Connect with us

DAKSHINA KANNADA

 ಚಿಕನ್ ಸೆಂಟರ್ ಮಳಿಗೆಯಲ್ಲಿ ಅಕ್ರಮ ದನದ ಮಾಂಸ ಮಾರಾಟ..

Published

on

ಮಂಗಳೂರು: ನಗರದ ಬಜ್ಪೆಯ  ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸೆಲ್ವಾ ಚಿಕನ್ ಸೆಂಟರ್ ಮಳಿಗೆಯಲ್ಲಿ  ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು  ಬಜ್ಪೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ.

ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರನ್ನು  ಬಂಧಿಸಲಾಗಿದೆ. ಮಹಮ್ಮದ್ ಸಮೀರ್ ಮತ್ತು ಮಹಮ್ಮದ್ ಸಫಿಕ್ ಬಂಧಿತ ಆರೋಪಿಗಳಾಗಿದ್ದಾರೆ.

ಸುಮಾರು 23 ಕೆ.ಜಿ ದನದ ಮಾಂಸ ಹಾಗು ಕೃತ್ಯಕ್ಕೆ ಬಳಸಿದ್ದ ಮಾರುತಿ ಓಮ್ನಿ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಬಜ್ಪೆ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ನಾಯ್ಕ್ ಅವರು ಸಿಬ್ಬಂದಿಯೊಂದಿಗೆ ಚಿಕನ್ ಸ್ಟಾಲ್‍ಗೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ದನವನ್ನು ಎಲ್ಲಿಂದಲೋ ಕಳವು ಮಾಡಿ, ಮಾಂಸ ಮಾಡಿ ಮಾರಾಟ ನಡೆಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Click to comment

Leave a Reply

Your email address will not be published. Required fields are marked *

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

DAKSHINA KANNADA

ನರ್ಸ್‌ಗೆ ಶಾಕ್ ನೀಡಿದ ಅಂಬ್ಯುಲೆನ್ಸ್‌..! ಇದು ಮನಕಲಕುವ ಘಟನೆ..!

Published

on

ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್‌ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.

ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್‌ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್‌ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.

ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್‌ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.  ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್‌ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

Continue Reading

LATEST NEWS

Trending