ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ದಾರೆ.
ಪುತ್ತೂರು: ತಾಕತ್ತಿದ್ದರೆ ಆರ್. ಎಸ್.ಎಸ್., ಭಜರಂಗದಳ ಸಂಘಟನೆಗಳನ್ನು ನಿಷೇಧಿಸಿ ನೋಡಿ. ಅದರ ಪರಿಣಾಮ ಏನೆಂಬುದನ್ನು ನಾವು ತೋರಿಸುತ್ತೇವೆ ಎಂದು ಪುತ್ತೂರಿನ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ದಾರೆ.
‘ಆರ್. ಎಸ್.ಎಸ್. ಮತ್ತು ಭಜರಂಗದಳವನ್ನು ನಿಷೇಧಿಸುತ್ತೇವೆ, ಕರ್ನಾಟಕದಲ್ಲಿ ಇರುವವರು ಇಲ್ಲಿರಬಹುದು, ಇಲ್ಲದಿದ್ದರೆ ಪಾಕಿಸ್ತಾನಕ್ಕೆ ಹೋಗ ಬಹುದು’ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ ಹೇಳಿಕೆಗೆ ಪುತ್ತೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅರುಣ್ ಪುತ್ತಿಲ, ಈ ಹೇಳಿಕೆಯನ್ನು ಖಂಡಿಸುತ್ತೇನೆ.
ಇಂತಹ ಗೊಂದಲದ ಹೇಳಿಕೆ ಕೊಡುವುದನ್ನು ಬಿಟ್ಟು, ಕಾಂಗ್ರೆಸ್ ಆಶ್ವಾಸನೆ ನೀಡಿದ ಗ್ಯಾರೆಂಟಿಗಳನ್ನು ಈಡೇರಿಸಲಿ.
ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಲು ಹೋಗುವುದು ಬೇಡ ಎಂದರು.
ಮಾಣಿಯಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಮತ್ತು ಸುಳ್ಯದಲ್ಲಿ ನಡೆದ ಘಟನೆ ಖಂಡನೀಯ ಎಂದು ಹೇಳಿದ್ದಾರೆ.