Sunday, November 27, 2022

ಕಾಸರಗೋಡು: ಕಾರಿನಲ್ಲಿ ಮಾದಕ ವಸ್ತು ಸಾಗಾಟ-ಮೂವರ ಬಂಧನ

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಮೂವರನ್ನು ಬೇಕಲ ಡಿವೈಎಸ್ಪಿ ಸುನಿಲ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಕಳ್ನಾಡಿನ ಅರವಿಂದ ಮುರಳಿ ( 21), ಮಂಜೇಶ್ವರ ಕುಂಜತ್ತೂರಿನ ಅಬ್ದುಲ್ ಖಾದರ್ ಅಝೀಮ್ (32) ಮತ್ತು ಉಳಿಯತ್ತಡ್ಕದ ಮುಹಮ್ಮದ್ ಯಾಸಿನ್ ( 20 ) ಬಂಧಿತ ಆರೋಪಿಗಳು.


ಇವರಿಂದ 50 ಗ್ರಾಂ ಗಾಂಜಾ, ಮಾದಕ ವಸ್ತು ಒಳಗೊಂಡ ಸ್ಟ್ಯಾಂಪ್ ಮೊದಲಾದವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ತಮಗೆ ಸಿಕ್ಕ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಕಳ್ನಾಡ್‌‌ನಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ ಎಮದು ತಿಳಿದುಬಂದಿದೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...