Connect with us

DAKSHINA KANNADA

ಅಕ್ರಮವಾಗಿ ಸಾಗಿಸುತ್ತಿದ್ದ 130 ಕೆ.ಜಿ. ಗಾಂಜಾ ವಶಕ್ಕೆ ಪಡೆದುಕೊಂಡ ಮಂಗಳೂರು CCB ಪೊಲೀಸರು-ಇಬ್ಬರು ಅರೆಸ್ಟ್

Published

on

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್‌ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್‌ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡು ಇಬ್ಭರು ಆರೋಪಿಗಳನ್ನು ಬಂಧಿಸಿದ್ದಾರೆ.


ಬಂಟ್ವಾಳ ತಾಲೂಕು ನರಿಂಗಾನದ ತೌಡುಗೋಳಿ ಕ್ರಾಸ್‌ ನಿವಾಸಿ 30 ವರ್ಷ ಪ್ರಾಯದ ರಮೀಝ್‌ ರಾಝ್‌ ಮತ್ತು ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರದ ಮೀಯಪದವು ಮದಂಗಲ್‌ ಕಟ್ಟೆಯ ನಿವಾಸಿ ಅಬ್ಬುಲ್‌ ಕಾದರ್‌ ಹ್ಯಾರಿಸ್‌ (31) ಬಂಧಿತ ಆರೋಪಿಗಳು.

ನಿನ್ನೆ ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಪೊಲೀಸ್‌ ತಂಡ ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಪತ್ತೆ ಹಚ್ಚಿ ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅದರಲ್ಲಿ 130 ಕಿಲೋ ಗ್ರಾಮ್‌ ಗಾಂಜಾ ಪತ್ತೆಯಾಗಿದೆ.


ಅರೋಪಿಗಳಿಂದ 2 ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು ಹಾಗೂ ನಗದು 2180 ರೂಪಾಯಿ ವಶ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಕಾರು, ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ 39,15,000 ರೂಪಾಯಿ ಆಗಿರುತ್ತದೆ. ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು.

ಈ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಇರಿಸಿದ್ದರು.

ಈ ಕುರಿತು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ರಮೀಝ್ ರಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು 3 ಪ್ರಕರಣ, ಮಾತ್ರವಲ್ಲದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಂದು ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತವೆ.

ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

LATEST NEWS

Trending