Connect with us

BANTWAL

ಬಂಟ್ವಾಳ: ಪೊದೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಸ್ಪೋಟಕ ಪತ್ತೆ

Published

on

ಬಂಟ್ವಾಳ: ಕಲ್ಲಿನ ಕೊರೆಯ ವಠಾರದಲ್ಲಿ ಇರಿಸಿದ್ದ ಅಕ್ರಮ ಸ್ಪೋಟಕ ವಸ್ತುಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಪುಣಚ ಗ್ರಾಮದ ಎರ್ಮೆತೊಟ್ಟಿ ಎಂಬಲ್ಲಿ ನಡೆದಿದೆ.


ವಿಟ್ಲ ಪೊಲೀಸರು ರೌಂಡ್ಸ್ ನಲ್ಲಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಸ್ಪೋಟಕ ವಸ್ತುಗಳನ್ನು ಪತ್ತೆಹಚ್ಚಿದ್ದಾರೆ.

ಒಂದು ಖಾಲಿ ಮನೆಯ ಬಳಿಯ ಪೊದೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸ್ಪೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳನ್ನು ತುಂಬಿಸಿಟ್ಟಿರುವುದು ಬೆಳಕಿಗೆ ಬಂದಿದ್ದು, ಅವುಗಳನ್ನು ಪೊಲೀಸರು ತನ್ನ ಸ್ವಾದೀನಕ್ಕೆ ಪಡೆದುಕೊಂಡಿದ್ದಾರೆ.
ಜಮೀನಿನ ಬಳಿಯಿರುವ ಕಪ್ಪು ಕಲ್ಲು ಕೋರೆಯ ಕಲ್ಲುಗಳನ್ನು ಸ್ಪೋಟಕ ಬಳಸಿ ಒಡೆಯುವ ಉದ್ದೇಶದಿಂದ ಕೋರೆಯ ಮಾಲಕ ಮಹಮ್ಮದ್ ಕುಂಞಿ ಹಾಗೂ ಬ್ಲಾಸ್ಟರ್ ಅಶೋಕ್ ರವರು ಒಟ್ಟಾಗಿ ಸೇರಿಕೊಂಡು

ಸ್ಪೋಟಕಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟಿರುವುದಾಗಿ ಅಂದಾಜಿಸಲಾಗಿದೆ. ಸ್ಥಳವನ್ನು ಪರಿಶೀಲಿಸಿದಾಗ APEX POWER-90,Explosives(Classs-2) 25mmX125 gms, Manufactured by-A.P Explosives PrivateLimited

ಎಂಬುದಾಗಿ ಬರೆದಿರುವ ಜಿಲೆಟಿನ್ ಜೆಲ್-510 ಕಡ್ಡಿಗಳು, ಇದರ ಅಂದಾಜು ಮೌಲ್ಯ 6120 ರೂಪಾಯಿ ಎನ್ನಲಾಗಿದೆ.

BANTWAL

BANTWAL: ಬಸ್ – ಕಾರು ನಡುವೆ ಅಪಘಾತ; ಕಾರು ಚಾಲಕ ಗಂ*ಭೀರ

Published

on

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬಲೆನೋ ಕಾರಿನ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕನನ್ನು ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಮುಂಜಾನೆ ಈ ಅಪಘಾತ ನಡೆದಿದೆ.

ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ ಹಾಗೂ ಬೆಳ್ತಂಗಡಿಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದರೆ, ಬಸ್‌ನ ಮುಂಬಾಗ ಜಖಂಗೊಂಡಿದೆ.

ತಕ್ಷಣ ಸ್ಥಳೀಯರ ನೆರವಿನಿಂದ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಹೊರ ತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

BANTWAL

WATCH VIDEO : ಬಂಟ್ವಾಳದಲ್ಲಿ ಧರ್ಮಗುರುವಿನ ಪೈಶಾಚಿಕ ಕೃತ್ಯ; ಅಸಹಾಯಕ ವೃದ್ಧ ದಂಪತಿಗೆ ಹಿಗ್ಗಾಮುಗ್ಗ ಥಳಿತ

Published

on

ಬಂಟ್ವಾಳ : ಕ್ರೈಸ್ತ ದಂಪತಿ ಮೇಲೆ ಧರ್ಮಗುರುವೊಬ್ಬರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಟ್ಲ ಸಮೀಪದ ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ 79 ವರ್ಷ ಪ್ರಾಯದ ಗ್ರೆಗರಿ ಮೊಂತೇರೋ ಹಾಗೂ ಅವರ ಪತ್ನಿ ಮೇಲೆ ಮನೆಲಾ ಚರ್ಚ್‌ನ ಪ್ರಧಾನ ಧರ್ಮ ಗುರು ನೆಲ್ಸನ್‌ ಒಲಿವೆರಾ ಅವರು ಹಲ್ಲೆ ಮಾಡಿದ್ದಾರೆ.

ಫಾದರ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಫೆ.29 ರ ಮುಂಜಾನೆ ಈ ಘಟನೆ ನಡೆದಿದೆ. ಮನೆ ಶುದ್ಧ ಭೇಟಿ ನಿಮಿತ್ತ ವೃದ್ಧ ದಂಪತಿಗಳ ಮನೆಗೆ ಬಂದಿದ್ದ ಫಾದರ್ ಒಲಿವೆರಾ ಗೇಟ್‌ ಬಳಿಯಲ್ಲೇ ಗ್ರೆಗರಿ ಮೊಂತೆರೋ ಅವರಿಗೆ ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ.

ಇಷ್ಟೇ ಅಲ್ಲದೆ, ಕುತ್ತಿಗೆ ಹಿಡಿದು ಎಳೆದಾಡಿದ್ದು, ಕೋಲಿನಿಂದಲೂ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಗ್ರೆಗರಿ ಮೊಂತೆರಾ ಅವರ ಪತ್ನಿ ಪ್ರತಿರೋಧ ತೋರಿಸಿದ್ರೂ ಫಾದರ್ ಜೊತೆಗಿದ್ದ ವ್ಯಕ್ತಿ ವೃದ್ಧೆಯನ್ನು ಅಡ್ಡ ಗಟ್ಟಿದ್ದಾನೆ.

ಆದರೆ, ಫಾದರ್ ಅವರಿಗೂ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಫಾಧರ್ ಆಗಿದ್ದು ವಯೋ ವೃದ್ಧರಿಗೆ ಗೌರವ ಕೊಡಲು ಗೊತ್ತಿಲ್ಲದ ಇಂತಹ ನೀಚನ ವಿರುದ್ಧ ಕ್ರಮ ಕೈಗೊಳ್ಳಿ ಅಂತ ವೃದ್ಧ ದಂಪತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಫಾದರ್‌ ಪರ ಹಲವರು ವಿಟ್ಲ ಠಾಣೆ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Trending