Connect with us

BANTWAL

ಅಕ್ರಮ ಬಾಕ್ಸೈಟ್ ಮಣ್ಣು ಸಾಗಾಟ: ವಿಟ್ಲದಲ್ಲಿ 7 ಲಾರಿ ವಶಕ್ಕೆ

Published

on

ಬಂಟ್ವಾಳ: ಕೇರಳದಿಂದ ಅಕ್ರಮವಾಗಿ ಬರುವ ಬಾಕ್ಸೈಟ್ ಮಣ್ಣು ತುಂಬಿದ ಸುಮಾರು ಎಂಟು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ವಿಟ್ಲದ ಕನ್ಯಾನ ಸಮೀಪದಲ್ಲಿ ಭಾರೀ ಮಣ್ಣು ಮಾಫಿಯಾ ನಡೆಯುತ್ತಿದ್ದು, ಈ ಬಗ್ಗೆ ಹಲವು ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದರೂ ಹಣದ ಹೊಳೆ ಸುರಿಸಿ,

ಬಾಯಿ ಮುಚ್ಚಿಸಿದ್ದರು.
ವಿಟ್ಲ ಮೂಲಕ ಅಕ್ರಮವಾಗಿ ಬಳ್ಳಾರಿ, ಸಂಡೂರು, ಆಂಧ್ರಪ್ರದೇಶಕ್ಕೆ ಬಾಕ್ಸೈಟ್ ಸಾಗಿಸುತ್ತಿದ್ದ ಏಳು ಭಾರೀ ಸರಕು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕಲ್ಲಡ್ಕ-ಕಾಂಞಂಗಾಡ್ ಅಂತರಾಜ್ಯ ಹೆದ್ದಾರಿಯಲ್ಲಿ ಭಾರಿ ಸರಕು ಲಾರಿಗಳ ಓಡಾಟವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಇಲಾಖೆ ಕೆಲ ವರ್ಷಗಳ ಹಿಂದೆಯೇ ನಿಷೇಧಿ‌ಸಿದೆ. ಹೀಗಿದ್ದರೂ ಅಧಿಕಾರಿಗಳ ಕೃಪಾಕಟಾಕ್ಷವೋ,

ಕಣ್ಣಿಗೆ ಮಣ್ಣೆರಚಿಯೋ ಪ್ರತಿನಿತ್ಯ 12,14,18ಚಕ್ರಗಳ ಭಾರೀ ಸರಕು ಲಾರಿಗಳು ಯಾರ ಮುಲಾಜಿಲ್ಲದೇ ವಿಟ್ಲ ಮೂಲಕ ಕೇರಳ-ಕರ್ನಾಟಕ ಗಡಿಭಾಗದಿಂದ ರಾಜೋರೋಷವಾಗಿ ಸಂಚರಿಸುತ್ತಿವೆ. ಇದೇ ರಸ್ತೆಯಲ್ಲಿ ಈ ಹಿಂದೆ ಹತ್ತಕ್ಕೂ ಹೆಚ್ಚು ಅಪಘಾತಗಳು ನಡೆದು ಜನಸಾಮಾನ್ಯರು ಹೈರಾಣರಾಗಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!

Published

on

ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್‌ ರಸ್ಮಾ (18) ಮತ್ತು  ಮಹಮ್ಮದ್‌ ಸಿನಾನ್‌ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Continue Reading

BANTWAL

Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!

Published

on

ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.

ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Continue Reading

BANTWAL

ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್‌ ಶೆಟ್ಟಿ ಆಯ್ಕೆ

Published

on

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Continue Reading

LATEST NEWS

Trending