Connect with us

LATEST NEWS

ಉಡುಪಿ ಬೈಂದೂರಿನಲ್ಲಿ ಅಕ್ರಮ ಗಾಂಜಾ ಪತ್ತೆ : ಐದು ಆರೋಪಿಗಳ ಬಂಧನ

Published

on

ಉಡುಪಿ ಬೈಂದೂರಿನಲ್ಲಿ ಅಕ್ರಮ ಗಾಂಜಾ ಪತ್ತೆ : ಐದು ಆರೋಪಿಗಳ ಬಂಧನ

ಉಡುಪಿ: ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದಟಾರೋಪದಲ್ಲಿ ದಾಳಿ ನಡೆಸಿದ ಬೈಂದೂರು ಪೊಲೀಸರು ಗಾಂಜಾ ಹಾಗೂ ಐದು ಜನ ಆರೋಪಿಗಳನ್ನು ಬಂಧಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಧಿತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ(24), ಕೇರಳ ತಿರುವನಂತಪುರಂ ನಿವಾಸಿ ಯದುನಾರಾಯಣ(21), ಬೈಂದೂರು ಬಿಜೂರು ನಿವಾಸಿ ಗುರುರಾಜ್ ಪೂಜಾರಿ(25), ಉಪ್ಪುಂದ ನಿವಾಸಿ ಸುನಿಲ್ ಪೂಜಾರಿ(26) ಮತ್ತು ಬಿಜೂರು ನಿವಾಸಿ ರವಿ(25) ಎಂದು ಗುರುತಿಸಲಾಗಿದೆ.

ಸೆಪ್ಟಂಬರ್ 2ರಂದು ಬೆಳಗ್ಗಿನ ಜಾವ 3 ಗಂಟೆಗೆ ಬೈಂದೂರು ಪೊಲಿಸ್ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯಕ್ ಅವರಿಗೆ ದೊರಕಿದ ಅಧಿಕೃತ ಮಾಹಿತಿ ಆಧರಿಸಿ ಉಪ್ಪುಂದದ ಪ್ರಸಿದ್ಧ ಲಾಡ್ಜಿಗೆ ದಾಳಿ ನಡೆಸಲಾಗಿತ್ತು.

ದಾಳಿ ಸಂದರ್ಭ ಲಾಡ್ಜಿನ ರೂಮಿನೊಳಗೆ ಗಾಂಜಾ ಸೇವಿಸುತ್ತಿದ್ದುದು ಪತ್ತೆಯಾಗಿದೆ. ಅಲ್ಲದೇ ಆರೋಪಿ ಯೋಗೇಶ್ ಗಾಣಿಗ ಎಂಬಾತನ ಬ್ಯಾಗಿನಲ್ಲಿ 40 ಗ್ರಾಂ ಗಾಂಜಾ ಪತ್ತೆಯಾಗಿದೆ.

ದಾಳಿ ಸಂದರ್ಭ ಆರೋಪಿಗಳಿಗೆ ಭಟ್ಕಳ ಮೂಲದ ಶಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನುವುದು ತಿಳಿದು ಬಂದಿದೆ. ಬ್ಯಾಗಿನಲ್ಲಿ ಗಾಂಜಾ ಸೇವಿಸಲು ಬಳಸುವ ಒಸಿಬಿ ಸ್ಲಿಮ್ ಪ್ರೀಮಿಯಂ ಎನ್ನುವ ಕಾಗದದ ಚೂರುಗಳು ಪತ್ತೆಯಾಗಿವೆ.

ಆರೋಪಿತರಿಂದ 6 ಮೊಬೈಲ್ ಫೋನ್ ಗಳು, 3 ದ್ವಿಚಕ್ರ ವಾಹನಗಳು ಸೇರಿದಂತೆ ರೂ. 1,71,500.00 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ

Published

on

ಮೈಸೂರು : ಶುಕ್ರವಾರ ಮತದಾನ ನಡೆಯಲಿದೆ. ಶನಿವಾರ ಹಾಗೂ ಭಾನುವಾರ ರಜೆ ಇರುತ್ತೆ. ಹಾಗಾಗಿ ಮೈಸೂರಿಗೆ ಪ್ರವಾಸ ಬೆಳೆಸೋಣ ಅಂತ ನೀವಂದುಕೊಂಡಿದ್ರೆ ಅದು ಸಾಧ್ಯವಿಲ್ಲ. ಯಾಕೆಂದ್ರೆ, ಮೈಸೂರಿನ ಪ್ರವಾಸಿ ತಾಣಗಳು ಏಪ್ರಿಲ್ 26 ರಂದು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಹೀಗಾಗಿ ಈ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 26 ರಂದು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ರೆಸಾರ್ಟ್ ಬುಕ್ಕಿಂಗ್ ನಿರ್ಬಂಧ

