Connect with us

DAKSHINA KANNADA

ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕನ ಬಗ್ಗೆ ಸಿಸಿಟಿವಿಯಲ್ಲಿ ಸಿಕ್ತು ಮಹತ್ವದ ಸಾಕ್ಷಿ..!!

Published

on

ಕಡಬ: ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ಸೋಮವಾರ ಬೆಳಿಗ್ಗೆ ನಡೆದ ಆ್ಯಸಿಡ್ ದಾಳಿಯು ಆರೋಪಿಯ ಚಲನವಲನ ಬೇಕರಿ ಸಿಸಿ ಟಿವಿಯಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿದೆ.

ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಬಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದು, ನಂತರ ಕಡಬಕ್ಕೆ ಬಂದಿದ್ದಾನೆ. ಕಡಬದಲ್ಲಿನ ಬೇಕರಿಯೊಂದರಲ್ಲಿ ಬ್ಯಾಗ್ ಇಟ್ಟು ಮೊಬೈಲ್ ಚಾರ್ಜ್ ಹಾಕಿದ್ದಾನೆ. ಬಳಿಕ ಬ್ಯಾಗ್ ನಿಂದ ಬಾಟಲಿ ತೆಗೆದು ಜೇಬಿಗಿಳಿಸಿ ಬ್ಯಾಗ್ ಬಿಟ್ಟು ಹೋಗಿದ್ದಾನೆ.

ಅಭಿನ್‌ ಕೇರಳದ ಮಲಪ್ಪುರಂ ಜಿಲ್ಲೆಯ ನಿಲಂಬೂರು ತಾಲೂಕು ನಿವಾಸಿಯು ಭಾನುವಾರ ಮಧ್ಯಾಹ್ನ ರೈಲಿನ ಮೂಲಕ ನಿಲಂಬೂರಿನಿಂದ ಹೊರಟು ರಾತ್ರಿ ವೇಳೆ ಮಂಗಳೂರು ರೈಲು ನಿಲ್ದಾಣ ತಲುಪಿದ್ದ. ಅಲ್ಲಿಯೇ ಬೆಳಿಗ್ಗೆಯವರೆಗೆ ಕಾಲ ಕಳೆದ ಬಳಿಕ ಆತ ಮಂಗಳೂರಿನಿಂದ ಬಸ್ಸು ಹಿಡಿದು ಕಡಬಕ್ಕೆ ಆಗಮಿಸಿದ್ದಾನೆ ಎನ್ನಲಾಗಿದೆ. ಅಬಿನ್ ಕಾಲೇಜ್‌ ಪ್ರವೇಶಿಸುವುದಕ್ಕೆ ಮುಂಚೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಸಮವಸ್ತ್ರವನ್ನು ಹೋಲುವ ಬಿಳಿ ಅಂಗಿ, ನೀಲಿ ಪ್ಯಾಂಟ್ ಧರಿಸಿಕೊಂಡು ಶಾಲಾ ಆವರಣ ಪ್ರವೇಶಿಸಿದ್ದಾನೆ. ಇದಕ್ಕೆ ಮುಂಚೆ ಈತ ಕಡಬದ ಕೆಳಗಿನ ಬಸ್‌ ನಿಲ್ದಾಣದ ಬಳಿ ಬೇಕರಿಗೂ ಕಪ್ಪು ಫ್ಯಾಂಟ್‌ ಹಾಗೂ ಕಪ್ಪು ಅಂಗಿ ಧರಿಸಿ ಬಂದಿರುವುದು ಸಿಸಿಟಿವಿಯಿಂದ ಸಾಭೀತಾಗಿದೆ. ಬೇಕರಿಗೆ ಆತ ಬೆಳಗ್ಗಿನ ಜಾವ 8 ಗಂಟೆ ಸುಮಾರಿಗೆ ಬಂದಿದ್ದಾನೆ. ಬೇಕರಿಯಿಂದ ತೆರಳಿದ ನಂತರದಲ್ಲಿ ಆತ ಈ ಕಪ್ಪು ಬಣ್ಣದ ಬಟ್ಟೆಯನ್ನು ತಹಶಿಲ್ದಾರ್ ಕಚೇರಿ ಸಮೀಪದಲ್ಲಿರುವ ಕಟ್ಟಡವೊಂದರಲ್ಲಿ ಬದಲಾಯಿಸಿರುವ ಸಾದ್ಯತೆ ಇದೆ. ಈ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯು ಬಳಿಕ ಕಡಬ ಪೇಟೆಯ ಅಂಗಡಿಯೊಂದರಿಂದಲೇ ಆ್ಯಸಿಡ್ ಖರೀದಿಸಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಸಮಯದಲ್ಲಿ ಕಡಬದಲ್ಲಿ ಯಾವುದೇ ಆಸಿಡ್ ಅಂಗಡಿಗಳು ಓಪನ್ ಆಗಲ್ಲ ಎಂದು ತಿಳಿದು ಬಂದಿದೆ. ಹಾಗಾದರೆ ಹಿಂದಿನ ದಿನವೇ ಆತ ಕಡಬಕ್ಕೆ ಬಂದಿದ್ದನೇ ಎಂಬ ಅನುಮಾನವೂ ಕಾಡಿದೆ. ಹೀಗಾಗಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಹಾಲ್‌ ಗೆ ತೆರಳುವ ಕೊನೆ ಕ್ಷಣವನ್ನೆ ಕೃತ್ಯಕ್ಕೆ ಆಯ್ಕೆ:

