Thursday, December 2, 2021

ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ- ಓರ್ವನನ್ನು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಬೆಳ್ತಂಗಡಿ: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್‌ ಅಡ್ಡಗಟ್ಟಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಒಬ್ಬನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಕಡಿರುದ್ಯಾವರ ಗ್ರಾಮದ ಕುರುಡ್ಯ ಎಂಬಲ್ಲಿಂದ ನಿನ್ನೆ ರಾತ್ರಿ ನಡೆದಿದೆ.

ಘಟನೆ ವಿವರ
ಕಸಾಯಿಖಾನೆಗಳಿಗೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಅರಿತ ಕುರುಡ್ಯದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಪೊಲೀಸರೊಂದಿಗೆ ದನ ಸಾಗಾಟದ ಪಿಕಪ್‌ ಅಡ್ಡಗಟ್ಟಿದ್ದಾರೆ.

ಈ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಓರ್ವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

ಘಟನೆಯಲ್ಲಿ ಒಂದು ಪಿಕ್‌ಅಪ್‌, ಮಾರುತಿ 800 ಕಾರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.
ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಅವ್ಯಾಹತವಾಗಿ ಅಕ್ರಮ ದನ ಸಾಗಾಟದಲ್ಲಿ ತೊಡಗಿದ್ದರು. ಪೊಲೀಸರು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...