ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಸಮೇತ ಗೋವುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ.
ಮಾ. 27ರ ಸಂಜೆ ಬಂಟ್ವಾಳ ತಾಲ್ಲೂಕು ವಿಟ್ಲ ಕೇಪು ಗ್ರಾಮದ ನೀರ್ಕಜೆ ಎಂಬಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು.
ಈ ವೇಳೆ ಬುಳ್ಳೇರಿ ಕಟ್ಟೆ ಕಡೆಯಿಂದ ಉಕ್ಕುಡ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ನಿಲ್ಲಿಸಲು ಸೂಚಿಸಿದಾಗ ಪಿಕಪ್ ಚಾಲಕ ವಾಹನವನ್ನು ನಿಲ್ಲಿಸದೇ ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ಕುಕ್ಕೆಬೆಟ್ಟು ಎಂಬಲ್ಲಿ ವಾಹನವನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ.
ಈ ವೇಳೆ ಪೊಲಿಸರು ಪರಿಶೀಲಿಸಿದಾಗ ಪಿಕ್‌ಆಪ್‌ಗೆ ಟರ್ಪಾಲು ಹೊದಿಸಿ ಒಳಗೆ 5 ಹೋರಿ ಕರುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂತು.
ಸದ್ಯ 5 ಹೋರಿ ಕರು, ಪಿಕಪ್ ವಾಹನವನ್ನು ಸ್ವಾಧೀನ ಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 4,10,000 ರೂ ಎಂದು ಅಂದಾಜಿಸಲಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