Connect with us

DAKSHINA KANNADA

 ಅಕ್ರಮ ಪ್ರವೇಶ ಅಕ್ರಮ ಪೂಜೆ:  ಕೊಂಡಾಣ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಭಂಡಾರಮನೆಯಲ್ಲಿ ಬಹಿರಂಗಗೊಂಡಿದೆ ಒಳಜಗಳ..!

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ತೊಕ್ಕೊಟ್ಟು ಬಳಿಯ ಕಾರಣೀಕ ದೈವಸ್ಥಾನ ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮತ್ತು ಮುಂಡತ್ತಾಯ ದೈವಸ್ಥಾನದ  ವ್ಯವಸ್ಥಾಪನಾ ಸಮಿತಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ  ಭಕ್ತಾಧಿಗಳ ದಿಕ್ಕು ತಪ್ಪಿಸುವ  ಪ್ರಯತ್ನಗಳನ್ನು ಒಂದು ತಂಡ ಮಾಡುತ್ತಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಆರೋಪಿಸಿದ್ದಾರೆ. ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮತ್ತು ಮುಂಡತ್ತಾಯ ದೈವಸ್ಥಾನದ  ವಠಾರದಲ್ಲಿ ಸೋಮವಾರ ವ್ಯವಸ್ಥಾಪನಾ ಸಮಿತಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು.  ಮೇ.23 ರಂದು ವ್ಯವಸ್ಥಾಪನಾ ಸಮಿತಿ ಭಂಡಾರಮನೆಗೆ ಹಾಕಿದ ಬೀಗವನ್ನು ಒಡೆದು  ಅಕ್ರಮವಾಗಿ ಪ್ರವೇಶಗೈದ ಮುತ್ತಣ್ಣ ಶೆಟ್ಟಿ ಎಂಬವರು  ಪೂಜೆ ನೆರವೇರಿಸಿದ್ದಾರೆ.

ಕೊರೊನಾ ಕಾರಣದಿಂದ ಸ್ಥಗಿತಗೊಂಡ ಜಾತ್ರೆಗೆ ಬದಲಾಗಿ ಹೋಮ ಮಾಡಲು ಸಿದ್ಧತೆ ಮಾಡಲಾಗಿತ್ತು . ಆದರೆ ಧಾರ್ಮಿಕ ದತ್ತಿ ಇಲಾಖೆ ವ್ಯವಸ್ಥಾಪನಾ ಸಮಿತಿ ಮೂಲಕ ಭಂಡಾರಮನೆಯ ಬಾಗಿಲಿಗೆ ಹಾಕಿಸಿದ್ದ  ಬೀಗದ ಮೇಲೆ   ಮುತ್ತಣ್ಣ ಶೆಟ್ಟಿ ಎಂಬವರು ಮತ್ತೊಂದು ಬೀಗ ಹಾಕಿದ್ದರು.

ಇದರಿಂದ ಹೋಮ ನೆರವೇರಿಸಲು ಅಸಾಧ್ಯವಾಗಿತ್ತು.ಅದಕ್ಕಾಗಿ ಅರ್ಚಕ ಕಾರಂತರ ಉಪಸ್ಥಿತಿಯಲ್ಲಿ ಹೊರಗಿನಿಂದಲೇ ವ್ಯವಸ್ಥಾಪನಾ ಸಮಿತಿ ಪ್ರಾರ್ಥನೆ ನಡೆಸಿ  ವಾಪಸ್ಸಾಗಿದ್ದರು.

ಮರುದಿನ ಮುತ್ತಣ್ಣ ಶೆಟ್ಟಿ  ವ್ಯವಸ್ಥಾಪನಾ ಸಮಿತಿ ಹಾಕಿರುವ ಬೀಗವನ್ನು ಒಡೆದು, ಹಿಂದಿನ ದಿನ ತರಿಸಿದ್ದ ಪೂಜಾ ಸಾಮಗ್ರಿಗಳನ್ನು ಉಪಯೋಗಿಸಿಕೊಂಡು ಭಂಡಾರಮನೆಗೆ ಅಕ್ರಮವಾಗಿ ಪ್ರವೇಶಗೈದು ಪೂಜೆ ನೆರವೇರಿಸಿದ್ದರು.

ಈ ಮೂಲಕ  ಭಕ್ತರ ಮನಸ್ಸನ್ನು ನೋಯಿಸುವ ಉದ್ದೇಶವನ್ನು ಇಟ್ಟುಕೊಂಡಿರುವ  ತಂಡದ ವಿರುದ್ಧ   ಜಿಲ್ಲಾಧಿಕಾರಿ , ಸಹಾಯಕ ಆಯುಕ್ತರು ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ದೂರು ಸಲ್ಲಿಸಿ  ಕ್ರಮಕೈಗೊಳ್ಳಲು ಒತ್ತಾಯಿಸಲಾಗಿದೆ. ಕ್ಷೇತ್ರದ ಪಾವಿತ್ರ್ಯತೆಯನ್ನು ಉಳಿಸಬೇಕು.

ಮುಂದೆ ಇಂತಹ ಕೀಳು ನಡವಳಿಕೆ ನಡೆಯಬಾರದು ಅನ್ನುವುದೇ ಉದ್ದೇಶವಾಗಿದೆ.  ಕೊರೊನಾ ಮಹಾಮಾರಿಯಿಂದಾಗಿ ಸರಕಾರದ ಆದೇಶದಂತೆ ಜಾತ್ರೆ ನಡೆಸಲಾಗಿಲ್ಲ .

ಭಕ್ತಾಧಿಗಳು ಬರುವುದನ್ನು ಪೊಲೀಸ್ ತಡೆದಿರುವುದು, ಭಕ್ತರಿಗೆ ಕಾಣಿಕೆ ಹಾಕಲು ಅವಕಾಶ ನೀಡದಿರುವುದು ಸರಿಯಲ್ಲ. ಈ ಬಗ್ಗೆ ವ್ಯವಸ್ಥಾಪನಾ ಸಮಿತಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಮುಂದಿನ ದಿನಗಳಲ್ಲಿ ಕೊರೊನಾ ರೋಗ ದೂರವಾದ ಮೇಲೆ ಗ್ರಾಮದ ಭಕ್ತಾಧಿಗಳ ಸಭೆ ಕರೆದು ಚರ್ಚಿಸಿ ಪೂಜೆ ನಡೆಸುವ ಚಿಂತನೆ ಮಾಡಲಾಗಿದೆ.

ಭಂಡಾರಮನೆಯ ಕೀಲಿ ಕೈಯನ್ನು ಹತ್ತು ವರ್ಷಗಳ ಹಿಂದೆ ಜಾಗದ ಜಮೀನ್ದಾರರಾದ  ಸಂಪಕ್ಕ ಶೆಡ್ತಿಯವರು ಅಂದಿನ ಅಧ್ಯಕ್ಷ ದೇವಾನಂದ ಶೆಟ್ಟಿಯವರಿಗೆ ಭಂಡಾರ ಮನೆಯಲ್ಲಿ ಪ್ರಾರ್ಥನೆಯೊಂದಿಗೆ ನೀಡಿದ್ದರು.

ಸಮಿತಿ ಬದಲಾಗುತ್ತಿದ್ದ ಹಾಗೆ ಧಾರ್ಮಿಕ ಇಲಾಖೆಯಿಂದ ನೂತನ ಸಮಿತಿಗೆ ನೀಡಿದ್ದಾರೆ . ಹಳೆಯ ಬೀಗಗಳನ್ನು ಬದಲಾಯಿಸುವ ಬಗ್ಗೆಯೂ ಧಾರ್ಮಿಕ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದರು.

ಅದರಂತೆ ಮೇ 14 ರಂದು ಸಂಕ್ರಮಣ ದಿವಸ , ಅರ್ಚಕ ನಾರಾಯಣ ಮೂಲ್ಯ ಪೂಜೆ ಮುಗಿಸಿದ ಮೇಲೆ ಸತಃ ತಾವೇ ಬೀಗ ಹಾಕಿದ್ದಾರೆ. ಆ ಬೀಗದ ಮೇಲೆ ಮುತ್ತಣ್ಣ ಶೆಟ್ಟಿ ಬೇರೆ ಬೀಗವನ್ನು ಹಾಕಿದ್ದು ಮೇ.22 ರಂದು ಬೆಳಿಗ್ಗೆ ಗಣಹೋಮದ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿಯ ಗಮನಕ್ಕೆ ಬಂದಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ  ಶಿವಪ್ರಸಾದ್ ಆಚಾರ್ಯ,  ಶಂಕರ್ ಬಲ್ಯ, ದಿನಮಣಿ ರಾವ್,  ಪ್ರಮೀಳಾ ಚಂದ್ರಶೇಖರ್ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

DAKSHINA KANNADA

ನಾಳೆ ನಿಮ್ಮೂರಿಗೆ ಬರ್ತಿದ್ದಾನೆ ಮೇಘರಾಜ: ತಂಪಾಗಲಿದೆ ಇಳೆ

Published

on

ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ಈ ಬಾರಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜೂನ್ ವೇಳೆಗೆ ರಾಜ್ಯದಲ್ಲಿ ನೀರಿನ ಸಮಸ್ಯೆ ದೂರವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ

ಈ ಬಾರಿ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಸಾಧ್ಯತೆಗಳಿದ್ದು, 85.2 ಸೆಂ.ಮಿ ಮಳೆ ಬೀಳುವ ನಿರೀಕ್ಷೆಗಳಿವೆ. ಜೂನ್​, ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಕ್ರಮವಾಗಿ 19.9 ಸೆಂ.ಮೀ., 27.1 ಸೆಂ.ಮೀ., ಆಗಸ್ಟ್​ 22 ಸೆಂ.ಮೀ ಹಾಗೂ 16.1 ಸೆಂಮೀ ಮಳೆಯಾಗುವ ನಿರೀಕ್ಷೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಹೇಳಿದೆ.

ನಾಳೆ ಈ ಜಿಲ್ಲೆಗಳಲ್ಲಿ ಆಗಲಿದೆ ಮಳೆ

ನಾಳೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂಉರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

Continue Reading

DAKSHINA KANNADA

ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?

Published

on

ಬೆಂಗಳೂರು: ಸೀರೆ ಭಾರತೀಯ ಮಹಿಳೆಯ ಗುರುತು. ಐದೂವರೆಯಿಂದ ಆರು ಮೀಟರ್ ಉದ್ದದ ಈ ಸುಂದರವಾದ ಉಡುಪು ಮಹಿಳೆಯರ ಅಂದವನ್ನು ದುಪ್ಪಟ್ಟಾಗಿಸುವುದರಲ್ಲಿ ಅನುಮಾನವಿಲ್ಲ. ಆದರೆ, ಸೀರೆ ಕೂಡಾ ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬುದು ನಿಮಗೆ ಗೊತ್ತೇ? ಇದಲ್ಲದೆ, ಇತರ ಬಟ್ಟೆಗಳನ್ನು ತಪ್ಪಾಗಿ ಧರಿಸಿದರೆ ಕ್ಯಾನ್ಸರ್ ಉಂಟಾಗುತ್ತದೆ. ಸೀರೆ ಕ್ಯಾನ್ಸರ್ ಭಾರತದಲ್ಲಿ ಮಾತ್ರ ಕಂಡುಬರುತ್ತದೆ. ಏಕೆಂದರೆ ಭಾರತದಲ್ಲಿ ಮಾತ್ರ ಸೀರೆಯನ್ನು ಹೆಚ್ಚಾಗಿ ಮಹಿಳೆಯರು ಧರಿಸುತ್ತಾರೆ.

ದೆಹಲಿಯ ಪಿಎಸ್ ಆರ್ ಐ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕರ ಪ್ರಕಾರ, ಮಹಿಳೆ ಒಂದೇ ಉಡುಪನ್ನು ದೀರ್ಘಕಾಲದವರೆಗೆ ಧರಿಸಿದರೆ, ಅದು ಸೊಂಟದ ಮೇಲೆ ಉಜ್ಜಲು ಪ್ರಾರಂಭಿಸುತ್ತದೆ. ಅಲ್ಲಿ ಚರ್ಮವು ಸಿಪ್ಪೆ ಸುಲಿದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದು ಪುನರಾವರ್ತಿತವಾಗುತ್ತಾ ನಿಧಾನವಾಗಿ ಕ್ಯಾನ್ಸರ್ ಪ್ರಾರಂಭವಾಗಬಹುದು.

ಸೀರೆ ಕ್ಯಾನ್ಸರ್‌ಗೆ ಅಸ್ವಚ್ಛತೆಯೇ ಹೆಚ್ಚು ಕಾರಣ. ಹೆಚ್ಚಿನ ಶಾಖ ಮತ್ತು ಆರ್ದ್ರತೆ ಇರುವ ಪ್ರದೇಶಗಳಲ್ಲಿ ಈ ಕ್ಯಾನ್ಸರ್ ಬರುವ ಅಪಾಯ ಹೆಚ್ಚು. ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಇದರ ಪ್ರಕರಣಗಳು ಸಾಮಾನ್ಯವಾಗಿ ವರದಿಯಾಗುತ್ತವೆ. ಭಾರತದಲ್ಲಿ ಮಹಿಳೆಯರಲ್ಲಿ ಕಂಡುಬರುವ ಎಲ್ಲಾ ಕ್ಯಾನ್ಸರ್‌ಗಳಲ್ಲಿ ಸೀರೆ ಕ್ಯಾನ್ಸರ್ ಶೇಕಡಾ 1 ರಷ್ಟಿದೆ. ವೈದ್ಯಕೀಯ ಭಾಷೆಯಲ್ಲಿ ಇದನ್ನು ಸ್ಕ್ವಾಮಸ್ ಸೆಲ್ ಕಾರ್ಸಿನೋಮ ಎಂದು ಕರೆಯಲಾಗುತ್ತದೆ.

ಮುಂಬೈನಲ್ಲಿ ಕಂಡು ಬಂದ ಮೊದಲ ಪ್ರಕರಣ:

ಮುಂಬೈನ ಆರ್‌ ಎನ್ ಕೂಪರ್ ಆಸ್ಪತ್ರೆಯಲ್ಲಿ 68 ವರ್ಷದ ಮಹಿಳೆಗೆ ಸೀರೆಯಿಂದಾಗಿ ಕ್ಯಾನ್ಸರ್ ಬಂದ ಕಾರಣ ವೈದ್ಯರು ಸೀರೆ ಕ್ಯಾನ್ಸರ್ ಎಂಬ ಹೆಸರನ್ನು ನೀಡಿದ್ದಾರೆ. ತುಂಬಾ ಬಿಗಿಯಾದ ಬಟ್ಟೆಗಳನ್ನು ಗಂಟೆಗಳ ಕಾಲ ಹಾಕಿದರೆ ಅದು ದೇಹಕ್ಕೆ ಹಾನಿ ಮಾಡುತ್ತದೆ.
ಇನ್ನು ತುಂಬಾ ಬಿಗಿಯಾದ ಫಿಟ್ ಜೀನ್ಸ್ ಪುರುಷರಲ್ಲಿ ಕ್ಯಾನ್ಸರ್ ಗೆ ಕಾರಣವೆಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ತುಂಬಾ ಬಿಗಿಯಾದ ಬಟ್ಟೆಗಳನ್ನು ಗಂಟೆಗಳ ಕಾಲ ಧರಿಸಿದರೆ ಅದು ದೇಹಕ್ಕೆ ಹಾನಿ ಮಾಡುತ್ತದೆ. ಆ ಪ್ರದೇಶದಲ್ಲಿ ಆಮ್ಲಜನಕದ ಹರಿವಿಗೆ ತೊಂದರೆಯಾಗಬಹುದು.

ಸೀರೆ ಕ್ಯಾನ್ಸರ್‌ನ ಲಕ್ಷಣಗಳು:

ಸೀರೆ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳೆಂದರೆ, ಸೊಂಟದ ಸುತ್ತಲೂ ತುರಿಕೆ ಉಂಟಾಗಿ ಕಿರಿಕಿರಿ ಇರುತ್ತದೆ. ಈ ಸಮಸ್ಯೆ ಕಾಣಿಸಿದ ವ್ಯಕ್ತಿಯ ಸೊಂಟದ ಬಳಿ ವಾಸಿಯಾಗದ ಗಾಯಗಳು ಆಗಬಹುದು. ಈ ಗಾಯದಿಂದ ಕೆಟ್ಟ ವಾಸನೆ ಬರುತ್ತದೆ. ಹೆಸರೇ ಸೂಚಿಸುವಂತೆ, ಸೀರೆಯೇ ಈ ‘ಸೀರೆ ಕ್ಯಾನ್ಸರ್‌’ಗೆ ಕಾರಣವಾಗಬಹುದು. ಇತ್ತೀಚಿನ ದಿನಗಳಲ್ಲಿ ಈ ಸೀರೆ ಕ್ಯಾನ್ಸರ್ ಮಾರಣಾಂತಿಕ ರೂಪವನ್ನು ಪಡೆಯುತ್ತಿದ್ದು, ಅನೇಕ ಮಹಿಳೆಯರು ಇದಕ್ಕೆ ಬಲಿಯಾಗುತ್ತಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ ಒಂದು ಸೀರೆಯನ್ನು ತುಂಬಾ ಸಲ ಬಳಸಿ, ಅದನ್ನು ಒಗೆಯದೇ ಇರುವುದರಿಂದ, ಇಲ್ಲವಾದರೆ ತುಂಬಾ ಗಂಟೆಗಳ ಕಾಲ ಹಾಕುವುದರಿಂದ ಸೀರೆ ಕ್ಯಾನ್ಸರ್ ಬರಬಹುದು.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?
(more…)

Continue Reading

LATEST NEWS

Trending