Connect with us

    DAKSHINA KANNADA

    ನಾಳೆಯಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ, IMD ಎಚ್ಚರಿಕೆ !

    Published

    on

    ರಾಜ್ಯದಲ್ಲಿ ಮತ್ತೆ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆಯಲಿದೆ. ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಶುರುವಾಗಿ ವಾರಾಂತ್ಯದವರೆಗೆ ಉತ್ತರ ಒಳನಾಡು ಪ್ರದೇಶ ಹೊರತುಪಡಿಸಿ ಉಳಿದೆಡೆ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಲಾಗಿದೆ.

    ಇಂದು ಗುರುವಾರ ಮತ್ತು ಶುಕ್ರವಾರ ಅವಳಿ ನಗರಗಳಾದ ದಕ್ಷಿಣ ಕನ್ನಡ – ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಹಲವೆಡೆ ಭಾರಿ ವರ್ಷಧಾರೆಯಾಗಲಿದೆ ಎನ್ನಲಾಗಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗಲಿದೆ. ರಾಷ್ಟ್ರ ರಾಜಧಾನಿ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

    DAKSHINA KANNADA

    ಛೀ! ಎಂಥ ಹೇಯ ಕೃ*ತ್ಯ; ಜೀವಂತ ಸಾಕು ನಾಯಿಯನ್ನು ಕಸ ವಿಲೇವಾರಿ ವಾಹನಕ್ಕೆ ತುಂಬಿಸಿದ ಮಾಲಕ

    Published

    on

    ಮಂಗಳೂರು : ಮನೆಯಲ್ಲಿ ಪ್ರಾಣಿ, ಪಕ್ಷಿಗಳನ್ನು ಸಾಕುವುದನ್ನು ಹಲವರು ಇಷ್ಟ ಪಡುತ್ತಾರೆ. ಹೆಚ್ಚಿನವರ ಮನೆಯಲ್ಲಿ ನಾಯಿ, ಬೆಕ್ಕುಗಳನ್ನು ಸಾಕುವುದನ್ನು ಕಾಣುತ್ತೇವೆ. ತಮ್ಮ ಮಕ್ಕಳಂತೆ ಅವುಗಳನ್ನು ಮುದ್ದು ಮಾಡುತ್ತಾರೆ. ಆದ್ರೆ, ಇಲ್ಲಿ ಮಾತ್ರ ಆಗಿರೋದು ಬೇರೆ.

    ಹೌದು, ಜೀವಂತ ಸಾಕು ನಾಯಿಯನ್ನು ಮನೆ ಮಾಲಕರು ಪಾಲಿಕೆಯ ಕಸ ವಿಲೇವಾರಿ ಮಾಡುವ ವಾಹನಕ್ಕೆ ಕೊಟ್ಟ ಹೇಯ ಕೃ*ತ್ಯ ಮಂಗಳೂರಿನ ಡೊಂಗರಕೇರಿಯಲ್ಲಿ ನಡೆದಿದೆ. ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಿದ್ದ ಹೆಣ್ಣು ಶ್ವಾನವನ್ನು ನಗರದ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿ ನಗರದ ಹೊರವಲಯದ ವಾಮಾಂಜೂರು ಡಂಪಿಂಗ್ ಯಾರ್ಡ್ ಬಳಿ ಬಿಡಲಾಗಿದೆ.

    ಇದನ್ನೂ ಓದಿ : ಮಕ್ಕಳಿಗೆ ಹಣ್ಣು ಕೊಡುವಾಗ ಎಚ್ಚರ! ರಂಬುಟಾನ್ ಹಣ್ಣು ಗಂಟಲಲ್ಲಿ ಸಿಲುಕಿ ಬಾಲಕಿ ಸಾ*ವು

    ಘಟನೆಯ ವಿಡೀಯೋ ಸಿಟಿ ಟಿವಿಯಲ್ಲಿ ದಾಖಲಾಗಿದೆ. ಜೊತೆಗೆ ಸಾರ್ವಜನಿಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.  ಈ ಅಮಾನವೀಯ ಘಟನೆಗೆ ಪ್ರಾಣಿ ಪ್ರಿಯರು ಹಾಗೂ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

     

    Continue Reading

    DAKSHINA KANNADA

    ಪುತ್ತೂರು ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಜಾನ್ಸನ್‌ ಡಿ ಸೋಜ ಅಧಿಕಾರ ಸ್ವೀಕಾರ

    Published

    on

    ಪುತ್ತೂರು: ಪುತ್ತೂರು ನಗರ ಪೊಲೀಸ್‌ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್‌ ಆಗಿ ಜಾನ್ಸನ್ ಡಿ ಸೋಜ ಅವರು ಸೆ.9ರಂದು ಅಧಿಕಾರ ಸ್ವೀಕರಿಸಿದರು.

    ಚಿಕ್ಕಮಗಳೂರು ಹೋಮ್‌ಸ್ಟೇಗಳಿಗೆ ಅರಣ್ಯ ಇಲಾಖೆಯಿಂದ ನೋಟೀಸ್..!

    ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅಲ್ಲಿಂದ ವರ್ಗಾವಣೆಗೊಂಡು ಪುತ್ತೂರು ನಗರ ಪೊಲೀಸ್ ಠಾಣಾ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರವಾರ, ಭಟ್ಕಳ, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಸೆವೆ ಸಲ್ಲಿಸಿದ್ದರು.

    Continue Reading

    BELTHANGADY

    ಓವರ್‌ಟೆಕ್‌ ಭರದಲ್ಲಿ ಎರಡು ಕಾರು, ಲಾರಿ ಮಧ್ಯೆ ಅಪಘಾ*ತ; ಓರ್ವ ಸ್ಥಳದಲ್ಲೇ ಮೃ*ತ್ಯು

    Published

    on

    ಸಕಲೇಶಪುರ: ಎರಡು ಕಾರುಗಳು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್‌ ವ್ಯಾಪ್ತಿಯ ಕೆಂಪುಹೊಳೆ ಬಳಿ ಸಂಭವಿಸಿದೆ.

    ಹಾಸನ ತಾಲೂಕಿನ ಕಟ್ಟಾಯ ಸಮೀಪದ ನಾಯಕರಹಳ್ಳಿ ಚಂದ್ರೇಗೌಡ(50 ವ) ಮೃತಪಟ್ಟವರು. ಕಾರಿನಲ್ಲಿದ್ದ ಶೈಲಾ ಹಾಗೂ ಕಿರಣ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಓವರ್‌ಟೇಕ್‌ ಭರದಲ್ಲಿ ಕಾರುಗಳ ಮಧ್ಯೆ ಭೀ*ಕರ ಅಫಘಾ*ತ; 6 ಮಂದಿ ದುರ್ಮರ*ಣ

    ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರುಗಳು ಒಂದನ್ನೊಂದು ಓವರ್‌ಟೆಕ್‌ ಮಾಡುವ ಭರದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರಕು ತುಂಬಿದ ಲಾರಿಗೆ ಕೆಂಪುಹೊಳೆ ತಿರುವಿನಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಪ್ರಪಾತಕ್ಕೆ ಬೀಳುವುದು ಕೂದಲೆಳೆಯಲ್ಲಿ ತಪ್ಪಿಹೋಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಶರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಪಘಾತದಿಂದ ಗಾಯಗೊಂಡವರನ್ನು ಸಕಲೇಶಪುರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕತ್ಸೆಗಾಗಿ ಹಾಸನಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending