Tuesday, October 19, 2021

ದ.ಕ. ದಲ್ಲಿ ಧಾರ್ಮಿಕ ಕಟ್ಟಡ ತೆರವಿಗೆ ಲಿಸ್ಟ್ ರೆಡಿ: 667 ದೇವಸ್ಥಾನ, 186 ಮಸೀದಿ, 56 ಚರ್ಚ್‌

ಮಂಗಳೂರು: ಸುಪ್ರೀಂ ಕೋರ್ಟ್‌ ಆದೇಶ ಹಿನ್ನೆಲೆ ದಕ್ಷಿಣ ಕನ್ನಡದಲ್ಲೂ ಧಾರ್ಮಿಕ ಕಟ್ಟಡ ತೆರವಿಗೆ ಲಿಸ್ಟ್ ರೆಡಿಯಾಗಿದ್ದು, ಮಂಗಳೂರಿನ ಶಕ್ತಿನಗರದಲ್ಲಿರುವ 700 ವರ್ಷಗಳ ಹಿಂದಿನ‌ ದೈವಸ್ಥಾನವೂ ತೆರವುಗೊಳಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಆಡಳಿತ ಮಂಡಳಿಗೆ ಇನ್ನೂ ಮಾಹಿತಿ ಇಲ್ಲ ಎನ್ನಲಾಗುತ್ತಿದೆ.


ಸದ್ಯ ಜಿಲ್ಲೆಯಲ್ಲಿ 667-ದೇವಸ್ಥಾನಗಳು, 186 ಮಸೀದಿಗಳು ಹಾಗೂ 56 ಚರ್ಚ್‌ಗಳನ್ನು, 11 ಧಾರ್ಮಿಕ ಕಟ್ಟಡಗಳು ಅನಧಿಕೃತ ಕಟ್ಟಡ ಎಂದು ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ 2009 ರ ಹಿಂದಿನ ಅನಧಿಕೃತ ಕಟ್ಟಡಗಳ ಮಾಹಿತಿಯನ್ನು ಜಿಲ್ಲಾಡಳಿತ ಸರ್ವೆ ಮೂಲಕ ಕ್ರೋಢೀಕರಿಸಿದ್ದು,

ಒಟ್ಟು 902 ಅನಧಿಕೃತ ಧಾರ್ಮಿಕ ಕಟ್ಟಡಗಳು ಎಂದು ಗುರುತಿಸಲಾಗಿದೆ. ಇದರಲ್ಲಿ ಸುಮಾರು 400 ಕಟ್ಟಡಗಳು ರೆಗ್ಯುಲೈಸ್ಡ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕೆಲ ದಿನಗಳ ಹಿಂದೆ ಮೈಸೂರು ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡ ತೆರವು ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ರಾಜಕೀಯ ಬಣ್ಣ ಪಡೆದು ರಾಜಕೀಯ ಕೆಸರೆರಚಾಟ ನಡೆಯುತ್ತಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...