ವಿದ್ಯಾರ್ಥಿಗಳೆಲ್ಲರೂ ಪರೀಕ್ಷಾ ಹಾಲ್‌‌ಗೆ ತೆರಳುವ ತರಾತುರಿಯಲ್ಲಿರುವುದರಿಂದ ಹಾಗೂ ಶಿಕ್ಷಕರು ಪರೀಕ್ಷೆಗೆ ಕೊನೆ ಕ್ಷಣದ ತಯಾರಿಯಲ್ಲಿ ಮಗ್ನವಾಗಿರುವುದರಿಂದ ಕೃತ್ಯ ಎಸಗಿ ಪರಾರಿಯಾಗಬಹುದು ಎಂಬ ಹವಣಿಕೆಯಲ್ಲಿ ಈತ ಇದಕ್ಕಾಗಿಯೇ ಹಾಲ್‌‌ಗೆ ತೆರಳುವ ಕೊನೆ ಕ್ಷಣವನ್ನೆ ಕೃತ್ಯಕ್ಕೆ ಆಯ್ಕೆ ಮಾಡಿದ್ದ. ಆದರೇ ಇಲ್ಲಿ ಮಾತ್ರ ಲೆಕ್ಕಾಚಾರ ವಿಫಲವಾಗಿದೆ.
ಸಂತ್ರಸ್ತ ವಿದ್ಯಾರ್ಥಿನಿಯರು ಕಲಿಯುತ್ತಿದ್ದ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ. 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷದ ಅಂತಿಮ ಪರೀಕ್ಷೆ ನಡೆಯುತ್ತಿದೆ. ಈ ಕಾಲೇಜು ಸೇರಿದಂತೆ ವಲಯದ ಮೂರು ಕಾಲೇಜಿನ ವಿದ್ಯಾರ್ಥಿಗಳಿಗೆ ಈ ಕಾಲೇಜು ಪ್ರಮುಖ ಪರೀಕ್ಷಾ ಕೇಂದ್ರವಾಗಿತ್ತು. ಹೀಗಾಗಿ ಪರೀಕ್ಷೆ ಸಮಯ ಈ ಕಾಲೇಜಿಗೆ ಉಳಿದ ಕಾಲೇಜ್‌ನ ಇತರ ವಿದ್ಯಾರ್ಥಿಗಳು ಬರುವ ಕಾರಣ ಈತನ ಬಗ್ಗೆ ಯಾರಿಗೂ ಅನುಮಾನ ಉಂಟಾಗಲು ಸಾಧ್ಯವಿಲ್ಲ. ಹೀಗಾಗಿ ಯಾರಿಗೋ ಅನುಮಾನ ಬಾರದಂತೆ ಕೃತ್ಯ ಎಸಗಲು ಈತ ಪರೀಕ್ಷೇ ದಿನವನ್ನೆ ಆಯ್ಕೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.

