂತಿದ್ದು, ಒಂದು ವರ್ಗದ ಓಲೈಕೆ ಮಾಡುತ್ತಾ ಬಂದ ಈ ಹಿಂದೂ ವಿರೋಧಿ ಪಕ್ಷಕ್ಕೆ ಕರ್ನಾಟಕದ ಜನತೆ ಸೂಕ್ತ ಪಾಠವನ್ನು ಕಲಿಸುವುದು ನಿಶ್ಚಿತ.

ನಿಮ್ಮ ಹಿಂದೂ ವಿರೋಧಿ ನೀತಿಯಿಂದ , ಸನಾತನ ಪರಂಪರೆ ಹಾಳು ಮಾಡುವ ಕುತಂತ್ರದಿಂದ ಆಡಳಿತಕ್ಕೆ ಬರುವುದು ಕನಸು ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending