Friday, July 1, 2022

ಟ್ರಾಲಿ ಬ್ಯಾಗಿನಲ್ಲಿ ಅಕ್ರಮ ಚಿನ್ನ ಸಾಗಾಟ; ಆರೋಪಿ ಕಸ್ಟಮ್ಸ್ ಅಧಿಕಾರಿ ವಶಕ್ಕೆ..!

ಟ್ರಾಲಿ ಬ್ಯಾಗಿನಲ್ಲಿ ಅಕ್ರಮ ಚಿನ್ನ ಸಾಗಾಟ; ಆರೋಪಿ ಕಸ್ಟಮ್ಸ್ ಅಧಿಕಾರಿ ವಶಕ್ಕೆ..!

ಮಂಗಳೂರು: ಟ್ರಾಲಿ ಬ್ಯಾಗ್‌ನೊಳಗೆ ಚಿನ್ನವನ್ನಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಏರ್ಪೋರ್ಟಿನಲ್ಲಿ ಬಂಧಿಸಿದ್ದಾರೆ. ಈತನಿಂದ 350 ಗ್ರಾಂ ತೂಕದ ಶುದ್ಧ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದ ಇದರ ಮೌಲ್ಯ 16,52,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಗುಪ್ತಚರ ಇಲಾಖೆ ನೀಡಿದ ನಿಖರ ಮಾಹಿತಿಯನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದರು. ಆರೋಪಿ ಮುರುಡೇಶ್ವರ ಮೂಲದ ಮೊಹಮ್ಮದ್ ಅವನ್ ಎಂಬಾತನನ್ನು ಬಂಧಿಸಲಾಗಿದೆ.ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದ ಈತನ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಟ್ರಾಲಿ ಬ್ಯಾಗ್‌ ಪರಿಶೀಲಿಸಿದಅಗ ಬ್ಯಾಗ್ ಬೀಡಿಂಗ್‌ನಲ್ಲಿ ಮರೆಮಾಚುವ ಮೂಲಕ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದಾನೆ.

ಕಾರ್ಯಾಚರಣೆಯಲ್ಲಿ ಡಾ.ಕಪಿಲ್ ಗಡೆ I.R.S ಉಪ ಆಯುಕ್ತರು ಮತ್ತು ನಾಗೇಶ್ ಕುಮಾರ್ ಅಧೀಕ್ಷಕರು, ಸುಬೆಂಡು ಬೆಹ್ರಾ ಮತ್ತು ನವೀನ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಮೂಡುಬಿದಿರೆ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಕಚೇರಿ ನಿರ್ಮಾಣಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು.ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್,...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...