Connect with us

DAKSHINA KANNADA

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಮಳೆ : ಮತ್ತೆ 45 ಲಕ್ಷ ಮೌಲ್ಯದ ಅಕ್ರಮ ಚಿನ್ನ ವಶ..!

Published

on

ಮಂಗಳೂರು :  ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದಲ್ಲಿ ಸುಮಾರು 45  ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ.

ದುಬೈನಿಂದ ಮಂಗಳೂರಿಗೆ ಬಂದಿಳಿದ ಪ್ರಯಾಣಿಕರನ್ನು ತಪಸಾಣೆಗೆ ಒಳಪಡಿಸುತ್ತಿರುವ ಸಂದರ್ಭ ನಾಲ್ವರು ಪುರುಷ ಪ್ರಯಾಣಿಕರು ಪೇಸ್ಟ್ ರೂಪದಲ್ಲಿರುವ  ಚಿನ್ನವನ್ನು ಎರಡು ಜೊತೆ ಚಪ್ಪಲಿ ಹಾಗು ಬನಿಯನ್ ಬಚ್ಚಿಟ್ಟು ಸಾಗಿಸಲು ಯತ್ನಿಸಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಇವರ ಬಳಿ ಇದ್ದ   897 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಇದರ ಒಟ್ಟು ಮೌಲ್ಯ  45 ಲಕ್ಷದ 65 ಸಾವಿರದ 730 ರೂಪಾಯಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ…

 

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’

Published

on

ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.

ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

 

ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

ಗುರುಪುರ : ನಗರದ ಹಲವು ಅಂಗಡಿಗಳಲ್ಲಿ ಕಳ್ಳತನ

Published

on

ಬಜಪೆ: ಎಲೆಕ್ಟ್ರಾನಿಕ್‌ ಅಂಗಡಿ, ಬೇಕರಿ, ತರಕಾರಿ ಅಂಗಡಿ ಹಾಗೂ ಬಂಡ ಶಾಲೆಯ ಒಂದು ಗೂಡಂಗಡಿಗೆ ಶುಕ್ರವಾರದ ರಾತ್ರಿ ವೇಳೆಯಲ್ಲಿ ಕಳ್ಳರು ನುಗ್ಗಿ, ಮೊಬೈಲ್‌, ಎಲೆಕ್ಟ್ರಾನಿಕ್‌ ಸಾಮಾಗ್ರಿ, ಚಿನ್ನದ ಉಂಗುರ, ನಗದು, ಬೇಕರಿಯಿಂದ ತಿಂಡಿ, ನಗದು, ತರಕಾರಿ ಅಂಗಡಿಯಿಂದ ನಗದು ನಾಣ್ಯ, ಸಿಗರೇಟ್‌, ಗೂಡಂಗಡಿಯಿಂದ ಬಿಸ್ಕತ್‌ನ್ನು ಕಳವು ಮಾಡಿರುವ ಘಟನೆ ಗುರುಪುರ ಪೇಟೆಯಲ್ಲಿ ನಡೆದಿದೆ.


