ಮಂಗಳೂರು: ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಕ್ಯಾರೆಟ್ ನ 1.36 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಒಂದು ಪ್ರಕರಣದಲ್ಲಿ ಓರ್ವ ಪ್ರಯಾಣಿಕನಿಂದ 49.74 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಮಹಿಳೆಯಿಂದ 86,89,440 ರೂಪಾಯಿ ಮೌಲ್ಯದ 1.684 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಈಕೆ ಒಳವಸ್ತ್ರ ಮಾದರಿಯ ಬಟ್ಟೆಯಲ್ಲಿ ಹಾಗೂ ಸ್ಯಾನಿಟರಿ ಪ್ಯಾಡ್‌ನಲ್ಲಿಟ್ಟು ಚಿನ್ನ ಸಾಗಿಸುತ್ತಿದ್ದಳು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.