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲೂ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ. ಹಾಗಾಗಿ ಏಪ್ರಿಲ್ 25 ಹಾಗೂ 26 ರಂದು ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ಬೇರೆ ಬೇರೆ ಜಿಲ್ಲೆಯ ಪ್ರವಾಸಿಗರ ಬುಕ್ಕಿಂಗ್ ಸ್ವೀಕರಿಸಬಾರದು ಎಂದು ಡಿಸಿ ಮೀನಾ ನಾಗರಾಜ್ ರೆಸಾರ್ಟ್ ಮಾಲಕರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ನಂದಿ ಗಿರಿಧಾಮಕ್ಕೂ ನಿರ್ಬಂಧ :

ನಂದಿ ಗಿರಿಧಾಮಕ್ಕೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇತ್ತೀಚೆಗೆ ಆದೇಶ ಹೊರಡಿಸಿದೆ. ಏಪ್ರಿಲ್ 25 ಹಾಗೂ 26 ರಂದು ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

Continue Reading

DAKSHINA KANNADA

ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Published

on

ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.


ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Continue Reading

FILM

ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

Published

on

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತುಗಳು ಬಹಳ ಸಮಯದಿಂದ ಕೇಳಿ ಬರುತ್ತಿದೆ. ನಟಿಯರು ನಟರ ಬಗ್ಗೆ, ನಿರ್ಮಾಪಕರು, ನಿರ್ದೇಶಕರುಗಳ ಬಗ್ಗೆ ಆರೋಪಗಳನ್ನು ಮಾಡುವ ಸುದ್ದಿಗಳು ಹರಿದಾಡುತ್ತಿರುತ್ತಿವೆ. ಇದೀಗ ರಿಯಾಲಿಟಿ ಶೋ ಸರದಿ.

ಡ್ಯಾನ್ಸಿಂಗ್ ಕ್ವೀನ್ ಮನೀಶಾ ರಾಣಿ ಆರೋಪ:


ಸಿನಿ ಇಂಡಸ್ಟ್ರಿಯಲ್ಲಿದ್ದ ಕಾಸ್ಟಿಂಗ್ ಕೌಚ್‌ ಈಗ ಟಿವಿ ರಿಯಾಲಿಟಿ ಶೋಗಳಲ್ಲೂ ನಡಿತಾ ಇದೆಯಾ ? ಇಂತಹ ಒಂದು ಆರೋಪವನ್ನು ಡ್ಯಾನ್ಸಿಂಗ್ ರಿಯಾಲಿಟಿ ಶೋ ‘ಝಲಕ್ ದಿಖ್ಲಾಜಾ ‘ ಸೀಸನ್‌ 11 ಗೆದ್ದಿದ್ದ ಡ್ಯಾನ್ಸಿಂಗ್ ಕ್ವೀನ್ ಮನೀಶಾ ರಾಣಿ ಅವರು ಆರೋಪಿಸಿದ್ದಾರೆ.
ತನ್ನ ಡ್ಯಾನ್ಸ್ ಮೂವ್ಸ್ ಮತ್ತು ಎಲ್ಲರೊಂದಿಗೆ ಬೆರೆಯುವ ಸ್ವಭಾವದಿಂದ ಮನೀಶಾ ರಾಣಿ ಜನರ ಮನ ಗೆದ್ದಿದ್ದರು. ಇತ್ತೀಚೆಗೆ ಬಿಗ್‌ ಬಾಸ್ ಒಟಿಟಿ ಸೀಸನ್ 2 ನಲ್ಲೂ ಕಾಣಿಸಿಕೊಂಡಿದ್ದ ಮನೀಶಾ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದರು. ಈ ವೇಳೆ ಒಂದು ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್‌ ಹೆಸರಿನಲ್ಲಿ ವ್ಯಕ್ತಿಯೊಬ್ಬ ತನ್ನನ್ನು ಮೋಸ ಮಾಡಿದ್ದಾಗಿ ಹೇಳಿದ್ದಾರೆ. ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬರಲು ಹೇಳುತ್ತಿದ್ದ ಎಂದು ಆರೋಪಿಸಿದ್ದಾರೆ.

ಬಿಗ್‌ ಬಾಸ್ ತಂಡದ ಸದಸ್ಯನಿಂದ ಕರೆ :

ಸಂದರ್ಶನದಲ್ಲಿ ಮಾತನಾಡಿದ ಮನೀಶಾ ರಾಣಿ, “ನಾನು ಮುಂಬೈನಲ್ಲೂ ಕಾಸ್ಟಿಂಗ್ ಕೌಚ್ ಎದುರಿಸಿದ್ದೇನೆ. ನಾನೂ ಸಂಪೂರ್ಣವಾಗಿ ಅದಕ್ಕೆ ಬಲಿಯಾಗದೇ ಇದ್ರೂ ಬಿಗ್‌ ಬಾಸ್ ತಂಡದ ಸದಸ್ಯ ಎಂದು ಹೇಳಿಕೊಂಡಿದ್ದ ವ್ಯಕ್ತಿ ನನ್ನನ್ನು ಬೇರೆ ಬೇರೆ ಕಡೆಗಳಿಗೆ ಕರೆಸಿಕೊಂಡಿದ್ದ” ಎಂದು ಹೇಳಿದ್ದಾರೆ.

“ಮನೆಗೆ ವಾಪಾಸಾಗಿದ್ದ ಸಮಯದಲ್ಲಿ ಅಡಿಷನ್ ಪ್ರಾರಂಭವಾಗಿದೆ ಎಂದು ಮುಂಬೈಗೆ ಕರೆಸಿಕೊಂಡಿದ್ದ. ಹೀಗಾಗಿ ತರಾತುರಿಯಲ್ಲಿ ನಾನು ಮುಂಬೈಗೆ ಬಂದಿದ್ದೆ. ಆದ್ರೆ ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದು ಅದಕ್ಕೆ ನಾನು ನಿರಾಕರಿಸಿದ್ದೆ. ಅದಕ್ಕೆ ಆತನಿಗೆ ನನ್ನ ಮೇಲೆ ಕೋಪ ಬಂದಿತ್ತು” ಎಂದು ಹೇಳಿದ್ದಾರೆ.

‘ಝಲಕ್ ದಿಖ್ಲಾ ಜಾ’ ಕಾರ್ಯಕ್ರಮ ಮೂಲಕ ಸ್ಟಾರ್ ಪಟ್ಟ


ಮೂಲತಃ ಬಿಹಾರದ ನಿವಾಸಿ ಆಗಿರೋ ಮನೀಶಾ ರಾಣಿ ಅವರು ‘ಝಲಕ್ ದಿಖ್ಲಾಜಾ’ 11 ನೇ ಸೀಸನ್ ಗೆಲ್ಲುವ ಮೂಲಕ ಜನಮನ್ನಣೆ ಗಳಿಸಿದರು. ಮನೀಶಾ ರಾಣಿ ಈ ಪ್ರಶಸ್ತಿ ಗೆಲ್ಲುವುದಕ್ಕೂ ಮೊದಲು ಜೀವನದಲ್ಲಿ ಸಾಕಷ್ಟು ಸಂಘರ್ಷ ಅನುಭವಿಸಿದ್ದಾರೆ.
ತಾಯಿಯನ್ನು ಕಳೆದುಕೊಂಡು ತಂದೆಯ ನೆರಳಲ್ಲಿ ಬೆಳೆದ ಮನೀಶಾ ರಾಣಿ ಡ್ಯಾನ್ಸರ್ ಆಗಲು ಅಡ್ಡಿಯಾಗಿದ್ದೇ ಆಕೆಯ ತಂದೆ. ಹೀಗಾಗಿ 12 ನೇ ತರಗತಿಯಲ್ಲಿ ಮನೆ ಬಿಟ್ಟು ಕೊಲ್ಕತ್ತಾ ಸೇರಿದ ಮನಿಷಾ ಮದುವೆ ಸಮಾರಂಭದಲ್ಲಿ ಊಟ ಬಡಿಸುವ ಕೆಲಸ ಆರಂಭಿಸಿದ್ದರು. ಅಲ್ಲಿಂದ ಬಳಿಕ ಬ್ಯಾಗ್‌ರೌಂಡ್ ಡ್ಯಾನ್ಸರ್ ಆಗಿ ಕೆಲಸ ಆರಂಭಿಸಿದ ಮನೀಶಾ ಬಳಿಕ ಅದನ್ನೂ ಬಿಟ್ಟು ಟಿಕ್‌ಟಾಕ್ ಮೂಲಕ ತನ್ನ ನೃತ್ಯವನ್ನು ಜನರಿಗೆ ತೋರಿಸಲು ಆರಂಭಿಸಿದರು.

ಇದನ್ನೂ ಓದಿ : ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?

ಇದು ಗುಡಿಯಾ ಹಮಾರಿ ಸಭಿ ಪೆ ಭಾರಿ ತಯಾರಕರ ಗಮನಕ್ಕೆ ಬಂದು ಆಕೆಗೆ ಅವಕಾಶ ನೀಡಿದ್ರು. ಅಲ್ಲಿಂದ ಆರಂಭವಾದ ಮನೀಷಾ ರಾಣಿ ಜರ್ನಿ ಇಂದು ಆಕೆಯನ್ನು ಟಿವಿ ಲೋಕದ ಸ್ಟಾರ್ ಆಗಿ ಮಾಡಿದೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಫೇಮಸ್ ಆಗಿರೋ ಮನಿಷಾ 12.5 ಮಿಲಿಯನ್‌ಗಿಂತಲೂ ಹೆಚ್ಚು ಜನ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.

Continue Reading

LATEST NEWS

Trending