Connect with us

    LATEST NEWS

    ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು

    Published

    on

    ನವದೆಹಲಿ: ಪ್ರಸ್ತುತ, ಡಿಜಿಟಲ್ ಪಾವತಿಗಳ ಸಂಖ್ಯೆ ಹೆಚ್ಚಾಗಿದೆ. ಒಂದು ಕಾಲದಲ್ಲಿ, ನಗದು ವಹಿವಾಟುಗಳು ಸಾಕಷ್ಟು ನಡೆಯುತ್ತಿದ್ದವು. ಆದ್ರೆ, ಸ್ಮಾರ್ಟ್ಫೋನ್ಗಳ ಆಗಮನದೊಂದಿಗೆ, ಜಗತ್ತು ಬದಲಾಗಿದೆ.

    ಅಂಗೈಯಲ್ಲಿರುವ ಫೋನ್ ನಲ್ಲಿರುವ ಹಣವನ್ನು ಕೆಲವೇ ಸೆಕೆಂಡುಗಳಲ್ಲಿ ವಿಶ್ವದ ಯಾರಿಗಾದರೂ ಕಳುಹಿಸಬಹುದು. ಯುಪಿಐ ವಿಷಯಕ್ಕೆ ಬಂದಾಗ, ಗೂಗಲ್ ಪೇ ಮುಖ್ಯವಾಗಿ ಅನೇಕ ಜನರು ಬಳಸುತ್ತಾರೆ. ಆದಾಗ್ಯೂ, ಒಂದು ಕಾಲದಲ್ಲಿ ತೇಜ್ ಆಗಿದ್ದ ಅಪ್ಲಿಕೇಶನ್ ಈಗ ಗೂಗಲ್ ಪೇ ಆಗಿ ಮಾರ್ಪಟ್ಟಿದೆ.

    ಆ ಸಮಯದಲ್ಲಿ, ಗೂಗಲ್ ಪೇನಲ್ಲಿ ನಗದು ಬಹುಮಾನಗಳನ್ನ ನೀಡಲಾಗುತ್ತಿತ್ತು. ಆದರೆ ಈಗ ಸ್ಕ್ರ್ಯಾಚ್ ಕಾರ್ಡ್’ಗಳನ್ನು ನೀಡಲಾಗುತ್ತಿದೆ. ಆದಾಗ್ಯೂ, ಗೂಗಲ್ ಪೇ ಈಗ ಮತ್ತೆ ಹಣವನ್ನ ಗೆಲ್ಲುವ ಅವಕಾಶವನ್ನು ನೀಡುತ್ತದೆ. ಗೂಗಲ್ ಪೇನಲ್ಲಿ ನೀವು 51 ರೂ.ಗಳಿಂದ 1,001 ರೂ.ಗಳವರೆಗೆ ಹಣವನ್ನು ಗೆಲ್ಲಬಹುದು. ಗೂಗಲ್ ಪೇ ಬಳಕೆದಾರರು 6 ಲಡ್ಡುಗಳನ್ನ ಗೆಲ್ಲಬೇಕಾಗುತ್ತದೆ. ಇದರೊಂದಿಗೆ, ಅವರು 51 ರೂ.ಗಳಿಂದ 1,001 ರೂ.ಗಳವರೆಗೆ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.

    ಲಡ್ಡುಗಳನ್ನ ಪಡೆಯಲು, ಬಳಕೆದಾರರು ಗೂಗಲ್ ಪೇನಲ್ಲಿ ಪಾವತಿ ಮಾಡಬೇಕಾಗುತ್ತದೆ. ಇದಕ್ಕಾಗಿ, ಲಡ್ಡುಗಳನ್ನ ವಿವಿಧ ರೀತಿಯಲ್ಲಿ ಪಡೆಯಬಹುದು. ಕನಿಷ್ಠ 100 ರೂ.ಗಳನ್ನು ಪಾವತಿಸಿದರೆ ವ್ಯಾಪಾರಿಯ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬಹುದು ಮತ್ತು ಲಡ್ಡುಗಳನ್ನು ಗೆಲ್ಲಬಹುದು. ಅಂತೆಯೇ, ಮೊಬೈಲ್ ರೀಚಾರ್ಜ್ ಅಥವಾ ಪೋಸ್ಟ್ ಪೈನ್ ಸಂಖ್ಯೆಯ ಬಿಲ್ ಪಾವತಿಯ ಸಂದರ್ಭದಲ್ಲಿ, ನೀವು ಕನಿಷ್ಠ 100 ರೂ.ಗಳನ್ನು ಪಾವತಿಸಿದರೆ ನಿಮಗೆ ಲಡ್ಡುಗಳು ಸಿಗುತ್ತವೆ. ಅಂತೆಯೇ, ನೀವು ಉಡುಗೊರೆ ಕಾರ್ಡ್ ಖರೀದಿಸಿದರೆ, ನೀವು ಕನಿಷ್ಠ 100 ರೂ.ಗಳನ್ನ ಪಾವತಿಸಬೇಕಾಗುತ್ತದೆ ಮತ್ತು ನೀವು ಉಡುಗೊರೆ ಕಾರ್ಡ್ ಖರೀದಿಸಿದರೆ, ನೀವು ಕನಿಷ್ಠ 200 ರೂ.ಗಳನ್ನ ಪಾವತಿಸಬೇಕಾಗುತ್ತದೆ. ಮೇಲೆ ತಿಳಿಸಿದಂತೆ ಅಂತಹ ವಹಿವಾಟುಗಳೊಂದಿಗೆ ಬರುವ ಲಡ್ಡುಗಳಿಗೆ 51 ರಿಂದ 1,001 ರೂ.ಗಳ ಕ್ಯಾಶ್ಬ್ಯಾಕ್ ನೀಡಲಾಗುವುದು. ಆದಾಗ್ಯೂ, ಇದು ಎಷ್ಟು ಯಶಸ್ವಿಯಾಗುತ್ತದೆ ಎಂಬುದನ್ನು ನೋಡಬೇಕಾಗಿದೆ.

