Friday, March 24, 2023

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 45.83 ಲಕ್ಷ ಮೌಲ್ಯದ ಚಿನ್ನ ವಶ

ಮಂಗಳೂರು: ದೇಹದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಹಾಗೂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.


ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದು, ತಪಾಸಣೆ ವೇಳೆ ಅವನಲ್ಲಿ 45,83,160 ರೂ. ಮೌಲ್ಯದ 24 ಕ್ಯಾರೆಟ್‌ನ 878 ಗ್ರಾಂ ಚಿನ್ನ ಪತ್ತೆಯಾಗಿದೆ.

ಬಂಟ್ವಾಳ ಮೂಲದ ಪ್ರಯಾಣಿಕ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್‌ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics