BANTWAL
ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಡಿಸಿ ಕೊರಳ ಪಟ್ಟಿ ಹಿಡಿಯುತ್ತೇವೆ: ಜಗದೀಶ್ ಕಾರಂತ್ ಹೇಳಿಕೆ ವೈರಲ್
ಬಂಟ್ವಾಳ: ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಹಾಗೂ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವುದರ ವಿರುದ್ಧ ಜನಜಾಗೃತಿ ಮೂಡಿಸಲು ಕಾರಿಂಜ ರಥಬೀದಿಯಲ್ಲಿ ನಿನ್ನೆ ಸಂಜೆ ಹಮ್ಮಿಕೊಂಡ ‘ರುದ್ರಗಿರಿಯ ರಣ ಕಹಳೆ’ ಜನಜಾಗೃತಿ ಸಭೆಯಲ್ಲಿ ಮಾತನಾಡಿದರು.
ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ. 21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳಪಟ್ಟಿಯನ್ನೇ ಹಿಡಿಯುತ್ತೇವೆ.
ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು, ಹೊರಗೆ ಹೋಗು ಎಂದು ಜಗದೀಶ್ ಕಾರಂತ ಏಕವಚನದಲ್ಲೇ ಜಿಲ್ಲಾಧಿಕಾರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಕ್ರಮ ಗಣಿಗಾರಿಕೆಯನ್ನು 24 ಗಂಟೆಯೊಳಗೆ ನಿಲ್ಲಿಸುವ ಅಧಿಕಾರ ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಜಿಲ್ಲಾಧಿಕಾರಿಗೆ ಇದೆ.
ಗಣಿಗಾರಿಕೆ ನಿಲ್ಲಿಸಲು ಅಸಾಧ್ಯವಾದರೆ ರಾಜೀನಾಮೆ ನೀಡಿ ಮನೆಗೆ ಹೋಗು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೂ ತಾಕೀತು ಮಾಡಿದ ಜಗದೀಶ್ ಕಾರಂತ, ಅಕ್ರಮ ಗಣಿಗಾರಿಕೆ ಮಾಡಿ ಒಂದೇ ಒಂದು ವಾಹನ ರಸ್ತೆಗೆ ಇಳಿಯಲು ನಾವು ಬಿಡುವುದಿಲ್ಲ.
ಆಕಸ್ಮಾತ್ ವಾಹನ ರಸ್ತೆಗೆ ಇಳಿದರೆ ಅದರ ಡ್ರೈವರ್ ಜೀವಂತವಾಗಿ ಹೋಗುವುದಿಲ್ಲ ಎಂದು ಗುಡುಗಿದರು.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!
ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್ ರಸ್ಮಾ (18) ಮತ್ತು ಮಹಮ್ಮದ್ ಸಿನಾನ್ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
BANTWAL
Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!
ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.
ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.