Thursday, October 21, 2021

ಮೂಡಬಿದಿರೆ: ಮುಸ್ಲಿಂ ದಂಪತಿ ಜೊತೆ ಕಾರಿನಲ್ಲಿ ಹಿಂದೂ ಮಹಿಳೆಯರು ಪ್ರಯಾಣಿಸಿದ್ದಕ್ಕೆ ಹಲ್ಲೆ- ಇಬ್ಬರ ಬಂಧನ

ಮಂಗಳೂರು: ಮೂಡುಬಿದಿರೆಯಲ್ಲಿ ಮುಸ್ಲಿಂ ಪುರುಷ ಹಾಗೂ ಆತನ ಪತ್ನಿಯೊಂದಿಗೆ ಇಬ್ಬರು ಹಿಂದೂ ಮಹಿಳೆಯರು ಕಾರಿನಲ್ಲಿ ಪ್ರಯಾಣಿಸಿದ್ದನ್ನು ಪ್ರಶ್ನಿಸಿದ ಸಂಘಟನೆಯ ಕಾರ್ಯಕರ್ತರು ಹಲ್ಲೆಗೈದು ಅನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಿನ್ನೆ ನಡೆದಿದೆ

ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಜಾಲ ಬೀಸಲಾಗಿದೆ.

ಸಂಹಿತ್ ರಾಜ್ ಮತ್ತು ಸಂದೀಪ್ ಪೂಜಾರಿ ಬಂಧಿತರು. ಉಡುಪಿಯ ಕಾರ್ಕಳ ಮೂಲದ ಇಬ್ಬರುಮಹಿಳೆಯರು ಭಿನ್ನ ಕೋಮಿನ ದಂಪತಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ.

ನಿನ್ನೆ ಮಧ್ಯಾಹ್ನದ ವೇಳೆಗೆ ಮಹಿಳೆ ತನ್ನ ಸ್ನೇಹಿತೆಯೊಂದಿಗೆ ಸ್ಕೂಟರ್‌ನಲ್ಲಿ ಮನೆಯಿಂದ ಮೂಡುಬಿದಿರೆಯ ಹನುಮಾನ್ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿದ್ದರು.

ಮಾರ್ಗಮಧ್ಯೆ ಸಾಣೂರು ಎಂಬಲ್ಲಿ ಕಾರಿನಲ್ಲಿ ಬರುತ್ತಿದ್ದ ಪರಿಚಯದ ಭಿನ್ನ ಕೋಮಿನ ದಂಪತಿ ಭೇಟಿಯಾಗಿದ್ದಾರೆ. ಬಳಿಕ ಇಬ್ಬರು ಮಹಿಳೆಯರು ಆ ಕಾರಿನಲ್ಲಿ ಕುಳಿತುಕೊಂಡು ಮೂಡುಬಿದಿರೆಯತ್ತ ಪ್ರಯಾಣಿಸುತ್ತಿದ್ದರು.

ಕಾರು ಕೆಸರುಗದ್ದೆ ಎಂಬಲ್ಲಿ ತಲುಪುತ್ತಿದ್ದಂತೆ ಎರಡು ಮೂರು ಬೈಕ್‌ಗಳಲ್ಲಿ ಬಂದ ಆರ ರಿಂದ ಎಂಟು ಮಂದಿ ಕಾರ್ಯಕರ್ತರು ಕಾರಿಗೆ ಅಡ್ಡ ಹಾಕಿ ನಿಲ್ಲಿಸಿದ್ದಾರೆ. ಈವೇಳೆ ಆ ಆರು ಜನ ಇಬ್ಬರು ಮಹಿಳೆಯರ ಮೈಗೆ ಕೈ ಹಾಕಿ ಕಾರಿನಿಂದ ಹೊರಗೆಳೆದಿದ್ದಾರೆ. ಈ ವೇಳೆ ಮೊಬೈಲ್‌ನಿಂದ ಫೋಟೋ ಹಾಗೂ ವೀಡಿಯೋ ಮಾಡಿ ಮಾನ ಹಾನಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 354 (ಹ) 153 ಎ (ಧಾರ್ಮಿಕ ಹಕ್ಕುಗಳ ಉಲ್ಲಂಘನೆ), 504 (ನಿಂದನೆ), 506 (ಕೊಲೆ ಬೆದರಿಕೆ) ಸೆಕ್ಷನ್‌ಗಳ ಅಡಿಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳ ಶೋಧ ಮುಂದುವರಿದಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...