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ

    Published

    on

    ಮಂಗಳೂರು: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ“ ಎಂದು ಶುಭ ಹಾರೈಸಿದರು.

    ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ 9 ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ“ ಎಂದರು.

    ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ, ”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ“ ಎಂದರು.

    ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ“ ಎಂದರು.

    ದೇವಸ್ಥಾನದ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಉಮೇಶ್ ಶೆಟ್ಟಿ, ನಟ ಶೋಧನ್ ಶೆಟ್ಟಿ, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಡಾ ಪ್ರತೀಕ್ಷಾ, ಡಾ ನಿಖಿಲ್ ಶೆಟ್ಟಿ, ಸಂಜಯ್ ಶೆಟ್ಟಿ ಗೋಣಿಬೀಡು, ಡಾ ವೈಎನ್ ಶೆಟ್ಟಿ, ಮಿಥುನ್, ನವೀನ್ ಚಂದ್ರ ಶೆಟ್ಟಿ, ಜಗನ್ನಾಥ ಶೆಟ್ಟಿ ಕುಳಾಯಿ, ವಿಠಲ್ ಶೆಟ್ಟಿ ಕನಕಪಾಡಿ, ಶಾಂತಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

    ಉದ್ಯಮಿ ಪಲ್ಲವಿ ಸಂತೋಷ್ ಶೆಟ್ಟಿ ಕೆಮರಾ ಚಾಲನೆ ಮಾಡಿದರು. ಶಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ ಕುರಿತು:

    ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು ಸಂದೀಪ್ ಉಡುಪಿ ಕೆಮರಾ ಕಣ್ಣಲ್ಲಿ ಸಿನಿಮಾ ಮೂಡಿಬರಲಿದೆ. ರವಿರಾಜ್ ಗಾಣಿಗ ಎಡಿಟರ್, ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ ಸಿನಿಮಾಕ್ಕಿರಲಿದೆ.

    ಕಲಾವಿದರಾಗಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ. ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.

    Continue Reading

    LATEST NEWS

    ಪ್ರತಿವರ್ಷ ಅಯ್ಯಪ್ಪ ಮಾಲೆ ಹಾಕುವ ಸ್ವಾಮಿಗಳ ಹೆಸರು ಯಾವುದು ಗೊತ್ತಾ ??

    Published

    on

    ‘ಶಬರಿಮಲೆ’ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರೋದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು ಅರ್ಥ ಮಂಡಲ ದೀಕ್ಷಾ ತೆಗೆದುಕೊಳ್ಳುತ್ತಾರೆ. 41 ದಿನಗಳ ದೀಕ್ಷೆ ಪಡೆದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದು ಬಂದ ಬಳಿಕ ಪೂಜೆಯೊಂದಿಗೆ ಅಯ್ಯಪ್ಪ ಮಾಲೆಯನ್ನು ತೆಗೆಯುತ್ತಾರೆ.

    ಪ್ರತಿವರ್ಷ ಭಕ್ತಿಯಿಂದ ಮಾಲೆ ಧರಿಸಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯುವ ಸ್ವಾಮಿಗಳಿಗೆ ಒಂದೊಂದು ಹೆಸರಿನಿಂದ ಕರೆಯಲಾಗುತ್ತದೆ ಎಂಬ ವಿಷಯ ಎಷ್ಟೋ ಜನರಿಗೆ ಗೊತ್ತೇ ಇರುವುದಿಲ್ಲ. ಸಾಮಾನ್ಯವಾಗಿ ಐದಕ್ಕಿಂತ ಹೆಚ್ಚು ಬಾರಿ ಮಾಲೆ ಧರಿಸಿ ಅಯ್ಯಪ್ಪನ ದರ್ಶನ ಪಡೆದವರನ್ನು ‘ಗುರು ಸ್ವಾಮಿ’ ಎನ್ನಲಾಗುತ್ತದೆ.
    ಇದಕ್ಕೆ ಹೊರತಾಗಿ ಪ್ರತಿವರ್ಷ ಮಾಲೆ ಹಾಕಿದವರನ್ನು ಒಂದೊಂದು ಹೆಸರುಗಳಿಂದ ಕರೆಯಲಾಗುತ್ತದೆ. ಆ ಹೆಸರುಗಳು ಯಾವುದ್ಯಾವುದು ಎಂಬ ವಿವರ ಇಲ್ಲಿವೆ.

     

    18 ವರ್ಷಗಳಿಂದ ಮಾಲೆ ಹಾಕುವ ಸ್ವಾಮಿಗಳ ಹೆಸರು :

    ಮೊದಲನೇ ಬಾರಿಗೆ ದೀಕ್ಷೆ ಪಡೆದುಕೊಂಡ ಸ್ವಾಮಿಗಳನ್ನು ಕನ್ನೆಸ್ವಾಮಿ ಎಂದು ಕರೆಯಲಾಗುತ್ತದೆ. ಎರಡನೇ ಬಾರಿಗೆ ಮಾಲೆ ಹಾಕಿದ ಸ್ವಾಮಿಗಳನ್ನು ಕತ್ತಿಸ್ವಾಮಿ, ಮೂರನೇ ಬಾರಿಗೆ ಮಾಲೆ ಹಾಕಿದವರನ್ನು ಗಂಟ ಸ್ವಾಮಿ, ನಾಲ್ಕನೇ ಬಾರಿಗೆ ಮಾಲೆ ಹಾಕಿದರೇ ಅವರನ್ನು ಗದಸ್ವಾಮಿ, ಆ ಬಳಿಕ ಮಾಲೆ ಹಾಕುವ ಸ್ವಾಮಿಗಳನ್ನು ಬಿಲ್ಲು ಸ್ವಾಮಿ, ಆರನೇ ಬಾರಿಗೆ ಮಾಲೆ ಹಾಕಿದ ಸ್ವಾಮಿಗಳನ್ನು ಜ್ಯೋತಿ ಸ್ವಾಮಿ, ಏಳನೇ ಬಾರಿಗೆ ಸೂರ್ಯ ಸ್ವಾಮಿ, ಎಂಟನೇ ಬಾರಿಗೆ ಚಂದ್ರ ಸ್ವಾಮಿ, ಒಂಬತ್ತನೇ ಬಾರಿಗೆ ಮಾಲೆ ಹಾಕಿದವರನ್ನು ವೇಲು ಸ್ವಾಮಿ, ಹತ್ತನೇ ಬಾರಿಗೆ ಮಾಲೆ ಹಾಕಿದರೆ ಅವರನ್ನು ವಿಷ್ಣು ಚಕ್ರ ಸ್ವಾಮಿ ಎಂದು ಕರೆಯಲಾಗುತ್ತದೆ. ಹನ್ನೊಂದನೇ ಬಾರಿಗೆ ಮಾಲೆ ಹಾಕಿದರೆ ಶಂಖಾದರ ಸ್ವಾಮಿ, ಹನ್ನೆರಡನೇ ಬಾರಿಗೆ ಮಾಲೆ ಹಾಕಿದವರನ್ನು ನಾಗಾಭರಣ ಸ್ವಾಮಿ, ಬಳಿಕ ಹದಿಮೂರನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ಶ್ರೀಹರಿ ಸ್ವಾಮಿ, ಹದಿನಾಲ್ಕನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ಪದ್ಮಸ್ವಾಮಿ, ಹದಿನೈದನೇ ಬಾರಿಗೆ ಮಾಲೆ ಹಾಕುವ ಸ್ವಾಮಿಗಳನ್ನು ತ್ರಿಶೂಲಸ್ವಾಮಿ ಎಂದು ಹೇಳಲಾಗುತ್ತದೆ.ಹದಿನಾರನೇ ಬಾರಿಗೆ ಮಾಲೆ ಹಾಕಿದರೆ ಅಂತಹ ಸ್ವಾಮಿಯನ್ನು ಶಬರಿಗಿರಿಸ್ವಾಮಿ, ಹದಿನೇಳನೇ ಬಾರಿಗೆ ಮಾಲೆ ಹಾಕುವ ಸ್ವಾಮಿಯನ್ನು ಓಂಕಾರ ಸ್ವಾಮಿ, ಹದಿನೆಂಟನೇ ಬಾರಿಗೆ ಮಾಲೆ ಹಾಕಿದರೆ ಅವರನ್ನು ನಾರಿಕೇಳಸ್ವಾಮಿ ಎಂದು ಕರೆಯಲಾಗುತ್ತದೆ.

    Continue Reading

    LATEST NEWS

    Trending