ಗುರುಪುರ ಪೇಟೆಯ ಉಮೇಶ್‌ ಭಟ್‌ ರ ಎಲೆಕ್ಟ್ರಾನಿಕ್‌ ಅಂಗಡಿಗೆ ನುಗ್ಗಿ 12 ಮೊಬೈಲ್‌ ಫೋನ್‌, 20 ಸಾವಿರ ರೂಪಾಯಿ ಮೊತ್ತದ ಇಲೆಕ್ಟ್ರಾನಿಕ್‌ ಸಾಮಾಗ್ರಿಗಳು, 60 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಉಂಗುರ, ಸುಮಾರು 25 ಸಾವಿರ ರೂಪಾಯಿ ನಗದು ಕಳವು ಮಾಡಲಾಗಿದೆ. ಉಮೇಶ್‌ ನ ಸಹೋದರ ರಮೇಶ್‌ ಭಟ್‌ ರ ಬೇಕರಿ ಅಂಗಡಿಗೆ ನುಗ್ಗಿದ ಕಳ್ಳರು ಬೇಕರಿ ತಿಂಡಿಗಳನ್ನು ಹಾಗೂ ನಗದುಗಳನ್ನು ಶಟರ್‌ ಬೀಗ ಒಡೆದು ಕಳವು ಮಾಡಿದ್ದಾರೆ. ಸಂಶುದ್ದೀನ್‌ ನ ತರಕಾರಿ ಅಂಗಡಿಯ ಮರದ ಬಾಗಿಲಿನ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ಡಬ್ಬಿಯಲ್ಲಿದ್ದ ಹತ್ತು ರೂಪಾಯಿಯ ನ್ಯಾಣ ಸುಮಾರು 10 ಸಾವಿರ ರೂಪಾಯಿ ನಗದು, ಸುಮಾರು 10ಸಾವಿರ ರೂಪಾಯಿ ಮೌಲ್ಯದ ಸಿಗರೇಟ್‌ ಸಹಿತ 20 ಸಾವಿರ ರೂಪಾಯಿ ಮೌಲ್ಯದ ಸೊತ್ತು ಕಳವು ಮಾಡಿದ ಕಳ್ಳರು ಅಂಗಡಿಯಲ್ಲಿನ ಫ್ರೀಜ್‌ನಲ್ಲಿದ್ದ ಮೊಸರನ್ನು ಕುಡಿದಿದ್ದಾರೆ ಹಾಗೂ ಚೆಲ್ಲಿದ್ದಾರೆ. ಅಂಗಡಿಯಲ್ಲಿದ್ದ ಅನಾನಸನ್ನು ತುಂಡು ಮಾಡಿ,ತಿಂದಿದ್ದಾರೆ. ಇಲ್ಲಿ ಕಳ್ಳರು ಹಲವು ಹೊತ್ತು ಕಾಲ ಕಳೆದಿರುವುದು ಕಂಡು ಬಂದಿದೆ.ಬಂಡಸಾಲೆಯಲ್ಲಿ ಧರ್ಮಣ ಪೂಜಾರಿ ಗೂಡಂಗಡಿಯ ಶಟರ್‌ನ ಬೀಗ ಮುರಿದು ಬಿಸ್ಕತ್‌ನ್ನು ಕಳವು ಮಾಡಿದ್ದಾರೆ.

ಸುಮಾರು ರಾತ್ರಿ 2 ರಿಂದ 3 ಗಂಟೆಯೊಳಗೆ ಈ ಕಳವು ನಡೆದಿದೆ. ಇದು ಒಂದು ಕಳ್ಳರ ತಂಡವಾಗಿದ್ದು, ಗುರುಪುರ ಪೇಟೆಯಲ್ಲಿ ಸಿಸಿ ಕ್ಯಾಮಾರದಲ್ಲಿ ಕಳ್ಳರ ಸುಳಿವು ಸಿಗುವ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕಳವಿನ ಬಗ್ಗೆ ಮಾಹಿತಿ ಪಡೆದು ಹೇಳಿಕೆ ತೆಗೆದುಕೊಂಡು ಹೋಗಿದ್ದಾರೆ.

Continue Reading

DAKSHINA KANNADA

ಸಾರ್ವಜನಿಕ ಶೌಚಾಲಯದಲ್ಲಿದ್ದ ಮಹಿಳೆಯ ಪೋಟೋ ತೆಗೆದು ಪರಾರಿಯಾದ ಕಿಡಿಗೇಡಿ

Published

on

ಸುಳ್ಯ: ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಹಿಂಬದಿ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ಸ್ಟ್ಯಾಂಡ್‌ ಬಳಿ  ಶನಿವಾರ (ಜ.4) ರಾತ್ರಿ ನಡೆದಿದೆ.

ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಈ ಭಾಗದ ಕಿಟಕಿಯ ಗ್ಲಾಸ್ ಸರಿದಿದ್ದು, ಸರಿದ ಭಾಗದಿಂದ ಫೋಟೋವನ್ನು ಕ್ಲಿಕ್ಕಿಸಿದ್ದಾನೆ. ಈ ಸಂಧರ್ಭ ಆ ಮಹಿಳೆ ಜೋರಾಗಿ ಕಿರುಚಿಕೊಂಡ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಮಹಿಳೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

 

ಇದನ್ನೂ ಓದಿ : ವೇಶ್ಯಾವಾಟಿಕೆ: ಇಬ್ಬರು ಆರೋಪಿಗಳ ಬಂಧನ, ಯುವತಿಯ ರಕ್ಷಣೆ

 

ಬಸ್ ನಿಲ್ದಾಣದ ಸಿಬ್ಬಂದಿಯನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದು, ಶೌಚಾಲಯದ ಭಾಗದ ಅವ್ಯವಸ್ಥೆಯ ಬಗ್ಗೆ ಶೀಘ್ರವಾಗಿ ಸರಿಪಡಿಸುವಂತೆ ಸೂಚನೆಯನ್ನು ನೀಡಿದ್ದಾರೆ.

Continue Reading

LATEST NEWS

Trending

Exit mobile version