ಉಡುಪಿ: ಧರ್ಮದ ವಿಚಾರದಲ್ಲಿ ನ್ಯಾಯಾಲಯದ ತೀರ್ಪಿನ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಶಬರಿಮಲೆ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದಾಗ ಅದನ್ನು ಹಿಂದೂ ಸಮಾಜ ವಿರೋಧಿಸಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,
ಶಬರಿಮಲೆ ವಿಷಯ ಬೇರೆ ಹಿಜಾಬ್ ವಿಷಯ ಬೇರೆ. ಶಬರಿಮಲೆ ಪ್ರಕರಣವನ್ನು ಹಿಜಾಬ್ ಪ್ರಕರಣದ ಜೊತೆ ಹೋಲಿಸಬೇಡಿ. ದೇವಸ್ಥಾನದ ಧಾರ್ಮಿಕ ಆಚರಣೆಗೂ ಕಾಲೇಜಿನ ಸಮವಸ್ತ್ರಕ್ಕೂ ಹೋಲಿಕೆ ಸರಿಯಲ್ಲ.
ಮಸೀದಿ, ಚರ್ಚ್, ದೇವಸ್ಥಾನದ ಆಚರಣೆಗೆ ವಿರುದ್ಧವಾಗಿ ತೀರ್ಪು ಬಂದರೆ ವಿರೋಧಿಸಬಹುದು. ಸಾರ್ವಜನಿಕ ಸಂಸ್ಥೆಯಲ್ಲಿ ನಿಯಮ ಪಾಲಿಸದಿರುವುದು ಸರಿಯಲ್ಲ ರಘುಪತಿ ಭಟ್ ಹೇಳಿಕೆ ನೀಡಿದ್ದಾರೆ.