ಮಂಗಳೂರು ವಿಮಾನ ನಿಲ್ದಾಣದಲ್ಲಿ ರೂ 9.39 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನ ವಶ
ಮಂಗಳೂರು: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್‌ಇಂಡಿಯಾ ವಿಮಾನದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಸಮೀಪದ ಮುಹಮ್ಮದ್ ಮುಹೀರ್ ಪಟ್ಲ (24) ಬಂಧಿತ ಆರೋಪಿ.
ಬುಧವಾರ ಸಂಜೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದಾಗ ಮುಹೀರ್ ಬಳಿಯಿದ್ದ ಎಮೆರ್ಜೆನ್ಸಿ ಲೈಟ್ ಮತ್ತು ಸೋಲಾರ್ ವಾಲ್‌ಲೈಟ್‌ನೊಳಗೆ 233.18 ಗ್ರಾಂ ತೂಕದ ಚಿನ್ನವನ್ನು ಅಡಗಿಸಿಟ್ಟಿರುವುದು ಕಂಡು ಬಂತು.
ತಕ್ಷಣ ಮುಹೀರ್‌ನನ್ನು ಪೊಲೀಸರು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಚಿನ್ನದ ಮೌಲ್ಯ 9.39 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಮಂಗಳೂರು/ಬೆಂಗಳುರು : ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಬ್ಲಾ*ಸ್ಟ್ ಆಗಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಇಂದು (ಜ.6) ಮುಂಜಾನೆ ನಡೆದಿದೆ.
ಮೂಲತಃ ಕೇರಳದವರಾದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಗಾ*ಯಾಳುಗಳು ಎಂದು ಗುರುತಿಸಲಾಗಿದೆ.
ಇಬ್ಬರೇ ಯುವಕರು ಆ ಮನೆಯಲ್ಲಿ ವಾಸವಿದ್ದರು. ಓರ್ವನಿಗೆ ಮೈ-ಕೈಗೆಲ್ಲಾ ಗಾ*ಯ ಹಾಗೂ ಮತ್ತೋರ್ವನ ತಲೆ-ಕೈಕಾಲುಗಳಿಗೆ ಪೆ*ಟ್ಟು ಬಿದ್ದಿದೆ. ಸ್ಪೋ*ಟಕ್ಕೆ ಕಾರಣವೇನು ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಆದರೆ, ಇಡೀ ಕಟ್ಟಡ ಸ್ಫೋ*ಟದ ಕಾರಣದಿಂದ ಧ್ವಂ*ಸಗೊಂಡಿದೆ.
ಗಾ*ಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆ ಗೋಡೆಗಳು, ಕಿಟಕಿ, ಬಾಗಿಲು, ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳೂ ಸ್ಫೋ*ಟದ ತೀವ್ರತೆಗೆ ಭಾರೀ ಹಾ*ನಿಯಾಗಿದೆ. ಈ ಘಟನೆಯಿಂದ ಸ್ಥಳೀಯರು ಗಾ*ಬರಿಗೊಂಡಿದ್ದು, ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನ್ಯಾಷನಲ್ ಸ್ಟಾರ್ ಯಶ್ ಅವರು ಇದೇ ಜ.8ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ತಿದ್ದಾರೆ. ಈ ದಿನ ‘ಟಾಕ್ಸಿಕ್’ ಚಿತ್ರದ ಬಗ್ಗೆ ಏನಾದರೂ ಅಪ್‌ಡೇಟ್ ಸಿಗಬಹುದು ಎಂದು ನಿರೀಕ್ಷಿಸಿದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ಚಿತ್ರತಂಡದ ಕಡೆಯಿಂದ ಬಿಗ್ ನ್ಯೂಸ್‌ವೊಂದು ಸಿಕ್ಕಿದೆ. ಸಿನಿಮಾ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.
ಯಶ್ ಬರ್ತ್‌ಡೇಯಂದು (ಜ.8) ಬೆಳಗ್ಗೆ 10:25ಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ (Toxic) ಬಗ್ಗೆ ಅಪ್‌ಡೇಟ್ ಸಿಗಲಿದೆ ಎಂದು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಯಶ್ ಕೂಡ ಇದೇ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಸದ್ಯ ರಿಲೀಸ್ ಆಗಿರೋ ಪೋಸ್ಟರ್‌ನಲ್ಲಿ ಯಶ್ ಅವರು ಹಳೆಯ ಕಾಲದ ಕಾರಿನ ಮೇಲೆ ನಿಂತಿದ್ದಾರೆ. ಅವರ ಬಾಯಲ್ಲಿ ಸಿಗರೇಟ್ ಇದೆ. ತಲೆಗೆ ಹ್ಯಾಟ್ ಧರಿಸಿದ್ದಾರೆ. ಇದು ಅವರ ಗೆಟಪ್ ಎಂದು ಹೇಳಲಾಗುತ್ತಿದೆ. ಈ ಮೊದಲು ಟೈಟಲ್ ಟೀಸರ್ ಅನೌನ್ಸ್ ಮಾಡುವಾಗಲೂ ಯಶ್ ಅವರು ತಲೆಗೆ ಹ್ಯಾಟ್ ಧರಿಸಿಯೇ ಕಾಣಿಸಿಕೊಂಡಿದ್ದರು. ಇದೇ ಲುಕ್ ಸಿನಿಮಾದಲ್ಲೂ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಫ್ಯಾನ್ಸ್ ಜ.8ರಂದು ಯಶ್ ಲುಕ್ ನೋಡಲು ಕಾಯುತ್ತಿದ್ದಾರೆ.
ಇನ್ನೂ ಜ.8ರಂದು ಬೆಂಗಳೂರಿನಲ್ಲಿ ಇರುವುದಿಲ್ಲ ಬರ್ತ್‌ಡೇ ಆಚರಣೆ ಮಾಡಲ್ಲ ಎಂದು ಫ್ಯಾನ್ಸ್ ಯಶ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.
ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದಿದ್ದರು.
ವಡೋದರ: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಗುಜರಾತ್‌ನ ಧನ್ಸೂರಾ ಗ್ರಾಮದ ಹತ್ತು ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನ ಬಾಲಕನ ಜೊತೆ ಓಡಿ ಹೋಗಿರುವ ಘಟನೆ ನಡೆದಿದೆ.
ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್ ಖಾತೆಯನ್ನು ಬಳಸಿ 16 ವರ್ಷದ ಬಾಲಕನ ಜೊತೆ ಚಾಟಿಂಗ್ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್ ಆತ್ಮೀಯತೆಗೆ ತಿರುಗಿದೆ.
ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ ಬಾಲಕಿಯ ಮನೆಯವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಕಿಡ್ನಾಪ್ ಮಾಡಿರಬಹುದೆನ್ನುವ ಸಂಶಯದ ಮೇರೆಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ.
ತಾವಿಬ್ಬರು ಇನ್ಸ್ಟಾಗ್ರಾಮ್ ಮೂಲಕ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದೇವೆ. ತಮ್ಮ ಮೂವರು ಸ್ನೇಹಿತರ ಸಹಾಯ ಪಡೆದು ಓಡಿಹೋಗಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ಮುಂದೆ ಇಬ್ಬರೂ ಅಪ್ರಾಪ್ತರು ಹೇಳಿದ್ದಾರೆ. ಸದ್ಯ ಇಬ್ಬರನ್ನು ಬಾಲಾಪರಾಧಿಗ್ರಹಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.