Saturday, August 20, 2022

ಕಾರ್ಕಳದಲ್ಲಿ ಅಕ್ರಮ ಗೋಸಾಗಾಟ: ಓರ್ವ ಪರಾರಿ-ಕಾರಿನಲ್ಲೇ ಅಸುನೀಗಿದ ದನ

ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.


ಉಡುಪಿಯ ಮಲ್ಪೆ ಹೂಡೆಯಲ್ಲಿ ಅಕ್ರಮ ಕಸಾಯಿ ಖಾನೆ ನಡೆಸುತ್ತಿರುವ ಸಹೋದರರಾದ ಶಕೀಲ್ ಅಹಮದ್ ಮತ್ತು ಅಖಿಲ್ ಅಹಮದ್ ಬಂಧಿತ ಆರೋಪಿಗಳು.

ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ತಲ್ವಾರು ತೋರಿಸಿ ದನ ಕದಿಯುತ್ತಿದ್ದ ಸಹೋದರರು ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ಎರಡು ಜಾನುವಾರುಗಳನ್ನು ಕಳವು ಮಾಡಿ ಅವುಗಳನ್ನು ಕಾರಿನಲ್ಲಿ ಅವುಗಳಿಗೆ ಹಿಂಸೆಯಾಗುವ ರೀತಿಯಲ್ಲಿ ತುಂಬಿಸಿಕೊಂಡು ಸಾಗಿಸುತ್ತಿರುವಾಗ ಖಚಿತ ಮಾಹಿತಿಯ ಮೇರೆಗೆ ಹೆಬ್ರಿ ಪೊಲೀಸರು ಅವರನ್ನು ಸೆರೆಹಿಡಿದಿದ್ದಾರೆ.


ಈ ವೇಳೆ ಒಬ್ಬಾತ ಕಾಡಿಗೆ ಓಡಿ ಹೋಗಿ ಪರಾರಿಯಾಗಿದ್ದಾನೆ. ಇನ್ನು ಸಿಕ್ಕಿಬಿದ್ದ ಮತ್ತೋರ್ವ ಆರೋಪಿ ಕಾರು ಚಾಲಕ ದನಗಳನ್ನು ಕೊಂಡು ಹೋಗಿ ವಧೆ ಮಾಡಲು ಅದೇ ರೀತಿ ಕಸಾಯಿಖಾನೆಗೆ ಮಾರಾಟ ಮಾಡಲು ಹೋಗುತ್ತಿದ್ದೆವು ಎಂಬುದಾಗಿ ತಪ್ಪೊಪ್ಪಿಕೊಂಡಿದ್ದಾನೆ.


ಗೋವುಗಳನ್ನು ಹಿಂಸಾತ್ಮಕವಾಗಿ ಕಾರಿಗೆ ತುಂಬಿಸಿದ ಪರಿಣಾಮ ಕುತ್ತಿಗೆ ಮುರಿದು ಒಂದು ದನ ಸಾವಿಗೀಡಾಗಿತ್ತು. ಹೆಬ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics