Thursday, August 11, 2022

24 ಗಂಟೆಯಲ್ಲಿ ಕೋರ್ಟ್‌ ಆಜ್ಞೆ ಪಾಲಿಸದಿದ್ರೆ ಗುಂಡು ಹೊಡ್ದು ಮುಗಿಸ್ತೇನೆ: ಮುತಾಲಿಕ್‌

ಹುಬ್ಬಳ್ಳಿ: ಶಬ್ದ ಮಾಲಿನ್ಯ ವಿಚಾರದಲ್ಲಿ ಬಿಜೆಪಿಗೆ ಸರಕಾರ ನಡೆಸುವುದಕ್ಕೆ ಆಗದೇ ಇದ್ರೆ ಕೆಳಗಿಳಿಯಿರಿ, ನನ್ನ ಕೈಗೆ ಅಧಿಕಾರ ಕೊಟ್ಟು ನೋಡ್ಲಿ.

24 ಗಂಟೆಯೊಳಗೆ ಸುಪ್ರೀಂ ಕೋರ್ಟ್‌ ಆಜ್ಞೆ ಪಾಲಿಸದಿದ್ದವರನ್ನು ಗುಂಡು ಹೊಡೆದು ಮುಗಿಸ್ತೇನೆ ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಗುಡುಗಿದ್ದಾರೆ.


ಈ ಬಗ್ಗೆ ಹುಬ್ಬಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಬ್ದ ಮಾಲಿನ್ಯದ ಬಗ್ಗೆ ಸಿಎಂ 15 ದಿನದ ಗಡುವು ಕೊಟ್ಟು ಆದೇಶ ಹೊರಡಿಸಿದ್ದರು.

ಇದೀಗ 15 ದಿನ ಕಳೆದರೂ ಪಾಲನೆಯಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಹೋರಾಟಕ್ಕೆ ನಾವು ಸಿದ್ದವಾಗಿದ್ದೇವೆ.

ಜೂ.8ರಂದು ರಾಜ್ಯದ ಎಲ್ಲಾ ಎಂಎಲ್‌ಎ, ಮಂತ್ರಿ ಮನೆ ಎದುರು ಧರಣಿ ನಡೆಸುತ್ತೇವೆ. ಅವರ್ರನ್ನ ಬಟಾಬಯಲು ಮಾಡ್ತೇವೆ, ನೀವೇನೂ ಮಾಡ್ತಾ ಇಲ್ಲ ಅನ್ನೋದನ್ನು ಜನಜಾಗೃತಿ ಮಾಡುತ್ತೇವೆ.

ಇದೇ ವೇಳೆ ಸಿಎಂ ಬೊಮ್ಮಾಯಿ ಅವರನ್ನುದ್ದೇಶಿಸಿ, ನೀವು ಯೋಗಿಯ 25 ಪರ್ಸೆಂಟ್‌ ಆದ್ರೂ ಗಟ್ಸ್‌ ತೋರಿಸ್ಬೇಕು. ನಿಮ್ಮತ್ರ ಆ ತಾಕತ್ತು, ಧಂ ಇಲ್ಲ. ಗಟ್ಟಿಯಾಗದೇ ಇದ್ರೆ ಮುಂದಿನ ಚುನಾವಣೆಯಲ್ಲಿ ಕಷ್ಟ ಇದೆ ಎಂದರು.
ಬಿಜೆಪಿ ಬಗ್ಗೆ ವಾಗ್ದಾಳಿ ನಡೆಸಿ, ನಮ್ಮ ಹೋರಾಟ, ತ್ಯಾಗ ಬಲಿದಾನದಿಂದ ಬಿಜೆಪಿಯವ್ರು ಸರ್ಕಾರ ನಡೆಸುತ್ತಿದ್ದಾರೆ. ಬಿಜೆಪಿ ಇವರಪ್ಪಂದು ಅಲ್ರೀ. ನಾವೂ ರಕ್ತ, ಬೆವರು ಹರಿಸಿದ್ದೇವೆ.

ಈ ಹಿಂದೆ ಟಿಕೆಟ್‌ಗಾಗಿ ಅವರತ್ರ ಭಿಕ್ಷೆ ಬೇಡಿಲ್ಲ. ನಮ್ಮ ಹಕ್ಕಿದೆ. ಅದನ್ನು ಕೇಳಿದ್ದೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ರಕ್ಷಾಬಂಧನ

ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಶಾರದಾ ವಿದ್ಯಾಲಯದಲ್ಲಿ ಇಂದು ರಕ್ಷಾಬಂಧನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾರದಾ ಸಮೂಹ ವಿದ್ಯಾಸಂಸ್ಥೆಗಳ ವಿಶ್ವಸ್ಥರಾದ ಸುಧಾಕರ ರಾವ್ ಪೇಜಾವರರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಆ.14 ರಂದು ಮಂಗಳೂರು ಪುರಭವನದಲ್ಲಿ ನಾಟಕ ಪ್ರದರ್ಶನ ಮತ್ತು ಮೆಗಾ ಮ್ಯಾಜಿಕ್

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.14 ರ ಭಾನುವಾರ ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಕನ್ನಡ ಮತ್ತು...