Connect with us

    DAKSHINA KANNADA

    ವಾರದ ಪ್ರತೀ ಗುರುವಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗ ನಿರೋಧಕ ಚುಚ್ಚು ಮದ್ದು-ಮೇಯರ್ ಪ್ರೇಮಾನಂದ..!

    Published

    on

    ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಹಿಂದಿನಂತೆ ಪ್ರತಿ ಗುರುವಾರ ಮಕ್ಕಳಿಗಾಗಿ ತಮ್ಮ ತಮ್ಮ ವಯಸ್ಸಿಗೆ ಅನುಗುಣವಾಗಿ ನೀಡಲಾಗುತ್ತಿದ್ದ ವಿವಿಧ ರೀತಿಯ ರೋಗ ನಿರೋಧಕ ಚುಚ್ಚು ಮದ್ದನ್ನು ಇನ್ನು ಮುಂದಕ್ಕೂ ಕೂಡ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಾರದಪ್ರತೀ ಗುರುವಾರದಂದು ನೀಡಲಾಗುತ್ತದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ  ತಿಳಿಸಿದ್ದಾರೆ.ಪಾಲಿಕೆ ವ್ಯಾಪ್ತಿಯ ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರದಂದು ಭೇಟಿ ನೀಡಿದ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ರೋಗ ನಿರೋಧಕ ಚುಚ್ಚುಮದ್ದನ್ನು ಹಾಕಿಸಲು ಬರುವ ಹೆತ್ತವರು ಮತ್ತು ಪೋಷಕರುಗಳಿಗೆ ಅನುಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಬೇಕು.

    ಪ್ರಸ್ತುತ ಕೆಲವೊಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋರೊನಾ ವ್ಯಾಕ್ಸಿನ್ ನೀಡುವಿಕೆಗೆ ಸ್ಥಳವಕಾಶ ಸಾಕಾಗದೇ ಲಸಿಕೆ ಕೇಂದ್ರಕ್ಕಾಗಿ ಪಯಾ೯ಯ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.

    ಹಾಗೂ ಆರೋಗ್ಯ ಕೇಂದ್ರದಲ್ಲಿ ಕೋರೊನಾ ಲಸಿಕೆ ನೀಡುತ್ತಿದ್ದರೆ ಮತ್ತು ಕೋರೊನಾ ಪರಿಕ್ಷೆಯನ್ನು ನಡೆಸುತ್ತಿದ್ದರೆ ಪ್ರತ್ಯೇಕ ಯಾ ವಿಭಿನ್ನ ಸ್ಥಳವನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಇದರೊಂದಿಗೆ ಮಕ್ಕಳಿಗೆ ರೋಗ ನಿರೋಧಕ ಚುಚ್ಚು ಮದ್ದನ್ನು ಪಡೆಯಲು ಬರುವ ಸಾವ೯ಜನಿಕರಿಗೆ ಸೂಕ್ತ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ವ್ಯವಸ್ಥೆ ಮತ್ತು ಸ್ಯಾನಿಟೈಸರ್ ಅನ್ನು ಒದಗಿಸಬೇಕು.

    ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸೆಷನ್ ಗೆ ಒಳಪಡಿಸಿ ಶುಚಿತ್ವದಿಂದಿರಿಸಿ, ಬರುವ ಹೆತ್ತವರಿಗೆ ಯಾ ಪೋಷಕರಿಗೆ ಯಾವುದೇ ರೀತಿಯ ಅಡಚಣೆ ಬಾರದಂತೆ ವ್ಯವಸ್ಥೆ ಮಾಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಿಗೆ ತಿಳಿಸಿದರು.

    ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಮೂರು ಸೌಲಭ್ಯವನ್ನು ಸಾವ೯ಜನಿಕರಿಗೆ ನೀಡುವಾಗ ಯಾವುದೇ ರೀತಿಯ ಲೋಪ ದೋಷಗಳು ಬಾರದಂತೆ ಕ್ರಮ ವಹಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ ಮತ್ತು ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ| ವಿದ್ಯಾ ಉಪಸ್ಥಿತರಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending