Monday, July 4, 2022

ಕಾಸರಗೋಡು: ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ- ಆರೋಪಿ ಸಹಿತ ಚಿನ್ನ ವಶ

ಕಾಸರಗೋಡು: ಪ್ರಯಾಣಿಕನೋರ್ವ 56 ಲಕ್ಷ ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿ, ಕಸ್ಟಮ್ಸ್ ಹಾಗು ಡಿ ಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.


ವಿದ್ಯಾನಗರದ ರಹಮತ್ತುಲ್ಲಾಹಿ ರಶೀದ್ ಬಂಧಿತ ಆರೋಪಿಯಾಗಿದ್ದಾನೆ.

ಅಬುದಾಬಿಯಿಂದ ಆಗಮಿಸಿದ ಈತ 56 ಲಕ್ಷ ಮೌಲ್ಯದ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾನೆ. ಈತನಿಂದ 56 ಲಕ್ಷ ಮೌಲ್ಯದ 1,042 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ರಹಮತ್ತುಲ್ಲಾಹಿ ರಶೀದ್ ತನ್ನ ಮೊಣಕಾಲುಗಳಲ್ಲಿ ಪಾಲಿಥೀನ್ ಚೀಲದಲ್ಲಿ ಚಿನ್ನವನ್ನು ಇರಿಸಿ ಸಾಗಾಟಕ್ಕೆ ಯತ್ನಿಸಿದ್ದಾನೆ.

ಈ ವೇಳೆ ಆತನ ನಡವಳಿಕೆಯ ಮೇಲೆ ಸಂಶಯ ಬಂದ ಹಿನ್ನಲೆ ಪರಿಶೀಲಿಸಿದಾಗ ಚಿನ್ನ ಪತ್ತೆಯಾಗಿದ್ದು ಬಂಧಿತ ವಿಚಾರಣೆಯನ್ನು ಮುಂದುವರೆಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಭಾರೀ ಮಳೆ ಹಿನ್ನೆಲೆ: ಮಡಿಕೇರಿ- ಮಂಗಳೂರು ಹೆದ್ದಾರಿ ಮಧ್ಯೆ ಮಣ್ಣು ಕುಸಿತ

ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ.ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...