Thursday, April 22, 2021

ಮೂಡಬಿದ್ರೆಯಲ್ಲಿ ಅಕ್ರಮ ಗೋ ಸಾಗಾಟ : ಗೋಕಳ್ಳರ ಮೇಲೆ ಪೊಲೀಸರಿಂದ ಫೈರಿಂಗ್..!

ಮೂಡಬಿದ್ರೆಯಲ್ಲಿ ಅಕ್ರಮ ಗೋ ಸಾಗಾಟ : ಗೋಕಳ್ಳರ ಮೇಲೆ ಪೊಲೀಸರಿಂದ ಫೈರಿಂಗ್..!

ಮಂಗಳೂರು :  ದ.ಕ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟದ ದಂಧೆಗೆ ಕಡಿವಾಣ ಹಾಕಲು ಮಂಗಳೂರು ಪೊಲೀಸ್‌ ಕಮಿಷನರ್ ನೀಡಿದ ಆದೇಶದ ಬೆನ್ನಲ್ಲೇ ಪೊಲೀಸ್ ಇಲಾಖೆ ಕಾರ್ಯೋನ್ಮಖವಾಗಿದೆ.

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಕಾರಿನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆಯ ಮೂಡು ಕೊಣಾಜೆ ಎಂಬಲ್ಲಿ ಇಂದು ಬೆಳಗ್ಗಿನ ಜಾವಾ ಈ ಘಟನೆ ಸಂಭವಿಸಿದೆ.

ಮಾರುತ್ತಿ ರಿಟ್ಜ್ ಕಾರಿನಲ್ಲಿ 6 ಗೋವುಗಳನ್ನು ತುಂಬಿಕೊಂಡು ಶಿರ್ತಾಡಿ ಕಡೆಯಿಂದ ತುಂಬಿಸಿ ಅಕ್ರಮವಾಗಿ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಮಾಹಿತಿ ಪಡೆದ ಮೂಡಬಿದ್ರೆ ಠಾಣಾಧಿಕಾರಿ ಬಿ.ಎಸ್.ದಿನೇಶ್ ಕುಮಾರ್ ತಂಡದಿಂದ ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ಪೊಲೀಸ್ ಜೀಪಿಗೆ ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದಾಗ ಕಾರನ್ನು ಚೇಸ್ ಮಾಡಿದ ಪೊಲೀಸರ ತಂಡ ಗುಂಡು ಹಾರಿಸಿದೆ.

ಈ ಸಂದರ್ಭ ಕಾರನಿಂದ ಹಾರಿ ತಪ್ಪಿಸಿಕೊಂಡ ಆರೋಪಿಗಳು ಪರಾರಿಯಾಗಿದ್ದು ರಿಟ್ಜ್ ಕಾರು ಮತ್ತು ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂಡಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...