BANTWAL
ವಿಟ್ಲದಲ್ಲಿ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಅಕ್ರಮ ಗೋಮಾಂಸ-ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ರೂ ಎಸ್ಕೇಪ್ ಆದ ಅಬೂಬಕ್ಕರ್…!
ವಿಟ್ಲ: ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮಾಂಸ ಹಾಗೂ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.
ವಿಟ್ಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜ್ ಹೆಚ್.ಇ ರವರ ಆದೇಶದ ಮೇರೆಗೆ ಸಬ್ ಇನ್ಸ್ಪೆಕ್ಟರ್ ಸಂದೀಪ್ ಶೆಟ್ಟಿ ದಾಳಿ ನಡೆಸಿದ್ದು, ಸುಮಾರು 20 ಕೆ.ಜಿಯಷ್ಟು ದನದ ಮಾಂಸ ಪತ್ತೆಯಾಗಿದೆ.
ದಾಳಿ ವೇಳೆ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪರಾರಿಯಾದ ಆಟೋ ರಿಕ್ಷಾ ಚಾಲಕನನ್ನು ಸಾಲೆತ್ತೂರು ಐತ್ತಕುಮೇರು ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.
ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸಂದೀಪ್ ಶೆಟ್ಟಿ ಮತ್ತು ಸಿಬ್ಬಂದಿ ವಿಟ್ಲದ ಮೇಗಿನ ಪೇಟೆ ಕಡೆಗೆ ಆಟೋ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ಮಾಡುತ್ತಿದ್ದರು.
ಸಾಲೆತ್ತೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ರಿಕ್ಷಾವನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ ಅದರ ಚಾಲಕ ಆಟೋ ರಿಕ್ಷಾವನ್ನು ನಿಲ್ಲಿಸಿ ರಿಕ್ಷಾದಿಂದ ಇಳಿದು ಓಡಿ ಹೋಗಿದ್ದು, ಆಟೋ ರಿಕ್ಷಾವನ್ನು ಪರಿಶೀಲಿಸಿದಾಗ ಅದರ ಚಾಲಕನ ಸೀಟಿನ ಅಡಿ ಭಾಗದಲ್ಲಿ ನೋಡಿದಾಗ ಪ್ಲಾಸ್ಟಿಕ್ ತೊಟ್ಟೆಯಲ್ಲಿ ಒಟ್ಟು 20 ಕೆ.ಜಿ.ಯಷ್ಟು ದನದ ಹಸಿ ಮಾಂಸ ಕಂಡು ಬಂದಿದೆ.
ಒಟ್ಟು 2500 ಮೌಲ್ಯದ ಮಾಂಸ ಹಾಗೂ 50,000 ರೂ. ಮೌಲ್ಯದ ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!