ಕಡಬದಿಂದಲೇ ಖರೀದಿಸಿದ್ದ ಆ್ಯಸಿಡ್:

ಬೆಳಿಗ್ಗೆ 7.30ರ ಸುಮಾರಿಗೆ ಬಂದಿಳಿದ ಆರೋಪಿಯು ಬಳಿಕ ಕಡಬ ಪೇಟೆಯ ಅಂಗಡಿಯೊಂದರಿಂದಲೇ ಆ್ಯಸಿಡ್ ಖರೀದಿಸಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಸಮಯದಲ್ಲಿ ಕಡಬದಲ್ಲಿ ಯಾವುದೇ ಆಸಿಡ್ ಅಂಗಡಿಗಳು ಓಪನ್ ಆಗಲ್ಲ ಎಂದು ತಿಳಿದು ಬಂದಿದೆ. ಹಾಗಾದರೆ ಹಿಂದಿನ ದಿನವೇ ಈತ ಆಸಿಡ್ ಖರೀದಿಸಿದ್ದನೇ ಎನ್ನುವ ಸಂಶಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು:

ಕಡಬ ತಾಲೂಕಿನ ರೆಂಜಲಾಡಿ ನಿವಾಸಿಯಾಗಿರುವ ಪ್ರದಾನ ಸಂತ್ರಸ್ತೆಯನ್ನು ಕಳೆದ ಎರಡು ವರ್ಷಗಳಿಂದ ಆರೋಪಿ ಪೀತಿಸುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯ ತಾಯಿ ಮೂಲತಃ ಕೇರಳದವರು. ಆರೋಪಿ ಅಬಿನ್ ಕೂಡಾ ಆಕೆಯ ಮನೆಯ ಹತ್ತಿರದ ನಿವಾಸಿ ಎನ್ನಲಾಗುತ್ತಿದ್ದರೂ ಅದು ಸುಳ್ಳು ಎಂಬ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿಯ ಸಂಬಂಧಿಕರು ಆರೋಪಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು. ಅವರ ಮುಖಾಂತರ ಸಂತ್ರಸ್ತ ವಿದ್ಯಾರ್ಥಿನಿಯ ಪರಿಚಯವಾಗಿ ಪ್ರೇಮಕ್ಕೆ ತಿರುಗಿತ್ತು. ಈ ವಿಚಾರ ಯುವತಿಯ ತಾಯಿಗೆ ಗೊತ್ತಾಗಿ ಇದನ್ನು ಆಕ್ಷೇಪಿಸಿದ್ದರು. ಇದೇ ಕಾರಣಕ್ಕೆ ಯುವತಿ ಈತನನ್ನು ಉಪೇಕ್ಷೆ ಮಾಡುತ್ತಿದ್ದಳು ಎಂದು ಹೇಳಲಾಗಿದ್ದು, ಇದರಿಂದ ಕುಪಿತಗೊಂಡು ಆರೋಪಿ ಆಸಿಡ್ ದಾಳಿಯ ಕೃತ್ಯ ನಡೆಸಿದ್ದಾನೆ ಎಂದು ಪೋಲೀಸ್ ಮೂಲದಿಂದ ತಿಳಿದು ಬಂದಿದೆ. ಆದರೆ ಇನ್ನೂ ಹಲವಾರು ಊಹಾಪೋಹಗಳು ಬಾಕಿಯಾಗಿದ್ದು, ಪೊಲೀಸರ ತನಿಖೆಯಿಂದ ಹಲವು ವಿಚಾರಗಳು ಬೆಳಕಿಗೆ ಬರಲಿವೆ..

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

LATEST NEWS

Trending