ಮಂಗಳೂರು: ಒಳ ಉಡುಪಿನಲ್ಲಿ ಚಿನ್ನವಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ.
ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.
ಈತನಿಂದ 364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ 18 ಲಕ್ಷದ 95 ಸಾವಿರದ 400 ರೂ ಆಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯ ರೂಪದಲ್ಲಿ ಮರೆ ಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.