Connect with us

DAKSHINA KANNADA

“ಮಂಗಳೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸಲ್ಲ ” -ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್..!

Published

on

ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದ ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ನೇರ ಮತ್ತು ಪರೋಕ್ಷವಾಗಿ ಭಾಗಿಯಾದ ಎಲ್ಲರನ್ನೂ ಪೊಲೀಸ್ ಇಲಾಖೆಯು ಗುರುತಿಸಿದ್ದು ಒಂದು ವರ್ಷದ ಮಟ್ಟಿಗೆ ಈ ಎಲ್ಲಾ ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು.

ಆರೋಪಿಗಳ ವಿರುದ್ಧ ಮನ್ನೆಚ್ಚರಿಕೆಯ ಕ್ರಮವಾಗಿ ಸಿಆರ್‌ಪಿಸಿ 107 ಮತ್ತು 110 ಅಡಿ ಪ್ರಕರಣ ದಾಖಲಿಸಲಾಗುತ್ತದೆ.

ಈ ಅವಧಿಯಲ್ಲಿ ಯಾವುದೇ ಶಾಂತಿ ಉಲ್ಲಂಘಿಸಿದರೆ ದಂಡವನ್ನು ವಸೂಲಿ ಮಾಡಲಾಗುತ್ತದೆ.

ಒಂದು ವರ್ಷದ ಅವಧಿಯ ಬಳಿಕವೂ ಕಾನೂನು ಉಲ್ಲಂಘಿಸಿದರೆ ಮುಚ್ಚಳಿಕೆಯ ಅವಧಿಯನ್ನು ವಿಸ್ತರಿಸಲಾಗುತ್ತದೆ.

ಕಳೆದ ಒಂದು ವರ್ಷದಲ್ಲಿ ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ ಒಂಬತ್ತು ಮಂದಿಯಿಂದ ನಗರ ಪೊಲೀಸರು 1.90 ಲಕ್ಷ ರೂ. ವಸೂಲಿ ಮಾಡಿದ್ದಾರೆ.

ಈ ವರ್ಷ 62 ರೌಡಿ ಶೀಟರ್‌ಗಳನ್ನು ಕಮಿಷನರೇಟ್ ವ್ಯಾಪ್ತಿಯಿಂದ ಹೊರ ಹಾಕಲಾಗಿದೆ.

ನಗರದಲ್ಲಿ ವಿವಿಧ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ 1200 ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬೀಚ್‌ನಲ್ಲಿ ವರದಿಯಾದ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಏಳು ಮಂದಿಯನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಪ್ರಾಪ್ತ ಬಾಲಕನಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗೆ ವರದಿಯನ್ನು ಸಲ್ಲಿಸಲಾಗಿದೆ.

ಉಳ್ಳಾಲ ಸೋಮೇಶ್ವರ ಬೀಚ್‌ನಲ್ಲಿ ಮತೀಯ ಗೂಂಡಾಗಿರಿ ಘಟನೆಯ ಬಳಿಕ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ಬೀಚ್‌ಗಳು, ಮಾಲ್‌ಗಳ ಸಹಿತ ಪ್ರಮುಖ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲಾಗಿದೆ.

ಈ ಪ್ರದೇಶಗಳಲ್ಲಿ ಸಂಜೆ 5 ರಿಂದ ರಾತ್ರಿ 10 ರವರೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಜನ ಭಯ ಪಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending